ರಾಜ್ಯ

ಮಾಜಿ ಸಚಿವ ಎಸ್.ಎ.ರಾಮದಾಸ್ ಆರೋಗ್ಯ ಸಮಸ್ಯೆ ; ಆಸ್ಪತ್ರೆ ದಾಖಲು

ಮೈಸೂರು: ಮೈಸೂರಿನ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಎಸ್.ಎ.ರಾಮದಾಸ್ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು, ಹಾಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇಂದು ಬೆಳಿಗ್ಗೆ ಅವರಿಗೆ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿದ್ದು , ಮೈಸೂರಿನ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲು ವೈದ್ಯರು ಮುಂದಾಗಿದ್ದಾರೆ.

ಸದ್ಯಕ್ಕೆ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆಸ್ಪತ್ರೆಯಲ್ಲಿ ರಾಮದಾಸ್ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯ ಮೂಲಗಳು ತಿಳಿಸಿವೆ.

ಇವರು ಕಳೆದ ಎರಡು ದಿನಗಳಿಂದಲೂ ಮೈಸೂರು ದಸರಾ ಕಾರ್ಯಕ್ರಮಗಳಲ್ಲಿ ರಾಮದಾಸ್ ಅವರು ಭಾಗವಹಿಸಿದ್ದರು. ಇದೀಗ ದಿಢೀರ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಪರೀಕ್ಷಾ ವರದಿ ಇನ್ನೂ ಬಂದಿಲ್ಲ ಎಂದು ಆಸ್ಪತ್ರೆ ಮೂಲಗಳು ತಿಳಿಸಿದ್ದಾರೆ.

Related posts

ಹಿಂದೂ ನಂಬಿಕೆಗಳ ವಿಡಂಬನೆ: 6ನೇ ತರಗತಿ ಸಮಾಜ ವಿಜ್ಞಾನದ ನಿರ್ದಿಷ್ಟ ಪಾಠ ಬೋಧಿಸದಂತೆ ಸಚಿವರ ಸೂಚನೆ

Upayuktha

ಕಾಸರಗೋಡು: ಎಡನೀರು ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ದೇಹಾಂತ್ಯ

Upayuktha

ಗಡಿಗಳಲ್ಲಿ ಸಂಚಾರ ನಿರ್ಬಂಧಿಸುವಂತಿಲ್ಲ: ಕೇಂದ್ರ ಕಟ್ಟುನಿಟ್ಟಿನ ಸೂಚನೆ

Upayuktha News Network