ಉಪ್ಪಿನಂಗಡಿ : ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಮೈಮುಟ್ಟಿ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು ಬಸ್ ಚಾಲಕ ಮತ್ತು ನಿರ್ವಾಹಕ ಸೇರಿ ಉಪ್ಪಿನಂಗಡಿ ಪೊಲೀಸರ ವಶಕ್ಕೆ ಒಪ್ಪಿಸಿರುವ ಘಟನೆ ನಡೆದಿದೆ.
ಪೊಲೀಸರ ವಶದಲ್ಲಿರುವ ಯುವಕನನ್ನು ಚಿಕ್ಕಮಗಳೂರು ನಿವಾಸಿ ಮೊಹಮ್ಮದ್ ಸೈಫುಲ್ಲಾ ಎಂದು ಗುರುತಿಸಲಾಗಿದೆ. ಆರೋಪಿಯು ಮಂಗಳವಾರ ಬೆಳಗ್ಗೆ ಧರ್ಮಸ್ಥಳದಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿಯ ಬಸ್ನಲ್ಲಿ ವಿದ್ಯಾರ್ಥಿನಿಯ ಮೈಮುಟ್ಟಿ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.
ವಿದ್ಯಾರ್ಥಿನಿಯು ಬಸ್ ಚಾಲಕ, ನಿರ್ವಾಹಕರಲ್ಲಿ ಈ ವಿಚಾರ ತಿಳಿಸಿದ್ದು, ತಕ್ಷಣವೇ ಚಾಲಕ ಬಸ್ನ ಉಪ್ಪಿನಂಗಡಿ ಪೊಲೀಸ್ ಠಾಣೆಯ ಹತ್ತಿರ ನಿಲ್ಲಿಸಿ ಆರೋಪಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.