ಜಿಲ್ಲಾ ಸುದ್ದಿಗಳು ಪ್ರಮುಖ

ಜನನ ಮರಣ ಪ್ರಮಾಣ ಪತ್ರಗಳಿಗೆ ಡಿಜಿಟಲ್ ಸಹಿ ಕಡ್ಡಾಯ: ಅಪರ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಜಿಲ್ಲೆಯಲ್ಲಿ ಜನನ ಮರಣ ಪ್ರಮಾಣ ಪತ್ರಗಳು ಕಡ್ಡಾಯವಾಗಿ ಡಿಜಿಟಲ್ ಸಹಿಯ ಮುಖಾಂತರ ವಿತರಣೆಯಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಎಂ ಜೆ. ರೂಪ ಹೇಳಿದರು. ಅವರು, ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜನನ ಮರಣ ನೋಂದಣಿ ಕುರಿತಾದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಲೆಕ್ಕಿಗರು ನೋಂದಣಾಧಿಕಾರಿಗಳಾಗಿದ್ದು, ಪ್ರಾಥಮಿಕ ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಜಿಲ್ಲಾ ಆಸ್ಪತ್ರೆಗಳಲ್ಲಿ ಸರ್ಕಾರಿ ವೈದ್ಯಾಧಿಕಾರಿ ಉಪನೋಂದಣಾಧಿಕಾರಿಯಾಗಿದ್ದಾರೆ. ಇನ್ನು ಮಹಾನಗರಪಾಲಿಕೆಯಲ್ಲಿ ಪಾಲಿಕೆಯ ಆರೋಗ್ಯಾಧಿಕಾರಿ ನೋಂದಣಾಧಿಕಾರಿಯಾಗಿದ್ದು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಮತ್ತು ಅಧಿಸೂಚಿತ ಪ್ರದೇಶಗಳಲ್ಲಿ ಆರೋಗ್ಯ ನಿರೀಕ್ಷಕರು ನೋಂದಣಾಧಿಕಾರಿಗಳಾಗಿದ್ದು, ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯ ಸರ್ಕಾರಿ ಆಸ್ಪತ್ರಗಳಲ್ಲಿ ಸರ್ಕಾರಿ ವೈದ್ಯರು ಉಪನೋಂದಣಾಧಿಕಾರಿಗಳಾಗಿದ್ದು ಇವರುಗಳು ಡಿಜಿಟಲ್ ‘ಕೀ’ ಯನ್ನು ಅಳವಡಿಸಿಕೊಳ್ಳಬೇಕು. ಕಡ್ಡಾಯವಾಗಿ ಡಿಜಿಟಲ್ ಸಹಿಯ ಮುಖಾಂತರ ಜನನ ಮರಣ ಪ್ರಮಾಣ ಪತ್ರಗಳನ್ನು ನೀಡಬೇಕು. ಆದಷ್ಟು ಹಸ್ತ ಸಹಿಯನ್ನು ಕಡಿಮೆಗೊಳಿಸಬೇಕು ಎಂದು ಸೂಚಿಸಿದರು.

ಸರ್ಕಾರದ ಆದೇಶದ ಪ್ರಕಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಜನನ ಮರಣ ಪ್ರಮಾಣ ಪತ್ರಗಳ ವಿತರಣಾಧಿಕಾರಿಗಳಾಗಿ ನೇಮಿಸಿದ್ದು, ಈ ಬಗ್ಗೆ ತಾಲೂಕು ಮಟ್ಟದಲ್ಲಿ ಎಲ್ಲಾ ಪಿ.ಡಿ.ಓಗಳಿಗೆ ಸೂಕ್ತ ತರಬೇತಿ ಜೊತೆಗೆ ವ್ಯಾಪಕ ಪ್ರಚಾರ ನೀಡಬೇಕು ಎಂದು ಅವರು ಹೇಳಿದರು.

