ಪ್ರಮುಖ ರಾಜ್ಯ

ರಾಜ್ಯದಲ್ಲಿ ವೆಂಟಿಲೇಟರ್ ಬೆಡ್‌ಗಳ ಹೆಚ್ಚಳಕ್ಕೆ ಮುಖ್ಯಮಂತ್ರಿ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ವೆಂಟಿಲೇಟರ್ ಬೆಡ್‌ಗಳನ್ನು ಹೆಚ್ಚಿಸುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಅಧಿಕಾರಿಗಳೊಂದಿಗೆ ದೂರವಾಣಿ ಮುಖಾಂತರ ಸಭೆ ನಡೆಸಿದರು.

ಸಭೆಯ ಮುಖ್ಯಾಂಶಗಳು:

1. ಭಾರತ ಸರ್ಕಾರದ ಪಿ.ಎಂ.ಕೇರ್ಸ್ ಅಡಿಯಲ್ಲಿ ರಾಜ್ಯಕ್ಕೆ 681 ವೆಂಟಿಲೇಟರ್ ಗಳು ದೊರಕಿವೆ.

2. ಕಳೆದ ವಾರದಲ್ಲಿ ಬೆಂಗಳೂರಿನಲ್ಲಿ 166 ಸೇರಿದಂತೆ ರಾಜ್ಯದಲ್ಲಿ ವೆಂಟಿಲೇಟರ್ ಬೆಡ್ ಗಳ ಸಂಖ್ಯೆಯನ್ನು ಒಟ್ಟು 335ಕ್ಕೆ ಹೆಚ್ಚಿಸಲಾಗಿದೆ.

3. ಇದೇ ವಾರಾಂತ್ಯದಲ್ಲಿ ಉಳಿದ 346 ವೆಂಟಿಲೇಟರ್‌ಗಳನ್ನು ಅಳವಡಿಸಲಾಗುವುದು.

4. ಕೇಂದ್ರ ಸರ್ಕಾರ ರಾಜ್ಯಕ್ಕೆ ಒದಗಿಸಿರುವ 1279 ವೆಂಟಿಲೇಟರ್‌ಗಳನ್ನು ಈ ಮಾಹೆಯ ಅಂತ್ಯದಲ್ಲಿ ದೊರಕಲಿವೆ.

5. ಈ ಎಲ್ಲಾ ವೆಂಟಿಲೇಟರ್‌ಗಳನ್ನು ತಕ್ಷಣವೇ ಅಳವಡಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

6. ಆಸ್ಪತ್ರೆಯ ಸಿಬ್ಬಂದಿ ಈ ವೆಂಟಿಲೇಟರ್‌ಗಳನ್ನು ಬಳಸಬೇಕು.

7. ಅನೆಸ್ಥಿಟಿಕ್ಸ್, ಪಾರಾ ಮೆಡಿಕಲ್ ಸಿಬ್ಬಂದಿಗಳನ್ನು ತಕ್ಷಣವೇ ನೇಮಿಸಿಕೊಳ್ಳುವಂತೆ ಸೂಚಿಸಿದರು.

8. ವೆಂಟಿಲೇಟರ್‌ ಗಳನ್ನು ಒದಗಿಸಲು ಬೆಂಗಳೂರಿನ ಖಾಸಗಿ ಆಸ್ಪತ್ರೆಗಳು ಮಾಡಿರುವ ಮನವಿಯನ್ನು ಪರಿಗಣಿಸುವಂತೆ ಸೂಚಿಸಿದ ಮುಖ್ಯಮಂತ್ರಿಗಳು, ಕೋವಿಡ್ 19 ಸಂಬಂಧ ತಾತ್ಕಾಲಿಕವಾಗಿ ಒದಗಿಸಲು ಷರತ್ತು ಮತ್ತು ನಿಯಮಗಳ ಬಗ್ಗೆ ತೀರ್ಮಾನಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

 

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

 

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್  App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Related posts

ಎಂಬಿಎ ಪದವೀಧರನಿಂದ ದೇಸಿ ಹಸುಗಳ ಪಾಲನೆ: ‘ಆತ್ಮನಿರ್ಭರತೆ’ಗೊಂದು ಪ್ರೇರಣೆ

Upayuktha

ದೇಶ ಒಡೆಯಲು ಹವಣಿಸುವ ಸ್ಥಾಪಿತ ಹಿತಾಸಕ್ತ ಗುಂಪುಗಳ ಸುಮ್ಮನೆ ಬಿಡಲ್ಲ: ಪ್ರಧಾನಿ ಮೋದಿ

Upayuktha

ಫಿಲೋಮಿನಾದಲ್ಲಿ ಎನ್‍ಸಿಸಿ ದಿನಾಚರಣೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ

Upayuktha

Leave a Comment

error: Copying Content is Prohibited !!