ಕ್ಷೇತ್ರಗಳ ವಿಶೇಷ ಪ್ರಮುಖ ರಾಜ್ಯ

ಇಂದಿನಿಂದ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ಮುಕ್ತ ಅವಕಾಶ

ಧರ್ಮಸ್ಥಳ: ಸರಕಾರದ ಮಾರ್ಗ ಸೂಚಿಯಂತೆ ಹಾಗೂ ಕೊರೊನಾ ವೈರಸ್ ನಿಯಂತ್ರಿಸಲು ಮುಂಜಾಗರೂಕತೆ  ಅನುಸರಿಸಿ ಇಂದಿನಿಂದ ನಾಡಿನ ಪವಿತ್ರ ಕ್ಷೇತ್ರವಾದ ಶ್ರೀ ಕ್ಷೇತ್ರ ದರ್ಮಸ್ಥಳದಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕ್ಷೇತ್ರದ ಪ್ರಕಟನೆ ತಿಳಿಸಿದೆ.

ದೇವರ ದರ್ಶನ ಸಂದರ್ಭದಲ್ಲಿ ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಿದೆ. ದೇವಸ್ಥಾನ ಅರ್ಚಕರು, ರಕ್ಷಣಾ ಸಿಬ್ಬಂದಿಗಳು ಹಾಗೂ ನೌಕರರು ನೀಡುವ ಸಲಹೆ ಸೂಚನೆಗಳನ್ನು ಗಮನಿಸಿ ಭಕ್ತರು ಸಹಕರಿಸಬೇಕು ಎಂದು ಕೋರಲಾಗಿದೆ.

ಡಾ ಹೆಗ್ಗಡೆಯವರ ಭೇಟಿ ಸಮಯ:
ಭಕ್ತರು ಧರ್ಮಾಧಿಕಾರಿಗಳನ್ನು ಬೆಳಿಗ್ಗೆ ಗಂಟೆ 9.30 ರಿಂದ ಮಧ್ಯಾಹ್ನ 12.30 ರ ವರೆಗೆ ಹಾಗೂ ಸಂಜೆ ಗಂಟೆ 4.00 ರಿಂದ 6.30 ರ ವರೆಗೆ ಭೇಟಿಗೆ ಅವಕಾಶವಿದೆ. ಭಕ್ತಾದಿಗಳಿಗೆ ಅನ್ನ ಪ್ರಸಾದ ಸೇವೆಯನ್ನು ಸರಕಾರದ ಮಾರ್ಗಸೂಚಿಯನ್ನು ಅನುಸರಿಸಿ ವ್ಯವಸ್ಥೆ ಮಾಡಲಾಗಿದೆ. ದೇವರ ದರ್ಶನಕ್ಕೆ ಬೆಳಿಗ್ಗೆ 6.30 ರಿಂದ 2.00 ಗಂಟೆ ಸಂಜೆ 5 ರಿಂದ 8 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕ್ಷೇತ್ರದ ಪ್ರಕಟನೆ ತಿಳಿಸಿದೆ.

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಈಗ ಲಭ್ಯ. ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

ಟೆಲಿಗ್ರಾಂ ಬ್ರಾಡ್‌ಕಾಸ್ಟ್‌ ಮೂಲಕ ಉಪಯುಕ್ತ ನ್ಯೂಸ್‌ ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ.

Related posts

ದ.ಕ. ಜಿಲ್ಲೆಯಲ್ಲಿ ನಾಳೆಯೂ ಪೂರ್ಣ ಲಾಕ್ ಡೌನ್; ಉಡುಪಿಯಲ್ಲಿ ಮತ್ತೆರಡು ಕೊರೊನಾ ಪ್ರಕರಣ ದೃಢ

Upayuktha

ಒತ್ತಡಮುಕ್ತ ಕಲಿಕೆಗೆ ಸಂಸ್ಕಾರಭರಿತ ಬೋಧನೆಗಳೇ ಅಡಿಪಾಯ: ಬಾಲಸುಬ್ರಹ್ಮಣ್ಯ ಸರ್ಪಮಲೆ

Upayuktha

ಮಹಾರಾಷ್ಟ್ರ ಕ್ಷಿಪ್ರ ಕ್ರಾಂತಿ: ರಾತೋರಾತ್ರಿ ಶಿವಸೇನೆಗೆ ಚಳ್ಳೆ ಹಣ್ಣು ತಿನ್ನಿಸಿದ ಬಿಜೆಪಿ

Upayuktha