ಗ್ರಾಮಾಂತರ ಪ್ರಮುಖ ಸ್ಥಳೀಯ

ಸಿರಿ ಗ್ರಾಮೋದ್ಯೋಗ ಸಂಸ್ಥೆ 15ನೇ ಮಾರಾಟ ಮಳಿಗೆ ಶುಭಾರಂಭ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ, ಬೆಳ್ತಂಗಡಿ ಇದರ 15ನೇ ಮಾರಾಟ ಮಳಿಗೆ ಬೆಂಗಳೂರಿನ ಜಿಕೆವಿಕೆ ಕೃಷಿ ವಿಶ್ವ ವಿದ್ಯಾನಿಲಯದ ಆವರಣದಲ್ಲಿ  ಎ.5 ರಂದು ಶುಭಾರಂಭಗೊಂಡಿತು.

ಮಳಿಗೆಯನ್ನು ಕೃಷಿ ವಿಶ್ವ ವಿದ್ಯಾನಿಲಯದ ಉಪ ಕುಲಪತಿ ಡಾ. ಎಸ್. ರಾಜೇಂದ್ರ ಪ್ರಸಾದ್ ಮತ್ತು ಪದ್ಮಿನಿ ಆರ್. ಪ್ರಸಾದ್‌ ದಂಪತಿ ನೂತನ ಮಾರಾಟ ಮಳಿಗೆಯನ್ನು ಉದ್ಘಾಟಿಸಿದರು.

ಇದೇ ವೇಳೆ ಮಾತನಾಡಿದ ಅವರು ಶ್ರೀ ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ,  ಹೇಮಾವತಿ ವಿ ಹೆಗ್ಗಡೆಯವರ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿ ಸಿರಿ ಉತ್ಪನ್ನಗಳ ಬೆಳವಣಿಗೆಗೆ ಸಂಪೂರ್ಣ ಸಹಕರಿಸುವುದಾಗಿ ತಿಳಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕ ರಾಮಸ್ವಾಮಿ, ವಿಶ್ವವಿದ್ಯಾನಿಲಯದ ಉನ್ನತ ಅಧಿಕಾರಿಗಳಾದ ಡಾ. ಬಿ.ಎಲ್. ಚಿದಾನಂದ, ಡಾ. ಸಿ.ಪಿ. ಗ್ರೇಸಿ, ಡಾ. ವೈ.ಜಿ.ಷಡಕ್ಷರಿ, ಡಾ. ಬೈರೇಗೌಡ, ಡಾ. ಧನಪಾಲ್, ಡಾ. ಗಂಗಪ್ಪ ಹಾಗೂ ಕೃಷಿ ವಿಶ್ವ ವಿದ್ಯಾನಿಲಯದ ಆಸ್ತಿ ಅಧಿಕಾರಿಗಳಾದ ಕೃಷ್ಣಮೂರ್ತಿ ಮತ್ತು ಕೃಷಿ ವಿಶ್ವ ವಿದ್ಯಾನಿಲಯದ ಹಣಕಾಸು ನಿಯಂತ್ರಣಾಧಿಕಾರಿನ ಡಾ. ಸುರೇಶ್ ಉಪಸ್ಥಿತರಿದ್ದರು.

ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ  ಕೆ.ಎನ್. ಜನಾರ್ಧನ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಳಿಗೆಗೆ ಕೃಷಿ ವಿಶ್ವ ವಿದ್ಯಾನಿಲಯದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭೇಟಿ ನೀಡಿ ಪ್ರೋತ್ಸಾಹಿಸಿದರು. ಸಂಸ್ಥೆಯ ಸಿಬ್ಬಂದಿಗಳಾದ ಜೀವನ್, ವಸಂತ್, ರವಿ ಹಾಗೂ ಶಿವಪ್ರಸಾದ್ ಉಪಸ್ಥಿತರಿದ್ದು, ಸಹಕರಿಸಿದರು.

Related posts

6 ಕೋಟಿ ಇಪಿಎಫ್‌ಓ ಚಂದಾದಾರರಿಗೆ ಹಬ್ಬದ ಕೊಡುಗೆ: 2018-19ನೇ ಸಾಲಿಗೆ ಶೇ 8.65ರ ಬಡ್ಡಿದರ ನಿಗದಿ

Upayuktha

ಆಳ್ವಾಸ್‌ ಶಾಲೆಗಳಲ್ಲಿ ‘ವಿ ಇನ್‍ಸ್ಪೈರ್’ ಜಾಗೃತಿ ಕಾರ್ಯಕ್ರಮ

Upayuktha

ಸೂಕ್ತ ಮಾರ್ಗದರ್ಶನದೊಂದಿಗೆ ಮುನ್ನಡೆದರೆ ಯಶಸ್ಸು ಸಾಧ್ಯ : ಭವ್ಯ ಪಿ. ಆರ್. ನಿಡ್ಪಳ್ಳಿ

Upayuktha