ದೇಶ-ವಿದೇಶ

ಏಕತಾ ದಿನ- ಸರ್ದಾರ್ ವಲ್ಲಭಬಾಯಿ ಪಟೇಲ್ ಜನ್ಮದಿನ; ಪ್ರಧಾನಿ ಯಿಂದ ಗೌರವಾರ್ಪಣೆ

ಗುಜರಾತ್: 2 ದಿನಗಳ ಕಾಲ ಗುಜರಾತ್ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಯವರು ಶನಿವಾರ ರಾಷ್ಟ್ರೀಯ ಏಕತಾ ದಿನದ ಪ್ರಯುಕ್ತ ಕೆವಾಡಿಯಾದಲ್ಲಿರುವ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಪ್ರತಿಮೆಗೆ ಜಲ ಅರ್ಚನೆ ಮತ್ತು ಪುಷ್ಪಾರ್ಚನೆ ಮಾಡಿದರು.

ಹಾಗೆಯೇ ಗುಜರಾತ್ ನ ಕೆವಾಡಿಯಾದಲ್ಲಿ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತೆಯ ಪ್ರತಿಮೆಯಿದ್ದು, ಅಲ್ಲಿಗೆ ಪ್ರಧಾನಿ ಮೋದಿ ಭೇಟಿ ನೀಡಿ ಗೌರವ ಸಲ್ಲಿಸಿದ್ದಾರೆ.

ನಂತರ ರಾಷ್ಟ್ರೀಯ ಏಕತಾ ದಿವಸ ಪರೇಡ್ ನೆರವೇರಿದ್ದು ಅದರಲ್ಲಿ ಪ್ರಧಾನಿ ಭಾಗವಹಿಸಿ ವೀಕ್ಷಿಸಿ ಗೌರವ ಸ್ವೀಕರಿಸಿದರು.

ಈಗಾಗಲೇ ರಾಷ್ಟ್ರೀಯ ಏಕತಾ ದಿನವನ್ನು ಪ್ರತಿವರ್ಷ ಅಕ್ಟೋಬರ್ 31ರಂದು ಆಚರಣೆ ಮಾಡಲಾಗುತ್ತದೆ. ದೇಶದ ಉಕ್ಕಿನ ಮನುಷ್ಯ ಎಂದೇ ಜನಪ್ರಿಯರಾದ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನವನ್ನು ಏಕತಾ ದಿನವನ್ನಾಗಿ ಆಚರಿಸುವುದಕ್ಕೆ ಕೇಂದ್ರ ಸರ್ಕಾರ 2014ರಲ್ಲಿ ಜಾರಿಗೆ ತಂದಿತು. ಈ ವರ್ಷ ಅವರ 145ನೇ ಜಯಂತಿ ಆಚರಣೆ ಮಾಡಿದರು.

 

Related posts

ಚೀನಾದ ಸರಕಾರಿ ಬೆಂಬಲಿತ ಅಕೌಂಟ್‌ಗಳನ್ನು ಕಿತ್ತುಹಾಕಿದ ಫೇಸ್‌ಬುಕ್, ಟ್ವಿಟರ್

Upayuktha

ಎಲ್ಲ ಉಗ್ರರಿಗೂ ತರಬೇತಿ ನೀಡಿದ್ದು ನಾವೇ: ಒಪ್ಪಿಕೊಂಡ ಪಾಕ್ ಪ್ರಧಾನಿ ಇಮ್ರಾನ್ ಖಾನ್

Upayuktha

ಕೋವಿಡ್ -19: ವಿಶ್ವದಲ್ಲಿ 92 ಲಕ್ಷಕ್ಕೂ ಅಧಿಕ ಮಂದಿಗೆ ಸೋಂಕು

Upayuktha

Leave a Comment