ಜಿಲ್ಲಾ ಸುದ್ದಿಗಳು ಪ್ರಮುಖ

ದ.ಕ. ಲಾಕ್‌ಡೌನ್: ನಾಳೆ ಸಿಎಂ ಜತೆ ಚರ್ಚಿಸಿ ತೀರ್ಮಾನ- ಉಸ್ತುವಾರಿ ಸಚಿವರ ಸ್ಪಷ್ಟನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಗೆ ತರುವ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟ ಪಡಿಸಿದ್ದಾರೆ.

ಜಿಲ್ಲೆಯ ಕೋವಿಡ್ ಪರಿಸ್ಥಿತಿ ಅಧ್ಯಯನ ಮಾಡಲು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಹಾಗೂ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ಸಭೆಯಲ್ಲಿ ಲಾಕ್ ಡೌನ್ ಕುರಿತು ಯಾವುದೇ ತೀರ್ಮಾನ ಕೈಗೊಂಡಿಲ್ಲ.

ಸೋಮವಾರ ಬೆಳಗ್ಗೆ 11 ಗಂಟೆಗೆ ಜಿಲ್ಲೆಯ ಪರಿಸ್ಥಿತಿ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ತಾನು, ಲೋಕಸಭಾ ಸದಸ್ಯರು ಹಾಗೂ ಜಿಲ್ಲಾಧಿಕಾರಿಗಳು ವೀಡಿಯೋ ಕಾನ್ಫರೆನ್ಸ್ ಸಭೆ ನಡೆಸಲಿದದ್ದು, ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಜಿಲ್ಲೆಯ ಅಲ್ಲಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಲಾಕ್ ಡೌನ್ ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ಜನರಿಗೆ ತೊಂದರೆ ಆಗುವ ಯಾವುದೇ ನಿರ್ಧಾರವನ್ನು ಧಿಡೀರನೇ ಜಾರಿಗೆ ತರುವುದಿಲ್ಲ. ಜನರು ಗೊಂದಲಕ್ಕೀಡಾಗಬಾರದು. ಯಾವುದೇ ತೀರ್ಮಾನವನ್ನು ನಾಳೆಯ ಸಭೆಯಲ್ಲಿ ಮುಖ್ಯಮಂತ್ರಿಗಳ ಸಲಹೆ ಸೂಚನೆಯಂತೆ ಅನುಸರಿಸಲಾಗುವುದು ಎಂದು ಸಚಿವ ಕೋಟ ಸ್ಪಷ್ಟಪಡಿಸಿದ್ದಾರೆ.

 

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

 

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್  App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Related posts

ನಾಳೆಯಿಂದ ರಾಜ್ಯದಲ್ಲಿ ಬಸ್‌ ಸಂಚಾರ ಶುರು: ಗರಿಷ್ಠ 30 ಪ್ರಯಾಣಿಕರ ಮಿತಿ

Upayuktha

ಕಾಶ್ಮೀರಿ ಪಂಡಿತರು ನಿರಾಶ್ರಿತರಾಗಿ ಇಂದಿಗೆ 30 ವರ್ಷ: ಮನೆಗೆ ಮರಳುವ ಕನಸಿಗೆ ಕಾವು

Upayuktha

ಮಾಳ–ಕುದುರೆಮುಖ ರಾಷ್ಟ್ರೀಯ ಹೆದ್ದಾರಿ ಬಂದ್

Harshitha Harish

Leave a Comment