ಕ್ಷೇತ್ರಗಳ ವಿಶೇಷ ಪ್ರಮುಖ ರಾಜ್ಯ

ಗೋಕರ್ಣ ಮಹಾಬಲೇಶ್ವರನ ದರ್ಶನಕ್ಕೆ ನಾಳೆಯಿಂದ (ಅ.5) ಅವಕಾಶ

ಚಿತ್ರ ಕೃಪೆ: ಗೋಕರ್ಣ.ಓಆರ್‌ಜಿ

ಗೋಕರ್ಣ: ಪುರಾಣ ಪ್ರಸಿದ್ಧ ಗೋಕರ್ಣ ಮಹಾಬಲೇಶ್ವರ ದೇವಸ್ಥಾನವು ಅ.5ರಿಂದ ಭಕ್ತರಿಗೆ ತೆರೆದುಕೊಳ್ಳಲಿದೆ. ಸಾರ್ವಜನಿಕರು ಎಂದಿನಂತೆ ಆತ್ಮಲಿಂಗದ ದರ್ಶನ ಪಡೆಯಬಹುದು ಎಂದು ದೇಗುಲದ ಆಡಳಿತ ಮಂಡಳಿ ತಿಳಿಸಿದೆ.

ಅಂದಿನಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆ ಸೇರಿದಂತೆ ಎಲ್ಲ ಸೇವಾವಕಾಶಗಳು ಇರುತ್ತವೆ. ಕೊರೊನಾ ವೈರಸ್ ಸಂಬಂಧ ದೇಶದಲ್ಲಿ ಲಾಕ್‍ಡೌನ್ ಘೋಷಣೆಯಾದ ಬಳಿಕ ದೇಗುಲಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿತ್ತು. ದೇಗುಲವು ಆರು ತಿಂಗಳಿನ ಬಳಿಕ ಸಾಮಾನ್ಯ ಭಕ್ತರಿಗೆ ತೆರೆದುಕೊಳ್ಳುತ್ತಿದೆ.

ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರು ಕಟ್ಟುನಿಟ್ಟಾಗಿ ಅಂತರ ಕಾಯ್ದುಕೊಳ್ಳಬೇಕು. ಮುಖಗವಸು ಧರಿಸುವುದು, ನೈರ್ಮಲ್ಯ ಕಾಪಾಡುವುದು ಸೇರಿದಂತೆ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಆಡಳಿತ ಮಂಡಳಿ ಅಧ್ಯಕ್ಷ ಜಿ.ಕೆ.ಹೆಗಡೆ ಮತ್ತು ಉಪಾಧಿವಂತ ಮಂಡಳಿ ಸದಸ್ಯರು ತಿಳಿಸಿದ್ದಾರೆ.

ದೇವಸ್ಥಾನಕ್ಕೆ ಬರುವ ಪುರುಷರಿಗೆ ಧೋತಿ ಮತ್ತು ಶಲ್ಯ, ಹೆಂಗಸರಿಗೆ ಸೀರೆ ಅಥವಾ ಚೂಡಿದಾರ ಧರಿಸುವುದು ಕಡ್ಡಾಯ ಮಾಡಲಾಗಿದೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್ App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Related posts

ಹಲ್ಲಿಗೂ ಬಂತು ಹಚ್ಚೆ: ಫ್ಯಾಷನ್ನಿನ ಹೊಸ ರೂಪ

Upayuktha

ಸರಕಾರಿ ಟೆಂಡರ್‌ನಲ್ಲಿ ಭಾಗವಹಿಸಲು ಎಂಎಸ್‌ಎಂಇಗಳಿಗೆ ಕೇಂದ್ರದ ಮಾದರಿ ವಿನಾಯಿತಿ ನೀಡಿ; ಎಚ್‌ಡಿಕೆ ಆಗ್ರಹ

Upayuktha

ವಿವೇಕಾನಂದ ಕಾಲೇಜಿನಲ್ಲಿ ನಾಳೆ (ಜ.29) ‘ಮೀಡಿಯಾ ವಿವೇಕ್’ ರಾಜ್ಯಮಟ್ಟದ ಪ್ರತಿಭೋತ್ಸವ

Upayuktha

Leave a Comment