ನವದೆಹಲಿ: 72ನೇ ಗಣರಾಜ್ಯೋತ್ಸವ ದಿನವಾದ ಇಂದು ಇದೇ ಮೊದಲ ಬಾರಿಗೆ ಪರೇಡ್ ನಲ್ಲಿ ಲಡಾಖ್ ನಿಂದ ಸ್ತಬ್ಧ ಚಿತ್ರವನ್ನು ಪ್ರದರ್ಶನ ಮಾಡಲಾಯಿತು.
ಲಡಾಖ್ನ ಐತಿಹಾಸಿಕ ತಿಕ್ಸೆ ಮಾನೆಸ್ಟರಿ ಹಾಗೂ ಅದರ ಸಾಂಸ್ಕೃತಿ ಪರಂಪರೆ, ಸಾಮೂದಾಯಿಕ ಸೌಹಾರ್ದತೆಯನ್ನು ಪ್ರತಿಬಿಂಬಿಸುವ ಸ್ತಬ್ಧ ಚಿತ್ರವನ್ನು ಪ್ರದರ್ಶಿಸಲಾಯಿತು.
ಲಡಾಖ್ ನ ಟ್ಯಾಬ್ಲೋ ಲೇಹ್ ಜಿಲ್ಲೆಯ ಥಿಕ್ಸೆ ಬೆಟ್ಟದ ಮೇಲಿರುವ ಸುಂದರ ಥಿಕ್ಸೆ ಮಠವನ್ನು ಒಳಗೊಂಡಿರಲಿದ್ದು, ಇದು ಈ ಪ್ರದೇಶದಲ್ಲಿ ಹೆಚ್ಚು ಭೇಟಿ ನೀಡುವ ಪ್ರವಾಸಿ ತಾಣಗಳಲ್ಲಿ ಒಂದೆನಿಸಿದೆ.