ನಗರ ಸ್ಥಳೀಯ

ಶತಾಯುಷಿ ಹಿರಿಯಡ್ಕ ಗೋಪಾಲ ರಾಯರಿಗೆ ಜಿಲ್ಲಾ ಕ.ಸಾ.ಪ.ದಿಂದ ಶ್ರದ್ಧಾಂಜಲಿ

ಮಂಗಳೂರು: ‘ಮದ್ದಳೆ ಮಾಂತ್ರಿಕ ಹಿರಿಯಡ್ಕ ಗೋಪಾಲ ರಾಯರು ಶತಮಾನ ಕಂಡ ಹಿರಿಯ ಜೀವ. 2018 ರಲ್ಲಿ ಅವರ ಮನೆಗೆ ಹೋಗಿ ಮಲ್ಪೆ ಶಂಕರನಾರಾಯಣ ಸಾಮಗ ಪ್ರಶಸ್ತಿ ನೀಡಿದ ಧನ್ಯತೆ ಕಲ್ಕೂರ ಪ್ರತಿಷ್ಠಾನದ್ದು’ ಎಂದು ದ.ಕ.ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಪ್ರದೀಪ್ ಕುಮಾರ್ ಕಲ್ಕೂರ ಹೇಳಿದ್ದಾರೆ.

ಇತ್ತೀಚೆಗೆ ನಿಧನರಾದ ಹಿರಿಯ ಮದ್ದಳೆ ವಾದಕ ಶತಾಯುಷಿ ಹಿರಿಯಡ್ಕ ಗೋಪಾಲರಾಯರಿಗೆ ಜಿಲ್ಲಾ ಕ.ಸಾ.ಪ. ಮತ್ತು ಕಲ್ಕೂರ ಪ್ರತಿಷ್ಠಾನ ವತಿಯಿಂದ ಶ್ರದ್ಧಾಂಜಲಿ ಸಮರ್ಪಿಸಿ ಅವರು ಮಾತನಾಡಿದರು.

ಕಸಾಪ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು, ಯಕ್ಷಗಾನ ವಿದ್ವಾಂಸ ಡಾ.ಎಂ.ಪ್ರಭಾಕರ ಜೋಶಿ,‌ ಯಕ್ಷಾಂಗಣ ಮಂಗಳೂರು ಕಾರ್ಯಾಧ್ಯಕ್ಷ ಭಾಸ್ಕರ ರೈ ಕುಕ್ಕುವಳ್ಳಿ, ಶ್ರೀಕೃಷ್ಣ ಯಕ್ಷಸಭಾದ ಕಾರ್ಯದರ್ಶಿ ಸುಧಾಕರ ರಾವ್ ಪೇಜಾವರ, ಪ್ರಸಂಗಕರ್ತ ನಿತ್ಯಾನಂದ ಕಾರಂತ ಪೊಳಲಿ, ನಿವೃತ್ತ ಪ್ರಾಧ್ಯಾಪಕ ಜಿ.ಕೆ.ಭಟ್ ಸೇರಾಜೆ, ಸಂಘಟಕ ತಾರಾನಾಥ ಹೊಳ್ಳ, ಕದಳಿ ಕಲಾಕೇಂದ್ರದ ಸಂಸ್ಥಾಪಕ ರಮೇಶ್ ಭಟ್ ಕೆ. ನುಡಿನಮನ ಸಲ್ಲಿಸಿದರು.

ಕೊನೆಯಲ್ಲಿ ದಿ.ಗೋಪಾಲ ರಾಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮೌನ ಪ್ರಾರ್ಥನೆ ಮೂಲಕ ಅಗಲಿದ ಚೇತನಕ್ಕೆ ಚಿರ ಶಾಂತಿ ಕೋರಲಾಯಿತು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಮಾಣಿ ಮಠದಲ್ಲಿ ಶ್ರೀರಾಮ ಸಾಮ್ರಾಜ್ಯ ಪಟ್ಟಾಭಿಷೇಕ

Upayuktha

ಮಂಗಳೂರಿನಲ್ಲಿ ಇಂದು 3, ಕಾಸರಗೋಡಿನಲ್ಲಿ 6 ಕೊರೊನಾ ಪಾಸಿಟಿವ್ ಪ್ರಕರಣಗಳು

Upayuktha

ಫಿಲೋಮಿನಾ ಸ್ನಾತಕೋತ್ತರ ಭೌತಶಾಸ್ತ್ರ ವಿಭಾಗದಲ್ಲಿ ಅತಿಥಿ ಉಪನ್ಯಾಸ

Upayuktha

Leave a Comment