ಕೃಷಿ ಜಿಲ್ಲಾ ಸುದ್ದಿಗಳು ಪ್ರಮುಖ

ಅಡಿಕೆ ಬೆಳೆಗೆ ಹನಿ ನೀರಾವರಿ ಅಳವಡಿಸಿ ಯಶಸ್ಸು ಕಂಡ ಪುತ್ತೂರಿನ ರೈತ ಮಹಿಳೆ

ಮಂಗಳೂರು: ನೀರು ಜೀವನಕ್ಕೆ ಅವಶ್ಯವಿರುವ ಅತ್ಯಮೂಲ್ಯ ನೈಸರ್ಗಿಕ ಸಂಪನ್ಮೂಲ. ಭೂಮಿಯ ಬಹುಭಾಗ ನೀರಿನಿಂದಲೇ ಆವರಿಸಿದ್ದರೂ, ಬಳಕೆಗೆ ಯೋಗ್ಯವಾದ ನೀರು ಬಹಳ ಕಡಿಮೆ. ಆದ್ದರಿಂದ ನೈಸರ್ಗಿಕ ವರದಾನವಾಗಿ ಸಿಕ್ಕಿರುವ ನೀರನ್ನು ಮಿತವಾಗಿ ಬಳಸಿ ಉತ್ತಮ ಗುಣಮಟ್ಟದ ಇಳುವರಿಯನ್ನು ಪಡೆಯಲು ರೈತರ ಆರ್ಥಿಕತೆಗೆ ಸಹಕಾರಿಯಾಗುವಂತೆ ಆಗಲು ತೋಟಗಾರಿಕೆ ಇಲಾಖೆಯು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೂಕ್ಷ್ಮ ನೀರಾವರಿ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಸದರಿ ಯೋಜನೆಯಡಿ ರೈತರಿಗೆ 2 ಹೆಕ್ಟೇರ್ ಪ್ರದೇಶದವರೆಗೆ ಶೇ. 90 ರಷ್ಟು ಸಹಾಯಧನವನ್ನು ಇಲಾಖಾ ವತಿಯಿಂದ ನೀಡಲಾಗುತ್ತಿದೆ.

ಪುತ್ತೂರು ತಾಲೂಕಿನ ಬೆಟ್ಟಂಪಾಡಿ ಗ್ರಾಮದ ಚಂದ್ರಾವತಿಯವರು ನೀರಿನ ನಿರ್ವಹಣೆಗಾಗಿ ಹಾಗೂ ಕೂಲಿ ಆಳುಗಳ ಸಮಸ್ಯೆಯಿಂದಾಗಿ ಬೇಸತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ ನೀರಾವರಿಯ ಬಗ್ಗೆ ವಿಚಾರಿಸಿ, ಇಲಾಖೆಯ ಮಾರ್ಗದರ್ಶನದಲ್ಲಿ ಸುಮಾರು 0.3 ಹೆಕ್ಟೇರ್ ಅಡಿಕೆ ಪ್ರದೇಶಕ್ಕೆ ಹನಿ ನೀರಾವರಿಯನ್ನು ಅಳವಡಿಕೊಂಡಿದ್ದಾರೆ. ಇವರಿಗೆ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನವನ್ನು ಪಾವತಿಸಲಾಗಿದೆ.

‘ಸಾಧ್ಯವಾದಷ್ಟು ಕಡಿಮೆ ಖರ್ಚು, ಮಿತನೀರು ಬಳಕೆ, ಬೆಳೆ ನಿರ್ವಹಣೆ ಮತ್ತು ಅಧಿಕ ಆದಾಯ ರೈತನ ದೃಷ್ಠಿಕೋನ ಅಲ್ಲವೇ’ ಎನ್ನುತ್ತಾರೆ ಚಂದ್ರಾವತಿಯವರು. ಹನಿ ನೀರಾವರಿಯಲ್ಲಿ ಪ್ರತೀ ದಿನವೂ ಬೆಳೆಗೆ ಬೇಕಾದ ಪ್ರಮಾಣದಲ್ಲಿ ನೀರನ್ನು ಕೊಡುವುದರಿಂದ ತೇವಾಂಶವು ಹೆಚ್ಚಿನ ಬಿಗಿತವಿಲ್ಲದೆ ಬೆಳೆಗೆ ಒಂದೇ ಸಮನೆ ದೊರೆಯವುದರಿಂದ ಯಾವುದೇ ಕಾಲದಲ್ಲಿ ನೀರಿನ ಕೊರತೆ ಇಲ್ಲ, ಕಳೆಯ ಸಮಸ್ಯೆಯೂ ಇಲ್ಲ, ಕೂಲಿ ವೆಚ್ಚದಲ್ಲಿ ಉಳಿತಾಯವಾಗಿದೆ ಎನ್ನುತ್ತಾರೆ ಅವರು.

ಹೆಚ್ಚಿನ ಮಾಹಿತಿಗೆ ದ.ಕ. ಜಿಲ್ಲೆಯ ತೋಟಗಾರಿಕೆ ಮಾಹಿತಿ ಮತ್ತು ಸಲಹಾ ಕೇಂದ್ರದ ವಿಷಯತಜ್ಞರು ರಿಶಲ್ ಡಿಸೋಜ – 8277806372 ಸಂಪರ್ಕಿಸಲು ಮಂಗಳೂರು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್ App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Related posts

ಅಂಕೋಲ ಬಳಿ ಕಾರು ಅಪಘಾತ: ಕೇಂದ್ರ ಆಯುಷ್‌ ಸಚಿವ ಶ್ರೀಪಾದ ನಾಯಕ್‌ಗೆ ಗಂಭೀರ ಗಾಯ, ಸಚಿವರ ಪತ್ನಿ ಸಹಿತ ಇಬ್ಬರು ಮೃತ್ಯು

Upayuktha

ಕರಾವಳಿ ಜಿಲ್ಲೆಗಳ ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ: ಬೆಂಗಳೂರು- ಮಂಗಳೂರು ನಡುವೆ ಪ್ರತಿದಿನ ಮೂರು ಎಕ್ಸ್‌ಪ್ರೆಸ್ ರೈಲು

Sushmitha Jain

ಫೆ.23ರಂದು ಸಪ್ತಪದಿ-ಸಾಮೂಹಿಕ ವಿವಾಹ ಕುರಿತು ವಿಚಾರ ಸಂಕಿರಣ

Upayuktha