ರಾಜ್ಯ

ಬೆಂಗಳೂರಿನ ದಾವಣಗೆರೆ ಬೆಣ್ಣೆ ದೋಸೆ ಹೋಟೆಲ್ ಗೆ ಬೆಂಕಿ

ಬೆಂಗಳೂರು: ಬೆಂಗಳೂರು ನಗರದ ಬಸವನಗುಡಿ ಸಮೀಪದ ನೆಟ್ಕಲ್ಲಪ್ಪ ಸರ್ಕಲ್ ನಲ್ಲಿರುವ ದಾವಣಗೆರೆ ಬೆಣ್ಣೆದೋಸೆ ಹೋಟೆಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ.

ಹೋಟೆಲ್ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು ಈ ಅವಘಡ ಸಂಧರ್ಭದಲ್ಲಿ ಹೋಟೆಲ್ ನಲ್ಲಿದ್ದವರು ಹೊರಗೆ ಓಡಿ ಬಂದಿದ್ದಾರೆ. ಅದೃಷ್ಟವಶಾತ್ ಯಾವ ಪ್ರಾಣಹಾನಿ ಸಂಭವಿಸಿಲ್ಲ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿ ಅಗ್ನಿಶಾಮಕ ದಳ ಬೆಂಕಿ ನಂದಿಸಿದ್ದಾರೆ.

ಈ ಅವಘಡಕ್ಕೆ ಕಾರಣ ಶಾರ್ಟ್ ಸರ್ಕ್ಯೂಟ್ ಅಥವಾ ಅನಿಲ ಸೋರಿಕೆಯಿಂದ ಬೆಂಕಿ ಹೊತ್ತಿರಬಹುದೆಂದು ಶಂಕಿಸಲಾಗಿದೆ. ಬಸವನಗುಡಿ ಪೋಲೀಸರು ಸ್ಥಳ ಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆದರೆ ಈ ಬಗ್ಗೆ ಯಾವ ಪ್ರಕರಣ ದಾಖಲಾಗಿಲ್ಲವೆಂದು ಅವರು ಮಾಹಿತಿ ನೀಡಿದ್ದಾರೆ.

Related posts

ಕಾಪು ಕಡಲ ತೀರಕ್ಕೆ ಬಂದ ಬೆಂಗಳೂರಿನ ಇಬ್ಬರು ಯುವಕರು ಸಮುದ್ರ ಪಾಲು, ಮೂವರ ರಕ್ಷಣೆ

Harshitha Harish

ಮುಂಬೈ – ಬೆಂಗಳೂರು ಹೆದ್ದಾರಿಯಲ್ಲಿ ಲಾರಿಗಳ ಮಧ್ಯೆ ಅಪಘಾತ

Harshitha Harish

ಅಯೋಧ್ಯೆ ರಾಮಮಂದಿರ ನಿಧಿ ಸಂಗ್ರಹ ಅಭಿಯಾನ: ಶೀಘ್ರವೇ ಚೆನ್ನೈಯಲ್ಲಿ ಉದ್ಯಮಿಗಳ ಸಮಾವೇಶ- ಕೆ ರಾಜೇಶ್ ರಾವ್

Upayuktha