ಕ್ಯಾಂಪಸ್ ಸುದ್ದಿ ಗ್ರಾಮಾಂತರ ಸ್ಥಳೀಯ

ಅರ್ಥಶಾಸ್ತ್ರವು ಆತ್ಮನಿರ್ಭರತೆಯ ಮಾರ್ಗದರ್ಶಿಯಾಗಲಿ: ಪ್ರತಾಪಸಿಂಹ ನಾಯಕ್

ಉಜಿರೆ: ಅರ್ಥಶಾಸ್ತ್ರವು ಆತ್ಮಗೌರವ ಮತ್ತು ಆತ್ಮನಿರ್ಭರತೆಯಿಂದ ಬದುಕುವ ಕಲೆಯನ್ನು ಕೊಡುವ ವಿಜ್ಞಾನ. ಪ್ರಸ್ತುತ ಬದಲಾದ ಪರಿಸ್ಥಿತಿಗೆ ಅನುಗುಣವಾಗಿ ಪಠ್ಯ ಹಾಗೂ ಪಠ್ಯೇತರÀ ಚಟುವಟಿಕೆಯನ್ನು ಮಾಡುವುದು ಸೂಕ್ತ. ಈ ನಿಟ್ಟಿನಲ್ಲಿ ಆರ್ಥಶಾಸ್ತ್ರ ಸಂಘವು ವಿಧ್ಯಾರ್ಥಿಗಳಲ್ಲಿ ಹೊಸ ಚಿಂತನೆಯನ್ನು ಮೂಡಿಸಿ ಆತ್ಮನಿರ್ಭರತೆಯ ದಾರಿಯಲ್ಲಿ ನಡೆಸುವ ಮಾರ್ಗದರ್ಶಿಯಾಗಲಿ ಎಂದು ಕರ್ನಾಟಕ ಸರಕಾರದ ವಿಧಾನಪರಿಷತ್ ಸದಸ್ಯರಾದ ಮಾನ್ಯ ಪ್ರತಾಪಸಿಂಹ ನಾಯಕ್ ಅವರು ಹಾರೈಸಿದರು.

ಪ್ರತಾಪಸಿಂಹ ನಾಯಕ್ ಅವರು ಇತ್ತೀಚೆಗೆ ಉಜಿರೆಯ ಶ್ರೀ.ಧ.ಮಂ.ಕಾಲೇಜಿನ ಅರ್ಥಶಾಸ್ತ್ರ ಹಾಗೂ ಗ್ರಾಮೀಣಾಭಿವೃದ್ದಿ ವಿಭಾಗದ 2020-21ನೇ ಸಾಲಿನ ವಿದ್ಯಾರ್ಥಿ ಚಟುವಟಿಕೆಗಳನ್ನು ಆನ್ಲೈನ್ ಮೂಲಕ ಉದ್ಘಾಟಿಸಿ ಮಾತನಾಡುತ್ತಿದ್ದರು.

ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ.ಎಸ್.ಸತೀಶ್ಚಂದ್ರ ಅವರು ಮಾತನಾಡುತ್ತಾ ಕೋವಿಡ್ ನಿಂದಾಗಿ ಭೌತಿಕ ಅಂತರ ಇದ್ದರೂ ತಂತ್ರಜ್ಞಾನದ ಸೂಕ್ತ ಬಳಕೆಯಿಂದ ನಮ್ಮ ಕಾಲೇಜಿನಲ್ಲಿ ಭೌದ್ಧಿಕ ಅಂತರವು ಬಹಳಷ್ಟು ಕಡಿಮೆಯಾಗಿದೆ. ಈ ನಿಟ್ಟಿನಲ್ಲಿ ಅರ್ಥಶಾಸ್ತ್ರ ವಿಭಾಗದ ಪ್ರಯತ್ನ ಅನುಕರಣೀಯ ಎಂದು ಶ್ಲಾಘಿಸಿದರು.

ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಎ.ಜಯಕುಮಾರ ಶೆಟ್ಟಿ ಸ್ವಾಗತಿಸಿ, ಪ್ರಾಧ್ಯಾಪಕರಾದ ಡಾ.ಗಣರಾಜ್ ನಿರ್ವಹಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಂಯೋಜಕರಾದ ನರೇಶ್ ಶಾಸ್ತ್ರಿ ಕಾರ್ಯಸೂಚಿಯನ್ನು ಹಾಗೂ ಧನ್ಯಾ ಪ್ರಭು ಪ್ರಾರ್ಥಿಸಿ ವಂದಿಸಿದರು. ಕಾರ್ಯಕ್ರಮದಲ್ಲಿ ಪ್ರಾದ್ಯಾಪಕರಾದ ಡಾ. ಮಹೇಶ್ ಕುಮಾರ್ ಶೆಟ್ಟಿ, ಡಾ.ನಾಗರಾಜ್ ಪೂಜಾರ್, ವಸಂತಿ ಹಾಗೂ ಅಭಿನಂದನ್ ಉಪಸ್ಥಿತರಿದ್ದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಸಿ.ಎ. ಫೈನಲ್ ಪರೀಕ್ಷಾ ಫಲಿತಾಂಶ: ಆಳ್ವಾಸ್ ಕಾಲೇಜಿನ 4 ವಿದ್ಯಾರ್ಥಿಗಳ ವಿಶೇಷ ಸಾಧನೆ

Upayuktha

ದ.ಕ ಜಿಲ್ಲೆಯಿಂದ ಬೇರೆ ರಾಜ್ಯಗಳಿಗೆ ಪ್ರಯಾಣಿಸುವವರಿಗೆ ಒಂದು ಬಾರಿ ಪ್ರಯಾಣಕ್ಕೆ ಅನುಮತಿ

Upayuktha

ಅಡ್ಯಾರ್ ಗ್ರಾ.ಪಂ: 78 ಲಕ್ಷ ರೂ ಅನುದಾನದಲ್ಲಿ ವಿವಿಧ ರಸ್ತೆಗಳ ಕಾಂಕ್ರೀಟಿಕರಣಕ್ಕೆ ಶಾಸಕ ಡಾ.ಭರತ್ ಶೆಟ್ಟಿ ಚಾಲನೆ

Upayuktha

Leave a Comment