ದೇಶ-ವಿದೇಶ ಹವಾಮಾನ- ಭೂವಿಜ್ಞಾನ

ಮುಂಬಯಿಯಲ್ಲಿ ಭಾರೀ ಮಳೆ: ಎರಡು ದಿನ ರೆಡ್ ಅಲರ್ಟ್ ಘೋಷಣೆ

ಮುಂಬೈ, ಆಗಸ್ಟ್ 4: ಒಂದೆಡೆ ಕೊರೊನಾ ಆರ್ಭಟ ಜೋರಾಗಿದ್ದು ಇನ್ನೊಂದೆಡೆ ಮಳೆಯಿಂದ ಅಪಾರ ನಷ್ಟ ಸಂಭವಿಸಿ ಜನ ಜೀವನವೇ ಅಸ್ತವ್ಯಸ್ತ. ವಾಣಿಜ್ಯ ನಗರಿ ಮುಂಬೈಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರ ಬಹುತೇಕ ತಗ್ಗುಪ್ರದೇಶಗಳು ಸಂಪೂರ್ಣ ಜಲಾವೃತವಾಗಿದೆ. ಅಲ್ಲದೇ ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿರುವ ನಿಟ್ಟಿನಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಭಾರೀ ಗಾಳಿ, ಮಳೆಯಿಂದಾಗಿ ಮುಂಬಯಿ ಮುನ್ಸಿಪಲ್ ಕಾರ್ಪೋರೇಷನ್(ಬಿಎಂಸಿ) ಸಂಬಂಧಪಟ್ಟ ಎಲ್ಲಾ ಇಲಾಖೆಗಳಿಗೆ ಅಲರ್ಟ್ ಸಂದೇಶ ರವಾನಿಸಲಾಗಿದೆ. ಅಷ್ಟೇ ಅಲ್ಲದೇ ಸಮುದ್ರ ಪ್ರದೇಶ ಮತ್ತು ತಗ್ಗುಪ್ರದೇಶಗಳಿಗೆ ತೆರಳದಂತೆ ಜನರಿಗೂ ಸೂಚನೆ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರೀ ಮಳೆಯಿಂದಾಗಿ ಸಮುದ್ರದಲ್ಲಿ 4.51 ಮೀಟರ್ ನಷ್ಟು ಎತ್ತರದ ಅಲೆಗಳು ಮೇಲೆಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭದ್ರತಾ ಏಜೆನ್ಸಿಗೂ ಎಚ್ಚರಿಕೆ ಸಂದೇಶ ರವಾನಿಸಿರುವುದಾಗಿ ಬಿಎಂಸಿ ಎಚ್ಚರಿಕೆ ಸಂದೇಶ ರವಾನಿಸಿದೆ ಎಂದು ವರದಿ ತಿಳಿಸಿದೆ.

ಐಎಂಡಿ (ಬಾರತೀಯ ಹವಾಮಾನ ಇಲಾಖೆ) ಪ್ರಕಾರ ಮಹಾರಾಷ್ಟ್ರ , ಮುಂಬೈ, ಥಾಣೆ ಮತ್ತು ರಾಯಗಢ್ ಜಿಲ್ಲೆಗಳಲ್ಲಿ ಆಗಸ್ಟ್ 4 ಮತ್ತು 5ರಂದು ಭಾರೀ ಮಳೆಯಾಗಲಿದೆ ಎಂದು ಹೇಳಿದೆ. ರತ್ನಗಿರಿ ಜಿಲ್ಲೆಯಲ್ಲಿಯೂ ಆಗಸ್ಟ್ 4ರಂದು ಧಾರಾಕಾರವಾಗಿ ಸುರಿಯುವ ಮಳೆ ಸಾಧ್ಯತೆ ಇದೆ ಎಂದು ತಿಳಿಸಿದೆ.

 

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

 

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್  App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Related posts

ಲಾಕ್‌ಡೌನ್‌ 4.0 ಅಥವಾ ಸಡಿಲಿಕೆ: ಇಂದು ರಾತ್ರಿ 8ಕ್ಕೆ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

Upayuktha

ತುಳು ಭಾಷೆ ಸಂವಿಧಾನದ 8ನೇ ಪರಿಚ್ಛೇದ ಸೇರ್ಪಡೆಗೆ ಕಾಸರಗೋಡು ಸಂಸದ ರಾಜ್ ಮೋಹನ್ ಉಣ್ಣಿತ್ತಾನ್ ಆಗ್ರಹ

Upayuktha

ಹರ್ಯಾಣದಲ್ಲಿ ಮತ್ತೆ ಖಟ್ಟರ್‌ ಸಿಎಂ, ದುಷ್ಯಂತ್‌ ಚೌತಾಲಾ ಡಿಸಿಎಂ

Upayuktha

Leave a Comment

error: Copying Content is Prohibited !!