ರಾಜ್ಯ ಹವಾಮಾನ- ಭೂವಿಜ್ಞಾನ

ಕರಾವಳಿ ಸೇರಿ ಕರ್ನಾಟಕದ ಕೆಲವೆಡೆ 4 ದಿನಗಳ ಕಾಲ ಭಾರಿ ಮಳೆಯಾಗುವ ಸಂಭವ -ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಈಗಾಗಲೇ ಭಾರಿ ಮಳೆಯಾಗುತ್ತಿದ್ದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅ. 10ರಿಂದ 13 ರ ವರೆಗೆ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದ್ದಾರೆ.

ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದ ಕಾರಣದಿಂದ ರಾಜ್ಯದ ವಿವಿಧೆಡೆ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ‌ಯ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.

ತುಮಕೂರು, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಸೇರಿದಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಯಾದಗಿರಿ, ವಿಜಯಪುರ, ರಾಯಚೂರು, ಕಲ್ಬುರ್ಗಿ, ಬೀದರ್, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಈ ಕಾರಣದಿಂದ ಈ ಎಲ್ಲಾ ಜಿಲ್ಲೆಗಳಲ್ಲಿ‌ಯೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಿರುವುದಾಗಿಯೂ ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

 

Related posts

ರಾಜ್ಯದಲ್ಲಿ ಅಸಾಧಾರಣ ಮಳೆಯಾಗುವ ಸಂಭವ

Harshitha Harish

ಜೆಡಿಎಸ್‌ ಲೆಕ್ಕಕ್ಕಿಲ್ಲ ಎಂದವರು ‘ನೀವೇ ಸಿಎಂ’ ಅಂತ ಹೇಳ್ಕೊಂಡು ಮನೆಗೆ ಬಂದಿದ್ದರು: ಎಚ್‌.ಡಿ.ಕೆ

Upayuktha

ಧಾರವಾಡದ ಬಳಿ ಭೀಕರ ಅಪಘಾತದಲ್ಲಿ 11 ಮಂದಿ ದುರ್ಮರಣ: ಪ್ರಧಾನಿ ಮೋದಿ ಸಂತಾಪ

Upayuktha