ಗ್ರಾಮಾಂತರ ರಾಜ್ಯ

ನರೇಗಾ ಯೋಜನೆ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾದ ಬೆಳ್ತಂಗಡಿಯ ಸುನೀತಾ ಮಂಜುನಾಥ್

ಬೆಳ್ತಂಗಡಿ: ಮಹಾತ್ಮಗಾಂಧಿ ನರೇಗಾ ಯೋಜನೆ ರಾಜ್ಯ ಮಟ್ಟದ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕು ಓಡಿಲ್ನಾಳ ಗ್ರಾಮದ ನಿವಾಸಿ ಸುನೀತಾ ಮಂಜುನಾಥ್ ಆಯ್ಕೆಯಾಗಿದ್ದಾರೆ.

ಇವರು 2020-21 ನೇ ಸಾಲಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ್ದಕ್ಕಾಗಿ ಹಾಗೂ ವಿಜಯಪುರ ಜಿಲ್ಲೆಯಲ್ಲಿ ವಿಶೇಷ ಐಇಸಿ ಸಂಯೋಜಕರಾಗಿ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಿದ್ದಕ್ಕಾಗಿ ರಾಜ್ಯಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಎ. 09 ರಂದು ಹುಬ್ಬಳ್ಳಿಯ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜರುಗಲಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಆಪ್ತಕಾರ್ಯದರ್ಶಿ ಮಂಜುನಾಥ್​ರ ಪತ್ನಿಯಾಗಿರುವ ಸುನೀತಾ ಪ್ರಸ್ತುತ ಬೆಳ್ತಂಗಡಿ ತಾಲೂಕು ಪಂಚಾಯತ್​ನಲ್ಲಿ ನರೇಗಾ ಯೋಜನೆಯ ಮಾಹಿತಿ, ಶಿಕ್ಷಣ, ಸಂವಹನ ಸಂಯೋಜಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Related posts

ಅರ್ಚಕರ ಮೇಲೆ ಹಲ್ಲೆಗೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಖಂಡನೆ

Upayuktha

ಉಜಿರೆ: ಬೆಳಕು ಸೇವಾ ಪ್ರತಿಷ್ಠಾನದಿಂದ ಆರ್ಥಿಕ ನೆರವು

Sushmitha Jain

ವಿಹಿಂಪ ವರ್ಕಾಡಿ ಸಮಿತಿಯಿಂದ ಅಯೋಧ್ಯೆ ಕರಸೇವಕರಿಗೆ ಗೌರವಾರ್ಪಣೆ

Upayuktha