ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ವಿವಿ ಕಾಲೇಜು: ಪ್ರಭಾರ ಪ್ರಾಂಶುಪಾಲರಾಗಿ ಡಾ. ಎ. ಹರೀಶ ನೇಮಕ

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜಾಗಿರುವ ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾಗಿ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಎ. ಹರೀಶ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ಸುಮಾರು 37 ವರ್ಷಗಳಿಂದ ಭೌತಶಾಸ್ತ್ರ ಬೋಧಿಸುತ್ತಿರುವ ಡಾ. ಎ ಹರೀಶ್, 1983 ರಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಿಂದ ಎಂ.ಎಸ್ಸಿ ಪದವಿ, 2012 ರಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಿಂದಲೇ ಡಾಕ್ಟರೇಟ್ ಪದವಿ ಪಡೆದುಕೊಂಡಿದ್ದಾರೆ. ಇವರ 6 ಸಂಶೋಧನಾ ಪ್ರಬಂಧಗಳು ಅಂತಾರಾಷ್ಟ್ರೀಯ ರಿಸರ್ಚ್ ಜರ್ನಲ್‌ಗಳಲ್ಲಿ ಪ್ರಕಟವಾಗಿವೆ.

ಇವರು ವಿಶ್ವವಿದ್ಯಾನಿಲಯ ಕಾಲೇಜಿನ ಆಂತರಿಕ ಮೌಲ್ಯಮಾಪನ ಸಮಿತಿಯ ಸಂಚಾಲಕರಾಗಿ, ಸತತ 8 ವರ್ಷಗಳಿಂದ ವಿದ್ಯಾರ್ಥಿ ಸಂಘದ ಉಪನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಡಾ. ಹರೀಶ್ ಅವರು ಮೂಲತಃ ಕುಂಬಳೆ ಸಮೀಪದ ಅರಿಕ್ಕಾಡಿಯವರಾಗಿದ್ದು, ಕಾಸರಗೋಡಿನ ಬಿ.ಇ.ಎಂ ಪ್ರೌಢಶಾಲೆ ಮತ್ತು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಹಳೆ ವಿದ್ಯಾರ್ಥಿಯೂ ಹೌದು. ಅವರೀಗ ಕಾಲೇಜನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಪೂರ್ವ ಪ್ರಾಂಶುಪಾಲ ಡಾ. ಉದಯ್ ಕುಮಾರ್ ಎಂ.ಎ ಅವರ ಸ್ಥಾನ ತುಂಬಿದ್ದಾರೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಕೋವಿಡ್-19 ಬರದಂತೆ ಇನ್ನಷ್ಟು ಜಾಗೃತರಾಗಿ: ಡಾ|| ಚೂಂತಾರು

Upayuktha

ವಯಲಿನ್ ಕಲಾವಿದೆಯ ಮಾದರಿ ನಡೆ: ಕಲಾ ಆದಾಯದ ಒಂದು ಭಾಗ ಗೋಸೇವೆಗೆ…!

Upayuktha

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ 2 ದಿನಗಳ `ವಾರ್‌ಟೆಕ್ಸೊ’

Upayuktha