ದೇಶ-ವಿದೇಶ ಪ್ರಮುಖ

ಅ.21ಕ್ಕೆ ಮಹಾರಾಷ್ಟ್ರ, ಹರ್ಯಾಣ ವಿಧಾನಸಭೆ ಚುನಾವಣೆ; 24ಕ್ಕೆ ಮತ ಎಣಿಕೆ

ಕರ್ನಾಟಕದ 15 ವಿಧಾನಸಭೆ ಕ್ಷೇತ್ರಗಳಿಗೂ ಅಂದೇ ಚುನಾವಣೆ

ಮುಖ್ಯ ಚುನಾವಣೆ ಆಯುಕ್ತ ಸುನಿಲ್ ಅರೋರಾ (ಚಿತ್ರ ಕೃಪೆ: ಪಿಐಬಿ)

ಹೊಸದಿಲ್ಲಿ: ಮಹಾರಾಷ್ಟ್ರ ಮತ್ತು ಹರಿಯಾಣ ವಿಧಾನಸಭೆಗಳಿಗೆ ಅಕ್ಟೋಬರ್‌ 21ರಂದು ಚುನಾವಣೆ ನಡೆಸುವುದಾಗಿ ಚುನಾವಣೆ ಆಯೋಗ ಶನಿವಾರ ಪ್ರಕಟಿಸಿದೆ.

ಎರಡೂ ರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಅಕ್ಟೋಬರ್ 24ರಂದು ನಡೆಯಲಿದೆ ಎಂದು ಮುಖ್ಯ ಚುನಾವಣೆ ಆಯುಕ್ತ ಸುನಿಲ್ ಅರೋರಾ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು.

ಅರುಣಾಚಲ ಪ್ರದೇಶ, ಬಿಹಾರ, ಛತ್ತೀಸಗಡ, ಅಸ್ಸಾಂ, ಗುಜರಾತ್, ಹಿಮಾಚಲ ಪ್ರದೇಶ, ಕರ್ನಾಟಕ, ಕೇರಳ, ಮಧ್ಯ ಪ್ರದೇಶ, ಮೇಘಾಲಯ, ಒಡಿಶಾ, ಪುದುಚೇರಿ, ಪಂಜಾಬ್, ರಾಜಸ್ಥಾನ, ಸಿಕ್ಕಿಂ, ತಮಿಳುನಾಡು, ತೆಲಂಗಾಣ, ಉತ್ತರ ಪ್ರದೇಶದ ಒಟ್ಟು 64 ವಿಧಾನಸಭಾ ಕ್ಷೇತ್ರಗಳಿಗೂ ಅಕ್ಟೋಬರ್ 21ಕ್ಕೆ ಉಪಚುನಾವಣೆಗಳು ನಡೆಯಲಿವೆ.

ಕರ್ನಾಟಕದ 15 ವಿಧಾನಸಭಾ ಕ್ಷೇತ್ರಗಳಿಗೂ ಅಕ್ಟೋಬರ್ 21ರಂದೇ ಉಪಚುನಾವಣೆ ಘೋಷಣೆ ನಡೆಯಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ಅನರ್ಹಗೊಂಡಿರುವುದರಿಂದ ತೆರವಾಗಿರುವ ಕ್ಷೇತ್ರಗಳಿಗೆ ಈ ಉಪ ಚುನಾವಣೆ ನಡೆಯಲಿದೆ.

ಮಂಜೇಶ್ವರ ವಿಧಾನಸಭೆ ಕ್ಷೇತ್ರ: ಅ.21ಕ್ಕೆ ಉಪಚುನಾವಣೆ

ಕರ್ನಾಟಕದ 15 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಅಕ್ಟೋಬರ್ 24ಕ್ಕೆ ಪ್ರಕಟವಾಗಲಿದೆ. ಮಸ್ಕಿ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗಿಲ್ಲ.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್ 9ಕ್ಕೆ ಕೊನೆಗೊಳ್ಳಲಿದೆ. ಹರ್ಯಾಣದ 90 ಸದಸ್ಯ ಬಲದ ವಿಧಾನಸಭೆಯ ಅವಧಿ ನವೆಂಬರ್ 2 ಮುಕ್ತಾಯಗೊಳ್ಳಲಿದೆ.

Related posts

ಸಂಸದರ ಕ್ಷೇತ್ರಾಭಿವೃದ್ಧಿ ನಿಧಿ: ಭ್ರಷ್ಟಾಚಾರವನ್ನೇ ವ್ಯವಸ್ಥೆಯನ್ನಾಗಿಸಿದ ದುರಂತ ಕಥೆ…!

Upayuktha

ಮಾಸ್ಕ್‌ ತಯಾರಿಸುತ್ತಿರುವ ಸಿಆರ್‌ಪಿಎಫ್‌ ಯೋಧರು

Harshitha Harish

ತೆಂಗಿನ ತೋಟಕೆ ಮಂಗನ ಕಾಟ… ಕೈಗೆ ಬಂದ ತುತ್ತು ಬಾಯಿಗಿಲ್ಲದ ಸಂಕಷ್ಟದಲ್ಲಿ ಕೃಷಿಕರು…

Upayuktha

Leave a Comment