ರಾಜ್ಯ

ಸರಕಾರಿ ಟೆಂಡರ್‌ನಲ್ಲಿ ಭಾಗವಹಿಸಲು ಎಂಎಸ್‌ಎಂಇಗಳಿಗೆ ಕೇಂದ್ರದ ಮಾದರಿ ವಿನಾಯಿತಿ ನೀಡಿ; ಎಚ್‌ಡಿಕೆ ಆಗ್ರಹ

ಬೆಂಗಳೂರು: ಕೊರೋನಾ ಸೋಂಕು ಹಬ್ಬಿದ ನಂತರ ಲಾಕ್ಡೌನ್ ಮತ್ತು ವಹಿವಾಟುಗಳಿಲ್ಲದೆ ವಿಶೇಷವಾಗಿ ಸಣ್ಣ, ಮಧ್ಯಮ ಕೈಗಾರಿಕೆಗಳು ಬದುಕುಳಿಯುವುದೇ ಕಷ್ಟವಾಗಿದೆ. MSME ಗಳು ಕೇಂದ್ರದ ಯಾವುದೇ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ಮುಂಗಡ ಹಣ ಪಾವತಿ ಮಾಡಬೇಕಿಲ್ಲ. ಆದರೆ ರಾಜ್ಯ ಸರ್ಕಾರದಲ್ಲಿ ಮಾತ್ರ ಇಂತಹ ವಿನಾಯಿತಿ ಇಲ್ಲ. ರಾಜ್ಯ ಸರ್ಕಾರ MSME ಗಳಿಗೆ ಕೇಂದ್ರ ಸರ್ಕಾರದ ಮಾದರಿಯಲ್ಲಿ ವಿನಾಯಿತಿ ನೀಡಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ತಮ್ಮ ಅಧಿಕೃತ ಟ್ವಿಟರ್‌ ಖಾತೆಯ ಮೂಲಕ ಈ ಆಗ್ರಹ ಮಂಡಿಸಿರುವ ಅವರು, ರಾಜ್ಯದಲ್ಲಿ ಸುಮಾರು 6 ಲಕ್ಷಕ್ಕೂ ಹೆಚ್ಚುಮಂದಿ MSME ಉದ್ದಿಮೆದಾರರು ನೊಂದಾಯಿಸಿಕೊಂಡಿದ್ದು, ಇದರಲ್ಲಿ ಶೇಕಡ ಅರ್ಧಕ್ಕಿಂತ ಹೆಚ್ಚು ಬೆಂಗಳೂರಿನ ಉದ್ಯಮಿಗಳು. ರಾಜ್ಯ ಸರಕಾರದ ಬಿಡ್ ನಲ್ಲಿ ಭಾಗವಹಿಸಲು ಸಣ್ಣ ಮತ್ತು ಮಧ್ಯಮ ಉದ್ದಿಮೆದಾರರಿಗೆ ಮುಂಗಡ ಹಣ ಪಾವತಿ ಕಡ್ಡಾಯ ಮಾಡಿರುವುದನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರ ಕೇಂದ್ರದ ರೀತಿ ಸಣ್ಣ,ಮಧ್ಯಮ ಉದ್ದಿಮೆದಾರರಿಗೆ ಸಹಾಯಹಸ್ತ ಚಾಚಿದರೆ ಕಷ್ಟಕ್ಕೆ ಸಿಲುಕಿರುವ MSME ಉದ್ದಿಮೆದಾರರು ತುಸು ಉಸಿರಾಡಲು ಸಾಧ್ಯವಾಗುತ್ತದೆ. ಇವರೊಂದಿಗೆ ಸುಮಾರು 40 ಲಕ್ಷಕ್ಕೂ ಹೆಚ್ಚು ಉದ್ಯೋಗಸ್ಥರಿದ್ದಾರೆ ರಾಜ್ಯಸರ್ಕಾರ ತಡಮಾಡದೆ ತಕ್ಷಣವೇ ಈ ಬಗ್ಗೆ ಅಧಿಕೃತ ಘೋಷಣೆ ಮಾಡುವಂತೆ ಒತ್ತಾಯಿಸುತ್ತೇನೆ ಎಂದು ಅವರು ಹೇಳಿದ್ದಾರೆ.

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

 

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್  App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Related posts

ಸಾಲು ಮರದ ತಿಮ್ಮಕ್ಕಗೆ ಗೌರವ ಡಾಕ್ಟರೇಟ್

Harshitha Harish

‘ಬೆಂಗಳೂರು ಉತ್ಸವ: ‘ ದೀಪಾವಳಿ ದೀಪಗಳ ವಿಶೇಷ ಪ್ರದರ್ಶನ ಹಾಗೂ ಮಾರಾಟ ಮೇಳ

Upayuktha

ಮೈಸೂರು ದಸರಾ: ಗಜಪಡೆ ಕವಾಯತು ಆರಂಭ

Upayuktha