ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಗಣರಾಜ್ಯೋತ್ಸವ ಪೆರೇಡ್‍ನಲ್ಲಿ ಪಾಲ್ಗೊಂಡ ಎನ್‍ಸಿಸಿ ಕೆಡೆಟ್ ರಕ್ಷಾ ಅಂಚನ್‍ಗೆ ಅಭಿನಂದನೆ

 

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವಿಜ್ಞಾನ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿನಿ ಸೀನಿಯರ್ ಕೆಡೆಟ್ ಅಂಡರ್ ಆಫೀಸರ್ ರಕ್ಷಾ ಅಂಚನ್ ಇವರು ನವದೆಹಲಿಯಲ್ಲಿ ಜನವರಿ 26ರಂದು ಜರಗಿದ ಪ್ರತಿಷ್ಠಿತ ಗಣರಾಜ್ಯೋತ್ಸವ ಕಾರ್ಯಕ್ರಮಗಳಲ್ಲಿ ಯಶಸ್ವಿಯಾಗಿ ಪಾಲ್ಗೊಂಡು, ಕಾಲೇಜಿಗೆ ಆಗಮಿಸುವ ಸಂದರ್ಭದಲ್ಲಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ಅಭಿನಂದನೆ ಸಲ್ಲಿಸಲಾಯಿತು.

ಕಾಲೇಜಿನ ಸಂಚಾಲಕರಾದ ವಂ. ಲಾರೆನ್ಸ್ ಮಸ್ಕರೇನಸ್ ಇವರು ಅಭಿನಂದನೆಯನ್ನು ಸಲ್ಲಿಸಿ, ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಲಿಯೋ ನೊರೊನ್ಹಾ, ವಂ. ವಿಜಯ್ ಲೋಬೊ, ವಂ. ಡಾ. ಆ್ಯಂಟನಿ ಪ್ರಕಾಶ್ ಮೊಂತೆರೊ, ತಾಲೂಕು ಪಂಚಾಯತ್ ಸದಸ್ಯೆಯಾಗಿರುವ ರಕ್ಷಾ ಇವರ ತಾಯಿ ಉಷಾ ಅಂಚನ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಕಾಲೇಜಿನ ಎನ್‍ಸಿಸಿ ಅಧಿಕಾರಿ ಲೆ. ಜೊನ್ಸನ್ ಡೇವಿಡ್ ಸಿಕ್ವೇರ ಸಂಯೋಜಿಸಿದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ಉಪಯುಕ್ತ ನ್ಯೂಸ್ ಸಿಗ್ನಲ್‌ ಗ್ರೂಪಿಗೆ ಜಾಯಿನ್ ಆಗಲು ಈ ಲಿಂಕ್‌ ಬಳಸಿ

Related posts

ನರ್ಮ್ ಬಸ್ಸುಗಳ ಸಂಚಾರಕ್ಕೆ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

Upayuktha

ಮಡಪ್ಪಾಡಿ ಪ್ಲಾಸ್ಟಿಕ್ ಮುಕ್ತ ಗ್ರಾಮ ಆಂದೋಲನಕ್ಕೆ ಚಾಲನೆ

Upayuktha

ಗೃಹರಕ್ಷಕರ ಪಶ್ಚಿಮ ವಲಯ ವೃತ್ತಿಪರ ಕ್ರೀಡಾಕೂಟ

Upayuktha