ಕ್ಯಾಂಪಸ್ ಸುದ್ದಿ ಗ್ರಾಮಾಂತರ ಸ್ಥಳೀಯ

ಏಕತೆ ಇದ್ದಲ್ಲಿ ಉತ್ತಮ ಆಳ್ವಿಕೆ ಸಾಧ್ಯ: ಡಾ.ಸನ್ಮತಿಕುಮಾರ್

ಉಜಿರೆ: ಜೀವನದಲ್ಲಿ ಸಾಧಿಸಲು ಅಸಾಧ್ಯವಾದುದು ಯಾವುದು ಇಲ್ಲ. ಸಾಧಿಸುವ ಛಲ ಇದ್ದರೆ ಫಲ ಸಿಗಲು ಸಾಧ್ಯ, ಐಕ್ಯತೆಯ ಕೊರತೆ ಇದ್ದರೆ ಆಳ್ವಿಕೆ ನಡೆಸಲು ಸಾಧ್ಯವಿಲ್ಲ ಎಂದು ಉಜಿರೆ ಎಸ್.ಡಿ.ಎಂ ಕಾಲೇಜಿನ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಸನ್ಮತಿಕುಮಾರ್ ಹೇಳಿದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಮ್ಯಕ್ ದರ್ಶನ ವೇದಿಕೆಯಲ್ಲಿ ಆಯೋಜಿಸಿದ್ದ ವಿಭಾಗದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಉದ್ಘಾಟಕರಾಗಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಿಭಾಗದ ಮುಖ್ಯಸ್ಥ ಡಾ.ಪುಂಡರೀಕ ಮಾತನಾಡಿ ಇತಿಹಾಸ ವಿಷಯವು ಸ್ಪರ್ಧಾತ್ಮಕ ದೃಷ್ಟಿಯಲ್ಲಿ ಒಂದು ಉತ್ತಮ ಆಯ್ಕೆಯಾಗಿದ್ದು, ಇದು ಜಗತ್ತಿನಲ್ಲಿ ಪ್ರಾಮುಖ್ಯತೆ ಪಡೆದಿರುವ ವಿಭಾಗವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಂದ ಮೂಡಿ ಬಂದ “ಅನ್ವೇಷಣೆ” ಭಿತ್ತಿಪತ್ರ ಹಾಗೂ “ಅನ್ವೇಷಣೆ ಇ-ಪೇಪರ”ನ್ನು ಬಿಡುಗಡೆಗೊಳಿಸಲಾಯಿತು.

ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಮನೋರಂಜನಾ ಚಟುವಟಿಕೆಗಳನ್ನು ಏರ್ಪಡಿಸಲಾಯಿತು. ಇತಿಹಾಸ ವಿಭಾಗದ ಎಲ್ಲ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿ ಅನುರಾಗ್ ಸ್ವಾಗತಿಸಿ, ಮಂಜುನಾಥ್ ವಂದಿಸಿ, ಧನ್ಯಾ ಪ್ರಭು ನಿರೂಪಿಸಿದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Related posts

ಕುಂದಾಪುರ: ಪಾಕ್‌ ಪರ ಘೋಷಣೆ ಕೂಗಿದ ಆರೋಪಿ ಪೊಲೀಸ್ ವಶಕ್ಕೆ

Upayuktha

ಯುವ ಸಂಸ್ಕೃತ ವಿದ್ವಾಂಸ ಡಾ. ಪಿ. ವಿನಯಾಚಾರ್ಯ ರವರಿಗೆ ಡಿ.ಲಿಟ್ ಪದವಿ ಪ್ರದಾನ

Upayuktha

ಫೆ.12: ಉಜಿರೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ವಿಚಾರ ಸಂಕಿರಣ

Upayuktha