ಸಮುದಾಯ ಸುದ್ದಿ

ಹವ್ಯಕ ಮಹಾಸಭೆಗೆ ಐಎಸ್‌ಓ ಪ್ರಮಾಣಪತ್ರದ ಗರಿ- ಶಿಸ್ತುಬದ್ಧ ಆಡಳಿತದ ಧೃಡೀಕರಣ

ಬೆಂಗಳೂರು: ಶ್ರೀ ಅಖಿಲ ಹವ್ಯಕ ಮಹಾಸಭೆಗೆ ‘ಪಾರದರ್ಶಕ ಹಾಗೂ ಸುವ್ಯವಸ್ಥಿತ ಆಡಳಿತ ಮತ್ತು ಸಮರ್ಥ ನಿರ್ವಹಣೆಯನ್ನು ಪ್ರಾಮಾಣೀಕರಿಸುವ ಐ.ಎಸ್.ಓ ಪ್ರಮಾಣಪತ್ರ ದೊರಕಿದೆ.

ಸ್ವಾತಂತ್ರ್ಯ ಪೂರ್ವದಲ್ಲೇ ಸಂಸ್ಥಾಪಿತವಾಗಿ; 78 ವರ್ಷಗಳ ಸುದೀರ್ಘ ಇತಿಹಾಸ ಹೊಂದಿರುವ ಶ್ರೀ ಅಖಿಲ ಹವ್ಯಕ ಮಹಾಸಭೆಯು ಹವ್ಯಕ ಸಮಾಜದ ಪ್ರಾತಿನಿಧಿಕ ಸಂಸ್ಥೆಯಾಗಿದ್ದು, ಪ್ರಸ್ತುತ ISO ಪ್ರಮಾಣಪತ್ರ ದೊರಕಿರುವುದು ಶಿಸ್ತುಬದ್ಧ ಹಾಗೂ ಅಭಿವೃದ್ಧಿಪರ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ISO 9001:2015 ಪ್ರಮಾಣ ಪತ್ರ ಸಿಕ್ಕಿದ್ದು ಹೀಗೆ:
ಹವ್ಯಕ ಮಹಾಸಭೆಯ ಆಡಳಿತ ನಿರ್ವಹಣೆ, ಸಮಾಜೋನ್ನತಿಗಾಗಿ ಕೈಗೊಂಡಿರುವ ಕಾರ್ಯಗಳು ಸೇರಿದಂತೆ ಸಮಗ್ರ ವ್ಯವಸ್ಥೆಯನ್ನು ಅಮೂಲಾಗ್ರವಾಗಿ ಅಭ್ಯಸಿಸಿ; ತಜ್ಞರ ಪರಿಶೋಧನೆಗೆ ಒಳಪಡಿಸಲಾಗಿದ್ದು; ಎಲ್ಲಾ ವ್ಯವಸ್ಥೆಗಳು ಮತ್ತು ಆಡಳಿತ ನಿರ್ವಹಣೆಯು; ISO 9001:2015 ಅರ್ಹತಾ ನಿಯಮಗಳಿಗೆ ಅನುಗುಣವಾಗಿರುವುದು ಖಾತರಿಯಾದ ಬಳಿಕ ಹವ್ಯಕ ಮಹಾಸಭೆಗೆ ಐ.ಎಸ್.ಓ ಪ್ರಮಾಣಪತ್ರವನ್ನು ನೀಡಲಾಗಿದೆ.

