ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆ ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆಯಿತು.
ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.
ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯ ಗಣರಾಜ್ಯೋತ್ಸವ ಆಚರಣೆ ಸರಳವಾಗಿ ನಡೆಯಿತು. ಇದೇ ವೇಳೆ ಪರೇಡ್ ವೀಕ್ಷಣೆ, ಗೌರವ ಸ್ವೀಕಾರ, ನಾಡಗೀತೆ, ಪಥಸಂಚಲನ ನಡೆಯಿತು. ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ಉಪಯುಕ್ತ ನ್ಯೂಸ್ ಸಿಗ್ನಲ್ ಗ್ರೂಪಿಗೆ ಜಾಯಿನ್ ಆಗಲು ಈ ಲಿಂಕ್ ಬಳಸಿ