ಬರೋಡ: ಟೀಂ ಇಂಡಿಯಾದ ಆಟಗಾರರಾದ ಹಾರ್ದಿಕ್ ಪಾಂಡ್ಯ ಮತ್ತು ಕೃನಾಲ್ ಪಾಂಡ್ಯ ಅವರ ತಂದೆ ಹಿಮಾಂಶು ಪಾಂಡ್ಯ ಅವರು ಅವರು ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸಯ್ಯದ್ ಮುಷ್ತಾಕ್ ಅಲಿ ಟಿ20 ಟೂರ್ನಿಯಲ್ಲಿ ಬರೋಡ ತಂಡವನ್ನು ಮುನ್ನಡೆಸುತ್ತಿದ್ದ ಕೃನಾಲ್ ಪಾಂಡ್ಯ ಬಯೋ ಸೆಕ್ಯೂರ್ ಬಬಲ್ ತೊರೆದು ತಂದೆಯ ಅಂತಿಮ ದರ್ಶನಕ್ಕಾಗಿ ಹೊರ ನಡೆದಿದ್ದಾರೆ.
ಕೃನಾಲ್ ಪಾಂಡ್ಯ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಬರೋಡ ತಂಡದ ಜೊತೆಗೆ 3 ಪಂದ್ಯಗಳನ್ನು ಆಡಿದ್ದರು. ಇದೀಗ ತಂದೆಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸುವ ಉದ್ದೇಶದಿಂದ ತಂಡವನ್ನು ತೊರೆದಿದ್ದಾರೆ ಎಂದು ಬರೋಡ ತಂಡದ ಸಿಇಒ ಶಿಶಿರ್ ಹಟ್ಟಂಗಡಿ ಅವರು ಹೇಳಿದ್ದಾರೆ.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