ಕ್ಯಾಂಪಸ್ ಸುದ್ದಿ ಗ್ರಾಮಾಂತರ ಸ್ಥಳೀಯ

ಎಸ್.ಡಿ.ಎಂ ಪಿ.ಜಿ. ಸೆಂಟರ್‌ಗೆ ನೂತನ ಡೀನ್

ಉಜಿರೆ: ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ನೂತನ ಡೀನ್ ಆಗಿ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ವಿಶ್ವನಾಥ ಪಿ ನೇಮಕಗೊಂಡಿದ್ದಾರೆ.

ಡಾ.ಗಣಪಯ್ಯ ಬಿ. ಅವರು ಡೀನ್ ಹುದ್ದೆಯಿಂದ ವಿಶ್ರಾಂತಗೊಂಡ ಹಿನ್ನೆಲೆಯಲ್ಲಿ ತೆರವಾಗಿದ್ದ ಹುದ್ದೆಗೆ ವಿಶ್ವನಾಥ ಅವರನ್ನು ನೇಮಿಸಲಾಗಿದ್ದು, ಇತ್ತೀಚೆಗೆ ಅಧಿಕಾರ ಸ್ವೀಕರಿಸಿದರು. ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ ಡಾ.ಸತೀಶ್ಚಂದ್ರ ಎಸ್. ಸಮಕ್ಷಮದಲ್ಲಿ ಏರ್ಪಟ್ಟ ಸರಳ ಕಾರ್ಯಕ್ರಮದಲ್ಲಿ ಅವರು ಅಧಿಕಾರ ವಹಿಸಿಕೊಂಡರು. ಕಾಲೇಜಿನ ಕುಲಸಚಿವ ಡಾ.ಸಂಪತ್‍ಕುಮಾರ್ ಹಾಗೂ ಸ್ನಾತಕೋತ್ತರ ಕೇಂದ್ರದ ಎಲ್ಲಾ ವಿಭಾಗಗಳ ಮುಖ್ಯಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಡಾ.ವಿಶ್ವನಾಥ ಪಿ ಅವರು 29ಕ್ಕೂ ಅಧಿಕ ವರ್ಷಗಳ ಕಾಲ ಅಧ್ಯಾಪಕರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಕಾಲೇಜಿನ ರೋವರ್ಸ್-ರೇಂಜರ್ಸ್, ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಕಾಲೇಜಿನ ಮಣ್ಣು ಪರೀಕ್ಷಾ ಕೇಂದ್ರದ ಸಂಯೋಜಕರಾಗಿ, ಉತ್ಕೃಷ್ಟತಾ ಮಾನ್ಯತಾ ಕೇಂದ್ರದದ ಸಂಯೋಜಕ, ತುಮಕೂರು ವಿಶ್ವವಿದ್ಯಾನಿಲಯದ ಸಂಶೋಧನಾ ಕೇಂದ್ರದ ನಿರ್ದೇಶಕರಾಗಿಯೂ ಕಾರ್ಯೋನ್ಮುಖರಾಗಿದ್ದಾರೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್ App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Related posts

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಶಿವಾಜಿ ಜಯಂತಿ, ಸಂಸ್ಮರಣೆ

Upayuktha

ದ.ಕ ಜಿಲ್ಲಾ ಗೃಹರಕ್ಷಕ ದಳ: ಗೌರವ ಹುದ್ದೆಗಳಿಗೆ ಅರ್ಜಿ ಆಹ್ವಾನ

Upayuktha

30 ಮಂದಿ ವಿಕಲಚೇತ ಸಾಧಕರಿಗೆ ರಾಜ್ಯಪ್ರಶಸ್ತಿ ಪ್ರಧಾನ

Upayuktha