ಗ್ರಾಮಾಂತರ ನಿಧನ ಸುದ್ದಿ ಸ್ಥಳೀಯ

ದ.ಕ. ದಲ್ಲಿ ಹೆಚ್ಚುತ್ತಿರುವ ಡೆಂಗೆ: ಜ್ವರದಿಂದ ಪ್ರಗತಿಪರ ಕೃಷಿಕ ಸಾವು

ಮಂಗಳೂರು: ಮಳೆಗಾಲ ಆರಂಭವಾಗುತ್ತಿದ್ದಂತೆ ದ.ಕ. ಜಿಲ್ಲೆಯಲ್ಲಿ ಡೆಂಗೆ ಜ್ವರ ವ್ಯಾಪಕವಾಗಿ ಹರಡುತ್ತಿದ್ದು, ವ್ಯಕ್ತಿಯೊಬ್ಬರು ಮಂಗಳವಾರ ನಗರದ ಖಾಸಗಿ ಆಸ್ಪತ್ರೆಯಲ್ಲಿ ಜ್ವರ ತೀವ್ರಗೊಂಡು ಮೃತಪಟ್ಟಿದ್ದಾರೆ.

ಮೃತಪಟ್ಟವರು ಬೆಳ್ತಂಗಡಿ ತಾಲೂಕು ಆಲಂದಡ್ಕ ನಿವಾಸಿ ಪ್ರಗತಿಪರ ಕೃಷಿಕರು. ಅವರು ಸಾವಯವ ಕೃಷಿ, ಹೈನುಗಾರಿಕೆಯಲ್ಲಿ ವಿಶೇಷ ಪರಿಣಿತಿ ಹೊಂದಿದ್ದರು. ಕೆಲವು ದಿನಗಳಿಂದ ಡೆಂಗೆ ಜ್ವರ ಪೀಡಿತರಾಗಿ ಚಿಕಿತ್ಸೆ ಪಡೆಯುತ್ತಿದ್ದ ಅವರ ರಕ್ತದಲ್ಲಿ ಪ್ಲೇಟ್‌ಲೆಟ್‌ಗಳ ಸಂಖ್ಯೆ ತೀವ್ರವಾಗಿ ಇಳಿಕೆಯಾಗಿ ಕೊನೆಯುಸಿರೆಳೆದರು ಎಂದು ಮೂಲಗಳು ತಿಳಿಸಿವೆ.

ಜಿಲ್ಲೆಯ ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ತಾಲೂಕಿನ ಹಲವೆಡೆ ಮಳೆಗಾಲ ಆರಂಭವಾಗುತ್ತಿದ್ದಂತೆ ಡೆಂಗೆ ಮಹಾಮಾರಿಯೂ ವ್ಯಾಪಕವಾಗಿ ಹಬ್ಬುತ್ತಿದೆ. ಇತ್ತೀಚೆಗೆ ಪುತ್ತೂರು ತಾಲೂಕಿನ ಬೆಟ್ಟಂಪಾಡಿಯಲ್ಲಿ ಓರ್ವರು ಡೆಂಗೆ ಜ್ವರದಿಂದ ಮೃತಪಟ್ಟಿದ್ದರು. ಇದರಿಂದ ಜಿಲ್ಲೆಯಲ್ಲಿ ಈ ಬಾರಿ ಡೆಂಗೆ ಜ್ವರಕ್ಕೆ ಇಬ್ಬರು ಬಲಿಯಾದಂತಾಗಿದೆ.

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಈಗ ಲಭ್ಯ. ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

ಟೆಲಿಗ್ರಾಂ ಬ್ರಾಡ್‌ಕಾಸ್ಟ್‌ ಮೂಲಕ ಉಪಯುಕ್ತ ನ್ಯೂಸ್‌ ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ.

Related posts

ರಾಧಾಕೃಷ್ಣ ನಾವಡರಿಗೆ ಪಡ್ರೆ ಯಕ್ಷೋತ್ಸವ ಪ್ರಶಸ್ತಿ ಪ್ರದಾನ

Upayuktha

ಪುತ್ತೂರು: ಕಾರು ಡಿಕ್ಕಿ ಓರ್ವ ಬಾಲಕಿ ದುರ್ಮರಣ

Harshitha Harish

ಪ್ರತಿ ಗ್ರಾ.ಪಂನಲ್ಲಿ ಎರಡೆರಡು ಸಮಾವೇಶ ನಡೆಸಲು ಬಿಜೆಪಿ ನಿರ್ಧಾರ

Upayuktha