ಬೆಂಗಳೂರು: ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ್ದು , ಕಳೆದ ವರ್ಷ ನೀಡಿದ ಹಳೆಯ ಬಸ್ ಪಾಸ್ʼಗಳು ಮಾರ್ಚ್ 31ರವರೆಗೆ ಮಾನ್ಯ ವಾಗಿರುತ್ತದೆ.
ಹಾಗಾಗಿ ವಿದ್ಯಾರ್ಥಿಗಳು ಅದನ್ನು ತೋರಿಸಿ ಬಸ್ʼನಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಸಾರಿಗೆ ಸಚಿವ ಮತ್ತು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್ಗಳಲ್ಲಿ ವಿದ್ಯಾರ್ಥಿಗಳು 2019-20ನೇ ಸಾಲಿನ ಪಾಸ್ʼನ ಆಧಾರದಲ್ಲಿ ಉಚಿತವಾಗಿ ಪ್ರಯಾಣಿಸಲು ಫೆಬ್ರವರಿ 28ರವರೆಗೆ ಅನುವು ಮಾಡಿಕೊಡಲಾಗಿತ್ತು.
ಇದೀಗ ಶಾಲಾ ಕಾಲೇಜುಗಳು ಪುನರಾರಂಭವಾಗುತ್ತಿರುವ ಕಾರಣದಿಂದ ಈ ಅವಧಿಯನ್ನು ಒಂದು ತಿಂಗಳವರೆಗೂ ವಿಸ್ತರಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ಸಚಿವರು ಮಾಹಿತಿ ನೀಡಿದ್ದಾರೆ
ವಿದ್ಯಾರ್ಥಿಗಳಿಗೆ ಪಾಸ್ ಪಡೆಯಲು ಹೆಚ್ಚಿನ ಕಾಲಾವಕಾಶ ನೀಡಿದ್ದು, ಎಲ್ಲಾ ವರ್ಗದ ಶಾಲಾ ಕಾಲೇಜು ವಿದ್ಯಾರ್ಥಿಗಳು ಕಳೆದ ವರ್ಷದ ಬಸ್ ಪಾಸ್ʼ ನೊಂದಿಗೆ ಪ್ರಸ್ತುತ ಸಾಲಿನಲ್ಲಿ ಶಾಲಾ ಕಾಲೇಜುಗಳಿಗೆ ಶುಲ್ಕ ಪಾವತಿಸಿರುವ ರಸೀದಿ ತೋರಿಸಿ ಬಸ್ʼನಲ್ಲಿ ಪ್ರಯಾಣಿಸಬಹುದು.
ಇನ್ನೂ ಈ ಸೌಲಭ್ಯ ಕೂಡ ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ.