ಜಿಲ್ಲಾ ಸುದ್ದಿಗಳು ಪ್ರಮುಖ

ದಕ ಜಿಲ್ಲೆಯಲ್ಲಿ ಜು.16ರಿಂದ ಒಂದು ವಾರ ಸಂಪೂರ್ಣ ಲಾಕ್‌ಡೌನ್‌: ಉಸ್ತುವಾರಿ ಸಚಿವರ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರದಿಂದ (ಜುಲೈ 16) ಒಂದು ವಾರ ಕಾಲ ಲಾಕ್‌ಡೌನ್‌ ಜಾರಿಗೊಳಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಘೋಷಿಸಿದ್ದಾರೆ.

ಇಂದು ಬಿಡುಗಡೆ ಮಾಡಿರುವ ವೀಡಿಯೋ ಸಂದೇಶದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರ ಆಶಯದಂತೆ ಲಾಕ್‌ಡೌನ್‌ ಜಾರಿಗೊಳಿಸಬೇಕೆಂಬ ಬೇಡಿಕೆಯನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಜತೆ ಚರ್ಚಿಸಲಾಯಿತು. ಅವರು ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಬಳಿಕ ಸ್ಥಳೀಯ ಅವಶ್ಯಕತೆಗಳಿಗೆ ಅನುಗುಣವಾಗಿ ಜಿಲ್ಲಾಡಳಿತಗಳೇ ಲಾಕ್‌ಡೌನ್‌ ಘೋಷಿಸಬಹುದು ಎಂದು ಅನುಮತಿ ನೀಡಿದರು. ಅದರಂತೆ ಸಾರ್ವಜನಿಕ ಹಿತಾಸಕ್ತಿ ಗಮನಿಸಿ ಲಾಕ್‌ಡೌನ್ ಜಾರಿಮಾಡಲು ನಿರ್ಧರಿಸಲಾಯಿತು ಎಂದು ಸಚಿವರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ದಿನೇ ದಿನೇ ಆತಂಕಕಾರಿಯಾಗಿ ಹೆಚ್ಚುತ್ತಿವೆ. ಸ್ವಲ್ಪ ಮಟ್ಟಿಗಾದರೂ ನಿಯಂತ್ರಿಸಬೇಕಾದರೆ ಕಟ್ಟುನಿಟ್ಟಿನ ಲಾಕ್‌ಡೌನ್‌ ಜಾರಿ ಅನಿವಾರ್ಯ ಎಂದು ತೀರ್ಮಾನಿಸಲಾಯಿತು.

ಲಾಕ್‌ಡೌನ್‌ ಅವಧಿಯ ನಿಯಮಾವಳಿ ಮತ್ತು ಮಾರ್ಗಸೂಚಿಗಳನ್ನು ಬುಧವಾರ ರಾತ್ರಿ 8 ಗಂಟೆಯಿಂದ ಜಾರಿಗೆ ತರಲಾಗುವುದು. ಅವುಗಳನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು ಸಚಿವರು ಹೇಳಿದರು.

ಜನತೆ ಸಾಮಾಜಿಕ ಅಂತರ ಕಾಯ್ದುಕೊಂಡು ಗರಿಷ್ಠ ಮುನ್ನೆಚ್ಚರಿಕೆ ವಹಿಸಬೇಕು ಎಂದು ಅವರು ಮನವಿ ಮಾಡಿದರು. ಸಾರ್ವಜನಿಕರ ಆಶಯದಂತೆಯೇ ಈ ಲಾಕ್‌ಡೌನ್‌ ಜಾರಿಗೆ ತರಲಾಗುತ್ತಿದ್ದು, ಇದಕ್ಕೆ ಎಲ್ಲರೂ ಸಂಪೂರ್ಣ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.

ರಾಜ್ಯದಲ್ಲಿ ಬೆಂಗಳೂರು ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಕೊರೊನಾ ಸೋಂಕು ಪ್ರಣಗಳು ತೀವ್ರಗತಿಯಲ್ಲಿ ಏರುತ್ತಿವೆ. ಬೆಂಗಳೂರಿನಲ್ಲಿ ಈಗಾಗಲೇ ಒಂದು ವಾರದ ಲಾಕ್‌ಡೌನ್‌ ಘೋಷಿಸಲಾಗಿದೆ.

 

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

 

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್  App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

 

Related posts

ಹಿರಿಯ ಲೇಖಕ ಗುಂಡ್ಮಿ ಭಾಸ್ಕರ್ ಮಯ್ಯ ನಿಧನ

Harshitha Harish

ಆಗಸ್ಟ್ 6 ರಿಂದ 13: ತುಳು ಅಕಾಡೆಮಿ ಚಾವಡಿಯಲ್ಲಿ ಪ್ರವಚನ ಸಪ್ತಾಹ

Upayuktha

ಸರ್ಜಿಕಲ್ ದಾಳಿಗಳು ಪಾಕ್‌ಗೆ ಸರಿಯಾದ ಸಂದೇಶ ನೀಡಿವೆ: ಸೇನಾ ಮುಖ್ಯಸ್ಥ ಜ. ಮನೋಜ್ ಮುಕುಂದ್

Upayuktha