
ಲಡಾಖ್:
ಆಗಸ್ಟ್ 29ರ ರಾತ್ರಿ ಈ ಘಟನೆ ನಡೆದಿದ್ದು, ಚೀನೀ ಸೈನಿಕರು ವಾಸ್ತವಿಕ ನಿಯಂತ್ರಣ ರೇಖೆಯಲ್ಲಿನ ಯಥಾಸ್ಥಿತಿ ಬದಲಿಸಲು ಪ್ರಚೋದನಕಾರಿ ನಡವಳಿಕೆ ಪ್ರದರ್ಶಿಸಿದ್ದಾರೆ. ಪ್ಯೊಂಗ್ಯಾಂಗ್ ತ್ಸೊ ಸರೋವರದ ದಕ್ಷಿಣದ ದಂಡೆಯಲ್ಲಿ ಈ ಘಟನೆ ನಡೆದಿದೆ ಎಂದು ಸೇನೆಯ ಅಧಿಕೃತ ಮೂಲಗಳು ತಿಳಿಸಿವೆ.
ಏಕಪಕ್ಷೀಯವಾಗಿ ನೆಲದ ಮೇಲಿನ ಯಥಾಸ್ಥಿತಿಯನ್ನು ಬದಲಿಸಲು ಚೀನೀಯರು ಹವಣಿಸಿದ್ದು, ಇಂತಹ ಕೃತ್ಯಕ್ಕೆ ಭಾರತೀಯ ಸೇನೆ ಎಂದೂ ಅವಕಾಶ ನೀಡುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ. ಮಾತುಕತೆಗಳ ಮೂಲಕ ಬಿಕ್ಕಟ್ಟು ಬಗೆಹರಿಸಲು ಬದ್ಧವಾಗಿರುವುದರ ಜತೆಗೇ ನಮ್ಮ ಪ್ರಾದೇಶಿಕ ಸಮಗ್ರತೆಯನ್ನು ಕಾಪಾಡಲು ಕಟಿಬದ್ಧರಾಗಿದ್ದೇವೆ ಎಂದು ಸೇನೆ ಹೇಳಿದೆ.
ಪ್ರಸ್ತುತ ಬ್ರಿಗೇಡ್ ಕಮಾಂಡರ್ ಮಟ್ಟದ ಮಾತುಕತೆಗಳು ನಡೆಯುತ್ತಿವೆ.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಟ್ವಿಟರ್ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ
ಯೂಟ್ಯೂಬ್ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್ App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.