ಅಪಘಾತ- ದುರಂತ ರಾಜ್ಯ

ಧಾರವಾಡ: ಕಾರು ಪಲ್ಟಿಯಾಗಿ ಭೀಕರ ಅಪಘಾತ; ಇಬ್ಬರು ಸಾವು

ಧಾರವಾಡ: ಕಾರೊಂದು ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಗರಗ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮುಜಾವಿಲ್ಲಾ ಅದೋನಿ ಹಾಗೂ ಮಹಾಜ ಪಠಾಣ ಮೃತ ದುರ್ದೈವಿಗಳು. ಇವರಿಬ್ಬರೂ ಧಾರವಾಡ ಮೂಲದವರೆಂದು ತಿಳಿದುಬಂದಿದೆ.

ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಕಾರು ಬೆಳಗಾವಿ ಕಡೆಯಿಂದ ಧಾರವಾಡ ಕ್ಕೆ ಬರುತ್ತಿತ್ತು.

ಈ ವೇಳೆ ಧಾರವಾಡ-ಬೆಳಗಾವಿ ರಾಷ್ಟ್ರೀಯ ಹೆದ್ದಾರಿ 4 ರ ಕೊಟೂರ ಗ್ರಾಮ ದ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ.

ಈ ಘಟನೆಯಲ್ಲಿ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನ ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Related posts

ಪುರೋಹಿತರು ಮತ್ತು ಅರ್ಚಕರು ಅಸಂಘಟಿತ ಕಾರ್ಮಿಕರ ವ್ಯಾಪ್ತಿಗೆ: ಕಾರ್ಮಿಕ ಸಚಿವ ಶಿವರಾಮ‌ ಹೆಬ್ಬಾರ್ ಸೂಚನೆ

Upayuktha

ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಕೋವಿಡ್ ಪಾಸಿಟಿವ್

Harshitha Harish

ಕಾರು ಅಪಘಾತ: ತುಳು ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ಅವರಿಗೆ ಗಾಯ

Upayuktha