ರಾಜ್ಯ ಶಿಕ್ಷಣ

ಅತಿಥಿ ಉಪನ್ಯಾಸಕರಿಗೂ ಆರ್ಥಿಕ ನೆರವು ನೀಡಬೇಕು: ಎಚ್‌.ಡಿ ಕುಮಾರಸ್ವಾಮಿ

ಬೆಂಗಳೂರು: ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಕೆಲಸವಿಲ್ಲದೇ ಈ ಕಡೆ ವೇತನವಿಲ್ಲದೆ ಕಂಗೆಟ್ಟಿರುವ ರಾಜ್ಯದ ಸುಮಾರು ಎರಡೂವರೆ ಲಕ್ಷ ಖಾಸಗಿ ಶಾಲಾ ಗುರುಗಳು ಮತ್ತು ಅತಿಥಿ ಉಪನ್ಯಾಸಕರ ನೆರವಿಗೆ ಸರ್ಕಾರ ಅತೀ ಶೀಘ್ರವಾಗಿ ಪರಿಹಾರಕ್ಕೆ ಮುಂದಾಗಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ರಾಜ್ಯಾದ್ಯಂತ 20 ಸಾವಿರಕ್ಕೂ ಹೆಚ್ಚು ಖಾಸಗಿ ಶಾಲೆಗಳ ಶಿಕ್ಷಕರಿಗೆ ಕಳೆದ ಏಪ್ರಿಲ್‌ನಿಂದ ವೇತನವಿಲ್ಲದೆ ದಿನ ನಿತ್ಯ ಜೀವನ ಸಾಗಿಸಲು ಪರದಾಡುತ್ತಿದ್ದಾರೆ. ಅತಿಥಿ ಉಪನ್ಯಾಸಕರ ನೋವು ಇದಕ್ಕಿಂತ ಕಷ್ಟದ ಪರಿಸ್ಥಿತಿಯಲ್ಲಿದೆ. ಸರ್ಕಾರ ಈ ಬಗ್ಗೆ ಖಾಸಗಿ ಶಾಲಾ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ಕಷ್ಟ ದಲ್ಲಿ ಸಿಲುಕಿರುವ ಶಿಕ್ಷಕರ ನೆರವಿಗೆ ತಕ್ಷಣ ಮುಂದಾಗಬೇಕೆಂದು ಮನವಿ ಮಾಡಿದ್ದಾರೆ.

 

ಅಲ್ಲದೇ, ಕೆಲ ಖಾಸಗಿ ಶಾಲೆಗಳಲ್ಲಿ ಶೇಕಡ ಐವತ್ತಕ್ಕಿಂತಲೂ ಕಡಿಮೆ ವೇತನ ನೀಡುತ್ತಿದ್ದರೂ ಸರಿಯಾದ ಸಮಯಕ್ಕೆ ಪಾವತಿಸುತ್ತಿಲ್ಲ. ಬೇರೆ ಉದ್ಯೋಗ ಗೊತ್ತಿಲ್ಲದ ಲಕ್ಷಾಂತರ ಖಾಸಗಿ ಶಿಕ್ಷಕ ಸಮುದಾಯ ಮನೆ ಬಾಡಿಗೆ ಕಟ್ಟಲೂ ಆಗದೆ ಕಷ್ಟ ಅನುಭವಿಸುತ್ತಿದ್ದಾರೆ. ಇಂತಹ ಶಿಕ್ಷಕರಿಗೆ ಸರ್ಕಾರ ವಿಶೇಷ ರೀತಿಯ ಆರ್ಥಿಕ ನೆರವು ಮತ್ತು ಸಾಲ ಸೌಲಭ್ಯ ಒದಗಿಸಬೇಕು ಎಂದೂ ಹೇಳಿದ್ದಾರೆ.

ಇದರ ಜೊತೆಗೆ ವಿದ್ಯಾರ್ಥಿಗಳು ಶುಲ್ಕ ಕಟ್ಟುತ್ತಿಲ್ಲ ಎಂಬ ಕಾರಣ ಹೇಳಿ ಶಿಕ್ಷಕರನ್ನು ಕೆಲಸದಿಂದ ತೆಗೆಯಲು ಆಡಳಿತ ಮಂಡಳಿಗಳು ಮುಂದಾಗಿದ್ದು ಇದನನ್ನು ತಪ್ಪಿಸಲು ಸರ್ಕಾರ ತಡ ಮಾಡದೆ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಕುಮಾರಸ್ವಾಮಿ ಸರ್ಕಾರಕ್ಕೆ ವಿನಂತಿಸಿದ್ದಾರೆ.

 

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

 

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್  App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

 

Related posts

ತುಮಕೂರು ಮಾತೃಸಂಗಮ: ಅಂತಾರಾಷ್ಟ್ರೀಯ ಯೋಗಶಿಕ್ಷಕ ವಿಜಯಗಣೇಶ ಕೋರಿಕ್ಕಾರು ಅವರಿಂದ ಯೋಗ ಪ್ರಾತ್ಯಕ್ಷಿಕೆ

Upayuktha

ಮಡಿಕೇರಿಯಲ್ಲಿ ಹುಚ್ಚ ವೆಂಕಟ್ ದಾಂಧಲೆ: ಬಿತ್ತು ಭರ್ಜರಿ ಧರ್ಮದೇಟು

Upayuktha

ಎಸ್.ಎಸ್.ಎಲ್.ಸಿ. ಫಲಿತಾಂಶ: ಧರ್ಮಸ್ಥಳದ ಆಂಗ್ಲಮಾಧ್ಯಮ ಶಾಲೆಗೆ ಶೇ. 91.83

Upayuktha

Leave a Comment

error: Copying Content is Prohibited !!