ರಾಜ್ಯ

ರೈತರು ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ನಾಳೆ ರಾಜ್ಯದ ಹೆದ್ದಾರಿ ತಡೆದು ಪ್ರತಿಭಟನೆ

ಬೆಂಗಳೂರು: ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ನಾಳೆ ದೇಶಾದ್ಯಂತ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲು ರೈತರು ನಿರ್ಧರಿಸಿದ್ದಾರೆ. ಮಧ್ಯಾಹ್ನ 12ರಿಂದ 3 ಗಂಟೆವರೆಗೆ ರಾಷ್ಟ್ರೀಯ, ರಾಜ್ಯ ಹೆದ್ದಾರಿ ತಡೆದು ಧರಣಿ ನಡೆಸಲು ಕರೆ ನೀಡಲಾಗಿದೆ.

ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ನಾಳೆ ಬೆಂಗಳೂರು-ದೊಡ್ಡಬಳ್ಳಾಪುರ ರಾಜ್ಯ ಹೆದ್ದಾರಿ, ಬೆಂಗಳೂರು-ಮೈಸೂರು ರಸ್ತೆಯಲ್ಲಿ 2 ಕಡೆ ಹೆದ್ದಾರಿ ತಡೆ ನಡೆಯಲಿದೆ.

ಬಡಗಲಪುರ ನಾಗೇಂದ್ರ ನೇತೃತ್ವದಲ್ಲಿ ಬಿಡದಿ, ಮಂಡ್ಯ, ರಾಯಚೂರಿನ ಅಸ್ಕಿಹಾಲ್ ಬಳಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಯಲಿದೆ. ಚಾಮರಸ ಮಾಲಿ ಪಾಟೀಲ್ ನೇತೃತ್ವದಲ್ಲಿ ನಾಳೆ ರಾಜ್ಯದ ಹಲವೆಡೆ ರಾಷ್ಟ್ರೀಯ, ರಾಜ್ಯ ಹೆದ್ದಾರಿಗಳಿಗೆ ತಡೆಯಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

 

Related posts

ಶ್ರೀ ವಿಶ್ವೇಶತೀರ್ಥ ಶ್ರೀಪಾದರಿಂದ ದೀಕ್ಷೆ ಪಡೆದಿದ್ದ ಹರಿದ್ವಾರದ ತಪೋವನಿ ಮಾತಾಜಿ ನಿಧನ

Upayuktha

64ನೇ ಕರ್ನಾಟಕ ರಾಜ್ಯೋತ್ಸವ: ಕನ್ನಡದಲ್ಲಿ ಶುಭ ಕೋರಿದ ಪ್ರಧಾನಿ ಮೋದಿ

Upayuktha

ಎಮ್ ಅಪ್ಪಣ್ಣ ರವರು ಜಂಗಲ್‌ ಲಾಡ್ಜಸ್‌ ಮತ್ತು ರೆಸಾರ್ಟ್‌ ಅಧ್ಯಕ್ಷರಾಗಿ ನೇಮಕ

Harshitha Harish