ರಾಜ್ಯ

ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಅಕ್ರಮ ಮತದಾನ ಆರೋಪ ; ಅರ್ಜಿ ವಜಾ

ಕಲಬುರಗಿ: ಮಸ್ಕಿ ಕ್ಷೇತ್ರದ ಮಾಜಿ ಶಾಸಕರಾದ ಪ್ರತಾಪ್ ಗೌಡ ಪಾಟೀಲ್ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅಕ್ರಮ ಮತದಾನ ಮೂಲಕ ಗೆಲವು ಸಾಧಿಸಿದ್ದಾರೆಂದು ಸಲ್ಲಿಸಲಾಗಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ಪ್ರತಾಪ್ ಗೌಡ ಪಾಟೀಲ್ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಹೀಗಾಗಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಬಸನಗೌಡ ತುರವಿಹಾಳ ನ್ಯಾಯಾಲಯ ಮೊರೆ ಹೋಗಿದ್ದರು.

ಆದರೆ ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಪಾಟೀಲರಿಗಿದ್ದ ಮಸ್ಕಿ ಉಪಚುನಾವಣೆಗಿದ್ದ ಅಡ್ಡಿ ನಿವಾರಣೆಯಾದಂತಾಗಿದೆ.

ಈಗಾಗಲೇ ಕಾಂಗ್ರೆಸ್ ನಿಂದ ಗೆದ್ದಿದ್ದ ಪ್ರತಾಪ್ ಗೌಡ ಪಾಟೀಲ್ ಅವರು ಸಮ್ಮಿಶ್ರ ಸರ್ಕಾರದ ವೇಳೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು.

ಈ ಹಿನ್ನೆಲೆಯಲ್ಲಿ ಪ್ರತಾಪ್ ಗೌಡ ಅವರನ್ನು ಅನರ್ಹಗೊಳಿಸಲಾಗಿತ್ತು.

Related posts

10 ಶಾಲೆಗಳನ್ನು ದತ್ತು ಪಡೆದ ಮೈಸೂರು ವಿಶ್ವವಿದ್ಯಾಲಯ

Harshitha Harish

ಮೂರು ಬಾರಿ ಗೆದ್ದ ಕರಾವಳಿಯ ಕುವರನಿಗೆ ‘ಕರುನಾಡ ಕಮಲಪೀಠ’

Upayuktha

ಉಪ ಚುನಾವಣೆಯಲ್ಲಿ 13 ಸ್ಥಾನಗಳು ಬಿಜೆಪಿಗೆ: ಸಿಎಂ ಬಿಎಸ್‌ವೈ ಭವಿಷ್ಯ

Upayuktha