ಪ್ರಮುಖ ರಾಜ್ಯ

ಆರೋಗ್ಯ ಸಚಿವ ಶ್ರೀರಾಮುಲುಗೆ ಕೊರೊನಾ ಪಾಸಿಟಿವ್

(ಚಿತ್ರ ಕೃಪೆ: ಹಿಂದೂಸ್ಥಾನ್ ಟೈಮ್ಸ್)

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರಿಗೆ ಕೊರೊನಾ ಸೋಂಕು ತಗುಲಿದ್ದು, ವೈದ್ಯಕೀಯ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ. ಈ ವಿಷಯವನ್ನು ಸ್ವತಃ ಅವರೇ ತಮ್ಮ ಟ್ವಿಟರ್ ಹ್ಯಾಂಡಲ್ ಮೂಲಕ ರಾಜ್ಯದ ಜನತೆಗೆ ತಿಳಿಸಿದ್ದಾರೆ.

ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನ ಪಾಸಿಟಿವ್ ಬಂದಿದೆ. ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ. ಕೊರೊನ ಕಾಣಿಸಿಕೊಂಡ ಸಮಯದಿಂದಲೂ 30 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಜನರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ಮಾಡುವ ಸರ್ಕಾರದ ಆಶಯಕ್ಕೆ ತಕ್ಕಂತೆ ಕೆಲಸ ಮಾಡುತ್ತಿರುವ ಈ ಸಂದರ್ಭದಲ್ಲಿ ನನಗೆ ಸತ್ವಪರೀಕ್ಷೆಯ ಸಮಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದೇನೆ ಎಂದು ಶ್ರೀರಾಮುಲು ತಿಳಿಸಿದ್ದಾರೆ.

ಆದಷ್ಟೂ ಬೇಗ ಗುಣಮುಖನಾಗಿ ಸಂಕಷ್ಟ ಸಮಯದಲ್ಲಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ಕೊಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಇತ್ತೀಚಿಗೆ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ವಹಿಸಲು ಕೋರುತ್ತೇನೆ ಎಂದೂ ಸಚಿವರು ವಿನಂತಿಸಿದ್ದಾರೆ.

ಕಳೆದ ವಾಋವಷ್ಟೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿತ್ತು.  ಅವರೀಗ ಮಣಿಪಾಲ್ ಆಸ್ಪತ್ರೆಯಲ್ಲಿ ವಿಶ್ರಾಂತಿಯಲ್ಲಿದ್ದು, ಯಾವುದೇ ರೋಗಲಕ್ಷಣ ಕಾಣಿಸಿಲ್ಲ.

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

 

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್  App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

 

Related posts

ಡ್ರಗ್ಸ್‌ ಕೇಸ್‌: ತುಪ್ಪದ ಹುಡುಗಿಯ ಜಾಮೀನು ಅರ್ಜಿ ಮುಂದೂಡಿಕೆ

Harshitha Harish

ಗಡಿ ನಿರ್ಬಂಧ ತೆರವುಗೊಳಿಸುವಂತೆ ಜನರು ಕೇಳಿಕೊಂಡಾಗ ಕೇರಳ ಅಧಿಕಾರಿಗಳು ಏನು ಹೇಳ್ತಾರೆ, ನೀವೇ ಕೇಳಿ…

Upayuktha News Network

ಸುಪ್ರೀಂ ಕೋರ್ಟ್‌ ಅಯೋಧ್ಯೆಯ ಮಹಾತೀರ್ಪು ನಾಳೆ ಪ್ರಕಟ: ದೇಶಾದ್ಯಂತ ಬಿಗಿ ಭದ್ರತೆ

Upayuktha

Leave a Comment

error: Copying Content is Prohibited !!