ಧರ್ಮಸ್ಥಳ: ಎಡನೀರು ಮಠಾಧೀಶ ಪರಮಪೂಜ್ಯ ಶ್ರೀ ಕೇಶವಾನಂದ ಭಾರತಿ ಸ್ವಾಮೀಜಿ ಅವರ ದೇಹಾಂತ್ಯದ ಸುದ್ದಿ ತಿಳಿದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅವರು ಬಿಡುಗಡೆ ಮಾಡಿದ ಪ್ರಕಟಣೆಯ ಪೂರ್ಣಪಾಠ ಇಂತಿದೆ:
ಎಡನೀರು ಮಠದ ಪೂಜ್ಯ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಪರಂಧಾಮ ಹೊಂದಿದ ಸುದ್ದಿ ತಿಳಿದು ವಿಷಾದವಾಯಿತು.
ಪೂಜ್ಯರು ಉತ್ತಮ ವಾಗ್ಮಿ ಹಾಗೂ ಭಾಷಾ ಪ್ರಭುತ್ವವನ್ನು ಹೊಂದಿದ ವಿದ್ವಾಂಸರೂ ಆಗಿದ್ದು ಸಂಗೀತ, ಕಲೆ, ಶಿಕ್ಷಣ ಹಾಗೂ ಸಾಹಿತ್ಯಕ್ಕೆ ವಿಶೇಷ ಪ್ರೋತ್ಸಾಹ ನೀಡಿದ್ದಾರೆ. ಯಕ್ಷಗಾನ ಕಲೆಯಲ್ಲಿ ಅವರು ವಿಶೇಷ ಆಸಕ್ತಿ ಹಾಗೂ ಪರಿಣತಿ ಹೊಂದಿದ್ದು ತಮ್ಮ ಸುಮಧುರ ಕಂಠಸಿರಿಯ ಭಾಗವತಿಕೆಯಿಂದ ಅಪಾರ ಅಭಿಮಾನಿಗಳ ಗೌರವಕ್ಕೆ ಪಾತ್ರರಾಗಿದ್ದರು. ಮೂಲಭೂತ ಹಕ್ಕಿನ ವಿಚಾರವಾಗಿ ಖ್ಯಾತ ಸಂವಿಧಾನ ವಕೀಲರಾದ ಶ್ರೀ ಪಾಲ್ಕಿವಾಲರ ಮೂಲಕ ಹೋರಾಟ ನಡೆಸಿ ಕೇಶವಾನಂದ ಭಾರತೀ ಎಂಬ ಹೆಸರಿನಲ್ಲಿ ಪ್ರಖ್ಯಾತ ತೀರ್ಪನ್ನು ಪಡೆದುಕೊಂಡವರು. ನನ್ನ ದೃಷ್ಠಿಯಲ್ಲಿ ಮಹಾಭಾರತ ಸಾಹಿತ್ಯದಲ್ಲಿ ನಡೆದ ಧರ್ಮದ ಹೋರಾಟದಿಂದ ಪ್ರೇರಣೆಯಾಗಿ ಸನ್ಯಾಸಿಯಾಗಿಯೂ ಹೋರಾಟ ನಡೆಸಿದವರು.
ಅನೇಕ ಸಭೆ-ಸಮಾರಂಭಗಳಲ್ಲಿ ಅವರ ವಿದ್ವತ್ಪೂರ್ಣವಾದ ಪ್ರವಚನಗಳಿಂದ ಸಮಾಜಕ್ಕೆ ಉತ್ತಮ ಮೌಲಿಕ ಸಂದೇಶ ನೀಡಿದ್ದಾರೆ.
ನಮ್ಮ ಕ್ಷೇತ್ರದ ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ನಮ್ಮನ್ನು ಪ್ರೋತ್ಸಾಹಿಸಿದ್ದಾರೆ. ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಗೌರವ ನಮನವನ್ನು ಸಲ್ಲಿಸುತ್ತೇನೆ.
-ಡಿ. ವೀರೇಂದ್ರ ಹೆಗ್ಗಡೆಯವರು
ಎಡನೀರು ಶ್ರೀ ಮಠದ ಉತ್ತರಾಧಿಕಾರಿಯಾಗಿ ಶ್ರೀಶ್ರೀಶ್ರೀ ಸಚ್ಚಿದಾನಂದ ಭಾರತೀ
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಟ್ವಿಟರ್ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ
ಯೂಟ್ಯೂಬ್ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್ App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.