ಕೋಲ್ಕತ್ತಾ: ಬಿಸಿಸಿಐ ಅಧ್ಯಕ್ಷ ಮತ್ತು ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಆರೋಗ್ಯ ಸಮಸ್ಯೆ ಯಿಂದ ಅವರನ್ನು ದಕ್ಷಿಣ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಿಗ್ಗೆ ಗಂಗೂಲಿ ತನ್ನ ಸ್ವತಃ ಜಿಮ್ ನಲ್ಲಿ ವ್ಯಾಯಾಮ ಮಾಡುವಾಗ ತಲೆತಿರುಗು ಉಂಟಾಗಿದ್ದು, ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿದೆ.
ಅವರ ಚಿಕಿತ್ಸೆಗಾಗಿ ಆಸ್ಪತ್ರೆಯು ಈಗಾಗಲೇ ವಿಶೇಷ ವೈದ್ಯರ ಮಂಡಳಿಯನ್ನು ರಚನೆ ಮಾಡಿದೆ. ಎಸ್ಎಸ್ಕೆಎಂ ಆಸ್ಪತ್ರೆಯ ಹೃದ್ರೋಗ ತಜ್ಞರನ್ನು ಗಂಗೂಲಿಯವರ ಚಿಕಿತ್ಸೆಗಾಗಿ ಕರೆತರಲಾಗುತ್ತಿದೆ.