ರಾಜ್ಯ

ಸಿಡಿಲು ಬಡಿದು ಇಬ್ಬರು ಮಕ್ಕಳ ಸ್ಥಿತಿ ಗಂಭೀರ

ಹಳೆಯಂಗಡಿ: ಆಟವಾಡುತ್ತಿದ್ದ ಇಬ್ಬರು ಪುಟ್ಟ ಮಕ್ಕಳಿಗೆ ಸಿಡಿಲು ಬಡಿದ ಪರಿಣಾಮ ಮಕ್ಕಳ ಸ್ಥಿತಿ ಗಂಭೀರವಾಗಿದ್ದು ಇವರನ್ನು ಮುಕ್ಕ ಶ್ರೀನಿವಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಲ್ಲಿಯ ಇಂದಿರಾನಗರದ ಬೊಳ್ಳೂರು ಮಸೀದಿ ಹಿಂಭಾಗದ ಮನೆಯ ಮುಂಭಾಗದಲ್ಲಿ ಆಟವಾಡುತ್ತಿದ್ದ ಮನ್ಸೂರ್ ಎನ್ನುವ ವ್ಯಕ್ತಿಯ ಮಗ ನಿಹಾನ್ (5) ವರ್ಷ ಹಾಗೂ ಗಂಗಾವತಿ ಮೂಲದ ದುರ್ಗಪ್ಪ ಎಂಬುವವರ ಮಗ ಮಾರುತಿ (6) ವರ್ಷ ಪ್ರಾಯದ ಮಕ್ಕಳಿಗೆ ಸಿಡಿಲು ಬಡಿದ ಪರಿಣಾಮ ಮೂರ್ಛೆ ತಪ್ಪಿ ಹೋಗಿದ್ದರು ಎನ್ನಲಾಗಿದೆ.

ತಕ್ಷಣ ಅವರನ್ನು ಸ್ಥಳೀಯರ ಸಹಾಯದಿಂದ ಗಂಭೀರ ಸ್ಥಿತಿಯಲ್ಲಿದ್ದ ಮಕ್ಕಳನ್ನು ಮುಕ್ಕ ಶ್ರೀನಿವಾಸ ಆಸ್ಪತ್ರೆಗೆ ದಾಖಲಿಸಲಾಯಿತು.

ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿದ್ದು ವೈದ್ಯರ ತಂಡ ಮಕ್ಕಳಿಗೆ ಕೃತಕ ಉಸಿರಾಟ ನೀಡಿ ಚಿಕಿತ್ಸೆ ನೀಡಲಾಗುತ್ತಿದೆ.

Related posts

ವಿಧಾನ ಪರಿಷತ್ ಸದಸ್ಯ ಪ್ರಸನ್ನಕುಮಾರ್ ಪುತ್ರ ಸುಹಾಸ್ ಹೃದಯಾಘಾತ ದಿಂದ ನಿಧನ

Harshitha Harish

ಎಸ್‌ಎಸ್‌ಎಲ್‌ಸಿ: ಕಟ್ಟುನಿಟ್ಟಿನ ಮಾರ್ಗಸೂಚಿ ಪಾಲನೆಯೊಂದಿಗೆ ಪರೀಕ್ಷೆಗೆ ಹೈಕೋರ್ಟ್ ಅನುಮತಿ

Upayuktha

ವಿಷ್ಣು ವರ್ಧನ್ ಸ್ಮಾರಕ ಭವನ ನಿರ್ಮಾಣ ; ಬಿಎಸ್ ವೈ ಆನ್ಲೈನ್ ಮೂಲಕ ಚಾಲನೆ

Harshitha Harish