ದೇಶ-ವಿದೇಶ

80 ಕೋಟಿ ಬಡ ಜನರಿಗೆ ಏಳೆಂಟು ತಿಂಗಳಲ್ಲಿ ಉಚಿತ ಪಡಿತರ ಪೂರೈಕೆ – ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಕೊರೊನಾ ವೈರಸ್ ಹಾವಳಿ ನಡುವೆ ಕಳೆದ ಏಳೆಂಟು ತಿಂಗಳಲ್ಲಿ 80 ಕೋಟಿ ಬಡ ಜನರಿಗೆ ಉಚಿತವಾಗಿ ಪಡಿತರವನ್ನು ಪೂರೈಕೆ ಮಾಡಲಾಗಿದೆ

ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ತಿಳಿಸಿದ್ದಾರೆ.

ಈಗಾಗಲೇ ಆಹಾರ ಮತ್ತು ಕೃಷಿ ಸಂಸ್ಥೆ(ಎಫ್ಎಒ)ಯ 75ನೇ ವಾರ್ಷಿಕೋತ್ಸವದ ಅಂಗವಾಗಿ 75ರ ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಿ ಈ ಬಗ್ಗೆ ಮಾತನಾಡಿದ ಪ್ರಧಾನಿ ಮೋದಿ, ಕೋವಿಡ್ ಸೋಂಕಿನ ಬಿಕ್ಕಟ್ಟಿನ ನಡುವೆ ಹಸಿವು ಮತ್ತು ಅಪೌಷ್ಟಿಕತೆ ಬಗ್ಗೆ ಜಗತ್ತಿನಾದ್ಯಂತ ವಿವಿಧ ಚರ್ಚೆಗಳು ನಡೆಯುತ್ತಿದ್ದು, ದೇಶದಲ್ಲಿ  1.5 ಲಕ್ಷ ಕೋಟಿ ಮೊತ್ತದ ಆಹಾರ ಧಾನ್ಯಗಳನ್ನು ಬಡಜನರಿಗೆ ವಿತರಿಸಲಾಗಿದೆ ಎಂದು ತಿಳಿಸಿದರು.

ಅಪೌಷ್ಟಿಕತೆಯನ್ನು ನಿಭಾಯಿಸುವ ನಿಟ್ಟಿನಲ್ಲಿ ಪ್ರೋಟೀನ್ ಹಾಗೂ ಕಬ್ಬಿಣ ಮತ್ತು ಸತುವುಗಳಂತಹ ಪೌಷ್ಟಿಕ ಪದಾರ್ಥ ಹೆಚ್ಚಾಗಿರುವ ಆಹಾರ ಬೆಳೆಗಳನ್ನು ದೇಶದಲ್ಲಿ ಪ್ರೋತ್ಸಾಹಿಸಲಾಗುತ್ತಿದೆ.

ಹಾಗೆಯೇ ವಿಶ್ವ ಆಹಾರ ಕಾರ್ಯಕ್ರಮಕ್ಕೆ ನೊಬೆಲ್ ಶಾಂತಿ ಪ್ರಶಸ್ತಿ ದೊರಕಿದ್ದು ದೊಡ್ಡ ಮಟ್ಟದ ಸಾಧನೆಯಾಗಿದೆ. ಅದರೊಂದಿಗಿನ ನಮ್ಮ ಚಾರಿತ್ರಿಕ ಒಡನಾಟ ಹಾಗೂ ಕೊಡುಗೆಗೆ ಸಾಕಷ್ಟು ಸಂತೋಷವಾಗುತ್ತಿದೆ ಎಂದರು.

ಹಾಗೆಯೇ ವಿಶ್ವ ಆಹಾರ ದಿನದ ಈ ವೇಳೆಯಲ್ಲಿ ವಿಶ್ವದಾದ್ಯಂತ ಅಪೌಷ್ಟಿಕತೆಯನ್ನು ಹೋಗಲಾಡಿಸಲು ನಿರಂತರವಾಗಿ ಶ್ರಮ ಪಡುತ್ತಿರುವ ಎಲ್ಲಾರನ್ನು ಅಭಿನಂದಿಸುವುದಾಗಿ ಹೇಳಿದ ಪ್ರಧಾನಿ, ಇತ್ತೀಚಿಗೆ ಅಭಿವೃದ್ಧಿಪಡಿಸಲಾದ ಎಂಟು ಪ್ರಭೇದದ ಬೆಳೆಗಳನ್ನು ದೇಶಕ್ಕೆ ನೀಡಿದರು. ಹಸಿವು ಮತ್ತು ಅಪೌಷ್ಟಿಕತೆಯನ್ನು ಸಂಪೂರ್ಣವಾಗಿ ತೊಡೆದು ಹಾಕುವ ಸಂಕಲ್ಪಕ್ಕೆ ಈ ಸಮಾರಂಭ ಸಾಕ್ಷಿಯಾಗಿದೆ.

Related posts

ಇದೇ ಮೊದಲು: ಜಮ್ಮು-ಕಾಶ್ಮೀರ ಹೈಕೋರ್ಟ್‌ ನೇಮಕಾತಿಗೆ ದೇಶದೆಲ್ಲೆಡೆಯಿಂದ ಅರ್ಜಿ ಆಹ್ವಾನ

Upayuktha

ಕೋವಿಡ್ 19ಗೆ ಕೇರಳದಲ್ಲಿ ಮೊದಲ ಬಲಿ; ದೇಶದಲ್ಲಿ ಒಟ್ಟು ಸಾವಿನ ಸಂಖ್ಯೆ 21ಕ್ಕೆ

Upayuktha

ಮಾಸ್ಕ್‌ ತಯಾರಿಸುತ್ತಿರುವ ಸಿಆರ್‌ಪಿಎಫ್‌ ಯೋಧರು

Harshitha Harish

Leave a Comment