ಉತ್ತಮ ಆಡಳಿತದ ಸ್ಥಿರೀಕರಣ:
ಹವ್ಯಕ ಸಮಾಜ ಶಿಸ್ತಿಗೆ ಹೆಸರುವಾಸಿಯಾಗಿದ್ದು, ಸಮಾಜದ ಪ್ರಾತಿನಿಧಿಕ ಸಂಸ್ಥೆಯಾದ ಹವ್ಯಕ ಮಹಾಸಭೆಯು ತನ್ನ ಆಡಳಿತದಲ್ಲಿ ಪಾರದರ್ಶಕತೆ – ಗುಣಮಟ್ಟ – ಸುವ್ಯವಸ್ಥಿತ ನಿರ್ವಹಣೆಯನ್ನು ಕಾಯ್ದುಕೊಂಡಿರುವುದಕ್ಕೆ ಈ ISO ಪ್ರಮಾಣಪತ್ರ ಕೈಗನ್ನಡಿಯಾಗಿದ್ದು, ಶಿಸ್ತುಬದ್ಧ ಆಡಳಿತ ಈ ಮೂಲಕವೂ ದೃಢೀಕರಣಗೊಂಡಂತಾಗಿದೆ. ಸಾಮಾಜಿಕ ಸಂಸ್ಥೆಯೊಂದಕ್ಕೆ ಅದರ ದಕ್ಷ ನಿರ್ವಹಣೆಗಾಗಿ ಈ ಪ್ರಮಾಣಪತ್ರ ಸಿಕ್ಕಿರುವುದು ವಿಶೇಷವಾಗಿದೆ.

~~~~~~~~
ISO 9001:2015 ಬಗ್ಗೆ ಒಂದಿಷ್ಟು

* ಸಂಸ್ಥೆ ಅಥವಾ ವ್ಯಕ್ತಿಗಳು ತಮ್ಮ ಹಣಕಾಸು ನಿರ್ವಹಣೆ, ಆಡಳಿತ ವ್ಯವಸ್ಥೆಯ ಗುಣಮಟ್ಟವನ್ನು ಸುಸೂತ್ರವಾಗಿ ಒಂದು ಚೌಕಟ್ಟಿನೊಳಗೆ ರೂಢಿಸಿಕೊಂಡಿರುವುದನ್ನು ಪ್ರಮಾಣೀಕರಿಸುವ ಪ್ರಮಾಣಪತ್ರ.

* ನಿತ್ಯ ವ್ಯವಹಾರಗಳನ್ನು ನಿಗದಿತ ಗುಣಮಟ್ಟದಲ್ಲಿ ಒಂದು ಚೌಕಟ್ಟಿನೊಳಗೆ ನಿರ್ವಹಿಸುವುದನ್ನು ಖಾತರಿ ಪಡಿಸುವುದು ಮತ್ತು ಅದನ್ನು ಎಲ್ಲ ರೀತಿಯಲ್ಲೂ ಸುಧಾರಿಸುವ ಕೆಲಸವನ್ನು ಹಂತ ಹಂತವಾಗಿ ನಿರಂತರವಾಗಿ ಮಾಡುವುದು.

* ಪ್ರಮಾಣೀಕರಿಸುವ ಕೆಲಸವನ್ನು ತೃತೀಯ ಸಂಸ್ಥೆಯೊಂದು ಮಾಡುವುದಾಗಿದ್ದು, ಅದು ಹಣಕಾಸು ನಿರ್ವಹಣೆ, ಆಡಳಿತ ಹಾಗೂ ಒಟ್ಟಾರೆ ವ್ಯವಸ್ಥೆಯ ಗುಣಮಟ್ಟದ ಮೌಲ್ಯಮಾಪನ ಮಾಡಿ ಬಳಿಕವಷ್ಟೇ ಪ್ರಮಾಣಪತ್ರ ಒದಗಿಸಲು ಶಿಫಾರಸು ಮಾಡುತ್ತದೆ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Related posts

ಶ್ರೀರಾಮಚಂದ್ರಾಪುರ ಮಠದ ಜಾಲತಾಣ ಲೋಕಾರ್ಪಣೆ 24ಕ್ಕೆ

Upayuktha

ಚಾತುರ್ಮಾಸ್ಯ: ಹವ್ಯಕ ಮಹಾಸಭೆಯಿಂದ ಗುರುಭಿಕ್ಷಾ ಸೇವೆ

Upayuktha

ಶಿವಳ್ಳಿ ಸ್ಪಂದನ- ದೇರೆಬೈಲ್‌ ವಲಯದ ವತಿಯಿಂದ ಉಚಿತ ಆಯುಷ್ಮಾನ್ ಆರೋಗ್ಯ ಕಾರ್ಡ್‌ ನೋಂದಣಿ

Upayuktha