ಅಂಕಿ ಅಂಶದ ಪ್ರಕಾರ ಈಗಾಗಲೇ ಜಿಲ್ಲೆಯ ನಗರ ಮತ್ತು ಪಟ್ಟಣಗಳಲ್ಲಿ ಜನನ ಮರಣ ಪ್ರಮಾಣ ಪತ್ರ ತಡ ನೋಂದಣಿಯಾಗಿರುವುದು ಬೆಳಕಿಗೆ ಬಂದಿದೆ. ಇದನ್ನು ತಡೆಯುವ ನಿಟ್ಟಿನಲ್ಲಿ ಎಲ್ಲಾ ತಾಲೂಕಿನ ತಹಶೀಲ್ದಾರ್‍ಗಳು ನೋಂದಣಾಧಿಕಾರಿ ಹಾಗೂ ಉಪನೋಂದಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ದಾಖಲೆಗಳನ್ನು ಕೂಲಂಕುಶವಾಗಿ ಪರಿಶೀಲಿಸಬೇಕು ಎಂದರು. ಪ್ರತೀ ತಾಲೂಕಿನಲ್ಲಿ ಸಮನ್ವಯ ಸಮಿತಿ ಸಭೆ ಕರೆದು ತಡವಾಗಿ ನೋಂದಣಿಯಾಗಿರುವ ಕುರಿತು ಚರ್ಚೆ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಹೇಳಿದರು.

ಜಿಲ್ಲೆಯ ಎಲ್ಲಾ ನೋಂದಣಿ ಘಟಕವು ನಿಯಾಮಾನುಸಾರ ನೋಂದಣಿ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಹಾಗೂ ಶೇಕಡಾ 100 ರಷ್ಟು ಘಟನೆಗಳು ದಾಖಲಾತಿಯಾಗಿರುವ ಬಗ್ಗೆ ಕಂದಾಯ, ನಗರಾಭಿವೃದ್ಧಿ ಹಾಗೂ ಸಾಂಖ್ಯಿಕ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸಬೇಕು ಎಂದರು.

2020ನೇ ಸಾಲಿನ ಜನವರಿಯಿಂದ ಆಗಸ್ಟ್ ವರೆಗಿನ ಅಂಕಿ ಅಂಶದ ಪ್ರಕಾರ ಜಿಲ್ಲೆಯ ನಗರ ಹಾಗೂ ಗ್ರಾಮಾಂತರಗಳಲ್ಲಿ 18,824 ಜನನ ಪ್ರಮಾಣ ಪತ್ರ ನೋಂದಣಿಯಾಗಿದ್ದು, 10,139 ಮರಣ ಪ್ರಮಾಣ ಪತ್ರ ನೋಂದಣಿಯಾಗಿದೆ ಎಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಉದಯ್ ಶೆಟ್ಟಿ ಮಾಹಿತಿ ನೀಡಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಮದನ್ ಮೋಹನ್, ನಗರಾಭಿವೃದ್ಧಿ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್, ಅಧಿಕಾರಿಗಳು ಉಪಸ್ಥಿತರಿದ್ದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್ App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Related posts

ಕಣ್ಣೂರು ವಿವಿ ಪದವಿ ಫಲಿತಾಂಶ ಪ್ರಕಟ: ಕಾಸರಗೋಡು ಸರಕಾರಿ ಕಾಲೇಜಿಗೆ 10 ರ‍್ಯಾಂಕ್‌

Upayuktha

ಸಣ್ಣ ಉಳಿತಾಯದ ಬಡ್ಡಿ ದರ ಕಡಿತಕ್ಕೆ ಆರ್‌ಬಿಐ ಆಗ್ರಹ; ಪಿಪಿಎಫ್‌ ಇನ್ನು ಲಾಭದಾಯಕ ಅಲ್ಲವೆ..?

Upayuktha

ಮೋದಿ-ಕ್ಸಿ ಶೃಂಗಸಭೆ: ಕಾಶ್ಮೀರ ವಿಚಾರ ಪ್ರಸ್ತಾಪಿಸದ ಚೀನಾ, ಪರಸ್ಪರ ಬಾಂಧವ್ಯ ವೃದ್ಧಿಗೆ ಒತ್ತು

Upayuktha

1 comment

Vinaya Chandra Rai bellipady September 18, 2020 at 8:58 PM

Verry good news . gave more information

Reply

Leave a Comment