ದೇಶ-ವಿದೇಶ ಪ್ರಮುಖ

ಭಾರತದ ಹೊಸ ಸಿಎಜಿಯಾಗಿ ಜಿ ಸಿ ಮುರ್ಮು ನಿಯುಕ್ತಿ

ನವದೆಹಲಿ: ಭಾರತದ ನೂತನ ನಿಯಂತ್ರಕರು ಮತ್ತು ಮಹಾಲೇಖಪಾಲರಾಗಿ (ಸಿಎಜಿ) ಜಮ್ಮು ಮತ್ತು ಕಾಶ್ಮೀರದ ನಿರ್ಗಮಿತ ಲೆ.ಗವರ್ನರ್. ಗಿರೀಶ್‌ಚಂದ್ರ ಮುರ್ಮು ಅವರನ್ನು ನಿಯುಕ್ತಿಗೊಳಿಸಲಾಗಿದೆ.
ಮುರ್ಮು ಅವರ ನೇಮಕಾತಿ ಸಂಬಂಧ ಗುರುವಾರ ರಾತ್ರಿ ರಾಷ್ಟ್ರಪತಿ ಭವನದಿಂದ ಅಧಿಕೃತ ಪ್ರಕಟಣೆ ಹೊರಬಿದ್ದಿದೆ. ಅವರು ಶನಿವಾರ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಮುರ್ಮು ಅವರು ಬುಧವಾರವಷ್ಟೇ ಜಮ್ಮು ಮತ್ತು ಕಾಶ್ಮೀರದ ಲೆ.ಗವರ್ನರ್ ಹುದ್ದೆಗೆ ರಾಜೀನಾಮೆ ನೀಡಿದ್ದರು. ಹಾಲಿ ಸಿಎಜಿ ರಾಜೀವ್ ಮೆಹರ್ಷಿ ಅವರು ಆ.8ರಂದು 65ನೇ ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ನಿವೃತ್ತರಾಗುತ್ತಿದ್ದಾರೆ. ಸಿಎಜಿ ಸಾಂವಿಧಾನಿಕ ಹುದ್ದೆಯಾಗಿರುವ ಕಾರಣ ಅದನ್ನು ಖಾಲಿ ಬಿಡುವಂತಿಲ್ಲ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮುರ್ಮು ಅವರನ್ನು ಮುಂದಿನ ಸಿಎಜಿಯಾಗಿ ನೇಮಕ ಮಾಡಿದೆ.

1985ನೇ ಬ್ಯಾಚ್‌ನ ಗುಜರಾತ್ ಕೇಡರ್‌‌ನ 60 ವರ್ಷದ ಮುರ್ಮು ಅವರು ಕಳೆದ ವರ್ಷ ಅ.29ರಂದು ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಪ್ರಥಮ ಲೆ.ಗವರ್ನರ್ ಆಗಿ ಅಧಿಕಾರ ವಹಿಸಿದ್ದರು. ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿದ್ದ ವೇಳೆ ಮುರ್ಮು ಅವರು ಅಲ್ಲಿನ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಬಳಿಕ ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.

ಮನೋಜ್ ಸಿನ್ಹಾ ಜಮ್ಮು ಮತ್ತು ಕಾಶ್ಮೀರದ ಹೊಸ ಲೆ.ಗವರ್ನರ್
ಈ ಮಧ್ಯೆ ಜಮ್ಮು ಮತ್ತು ಕಾಶ್ಮೀರದ ಹೊಸ ಲೆಫ್ಟಿನೆಂಟ್ ಗವರ್ನರ್ ಆಗಿ ಮಾಜಿ ಕೇಂದ್ರ ಸಚಿವ ಮನೋಜ್ ಸಿನ್ಹಾ ಅವರನ್ನು ನೇಮಿಸಲಾಗಿದೆ.
ಉತ್ತರಪ್ರದೇಶದ ಬಿಜೆಪಿ ನಾಯಕರಾಗಿರುವ 61ರ ಹರೆಯದ ಸಿನ್ಹಾ ಅವರು ಗ್ರಾಮೀಣ ಪ್ರದೇಶದ ಜನರೊಂದಿಗೆ ಬೆರೆತು ಕಾರ್ಯನಿರ್ವಹಿಸುವುದಕ್ಕೆ ಹೆಸರುವಾಸಿ. ಶುಕ್ರವಾರ ಸಿನ್ಹಾ ಅವರು ಜಮ್ಮು ಮತ್ತು ಕಾಶ್ಮೀರದ ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್ ಅವರಿಂದ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿ ರದ್ದುಗೊಂಡು ಒಂದು ವರ್ಷವಾದ ಸಂದರ್ಭದಲ್ಲೇ ಈ ಬದಲಾವಣೆ ನಡೆದಿದೆ.

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

 

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್  App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Related posts

ಕೋವಿಡ್ 19- ಮಧ್ಯಾಹ್ನದ ಸುದ್ದಿ: ದ.ಕ. ಜಿಲ್ಲೆಯಲ್ಲಿ ಎರಡು, ರಾಜ್ಯದಲ್ಲಿ 42 ಕೊರೊನಾ ಪಾಸಿಟಿವ್

Upayuktha

ರಾಜ್ಯದಲ್ಲಿ ಕೋವಿಡ್ ಲಸಿಕೆ ವಿತರಣೆಗೆ ಸಿದ್ಧತೆ: ಆರೋಗ್ಯ ಸಚಿವ ಡಾ.ಕೆ. ಸುಧಾಕರ್

Upayuktha

39ನೇ ಎಬಿವಿಪಿ ರಾಜ್ಯ ಸಮ್ಮೇಳನ ಉದ್ಘಾಟನೆ: ಅಕ್ಷರಸಂತ ಪದ್ಮಶ್ರೀ ಹಾಜಬ್ಬಗೆ ಸಮ್ಮಾನ

Upayuktha