ನಗರ ಸ್ಥಳೀಯ

ಗೃಹರಕ್ಷಕರು ದೇಶದ ಆಸ್ತಿ: ಶಾಸಕ ಡಾ. ಭರತ್ ಶೆಟ್ಟಿ ವೈ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕರು ಕೋವಿಡ್-19 ಸಂದರ್ಭದಲ್ಲಿ ಉತ್ತಮ ಸೇವೆ ಸಲ್ಲಿಸಿದ್ದು ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಅವರ ಸೇವೆ ಶ್ಲಾಘನೀಯ. ಬೇರೆ ಬೇರೆ ವೃತ್ತಿಯಲ್ಲಿ ಇದ್ದರೂ ತಮ್ಮ ವೃತ್ತಿಯ ಜೊತೆಗೆ ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕೆನ್ನುವ ಅವರ ಸೇವೆ ಶ್ಲಾಘನೀಯ ಗೃಹರಕ್ಷಕರು ದೇಶದ ಆಸ್ತಿ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಭರತ್ ಶೆಟ್ಟಿ. ವೈ ನುಡಿದರು.

ಇಂದು (ಜ.17ರ ಭಾನುವಾರ) ನಗರದ ಮೇರಿಹಿಲ್ ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ್ಷಕದಳ ಹಾಗೂ ಪೌರರಕ್ಷಣಾ ಪಡೆ ಹಾಗೂ ಲಯನ್ಸ್ ಕ್ಲಬ್ ಮಂಗಳೂರು ಹಾಗೂ ಮಾನವ ಹಕ್ಕುಗಳ ಮಹಾ ಮೈತ್ರಿ ಜಂಟಿ ಆಶ್ರಯದಲ್ಲಿ ಪ್ರಸಾದ್ ನೇತ್ರಾಲಯ ಇದರ ಸಹಕಾರದೊಂದಿಗೆ ಉಚಿತ ನೇತ್ರ ತಪಾಸಣೆ ಶಿಬಿರ ಹಾಗೂ ನೇತ್ರದಾನ ಅಭಿಯಾನ ಕಾರ್ಯಕ್ರಮ ನಡೆಯಿತು.

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ|| ಭರತ್ ಶೆಟ್ಟಿ. ವೈ. ಇವರು ನೇತ್ರದಾನ ಮಾಡಲು ಸಮ್ಮತಿಸುವ ಮೂಲಕ ಈ ಕಾರ್ಯಕ್ರಮ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯ್ಷತೆಯನ್ನು ವಹಿಸಿದ್ದ ಜಿಲ್ಲಾ ಗೃಹರಕಾಷಕದಳದ ಸಮಾದೇಷ್ಠಕರು ಹಾಗೂ ಪೌರರಕ್ಷಣಾ ತಂಡದ ಚಿಪ್ ವಾರ್ಡನ್ ಡಾ|| ಮುರಲೀ ಮೋಹನ್ ಚೂಂತಾರು ಮಾತಾಡಿ ನಿಷ್ಕಾಮ ಸೇವೆ ಸಲ್ಲಿಸುವ ಗೃಹರಕ್ಷಕರಿಗೆ ಲಯನ್ಸ್ ಸೇವಾ ಸಂಸ್ಥೆ ಮತ್ತು ಮಾನವ ಹಕ್ಕುಗಳ ಮಹಾಮೈತ್ರಿ ಬೆನ್ನೆಲುಬಾಗಿ ನಿಂತಿದೆ. ದಿನದ 24 ಗಂಟೆಗಳ ನಿಷ್ಕಾಮ ಸೇವೆ ಸಲ್ಲಿಸುವ ಗೃಹರಕ್ಷಕರ ಆರೋಗ್ಯ ದೃಷ್ಟಿಯಿಂದ ಈ ನೇತ್ರಾ ತಪಾಸಣೆ ಶಿಬಿರವನ್ನು ಪ್ರಸಾದ್ ನೇತ್ರಾಲಯದ ಮೂಲಕ ಆಯೋಜಿಸಲಾಗಿದೆ. ಎಲ್ಲಾ ಗೃಹರಕ್ಷಕರು ಇದರ ಸದುಪಯೋಗ ಪಡೆದುಕೊಳ್ಳಲು ತಿಳಿಸಿದರು.

ಮುಖ್ಯ ಅಥಿತಿಗಳಾಗಿ ಲಯನ್ಸ್ ಪ್ರಾಂತೀಯ ಅಧ್ಯಕ್ಷ ಉಮೇಶ್ ಪ್ರಭು, ಕೃಷ್ಣಾನಂದ ಪೈ ಅಧ್ಯಕ್ಷರು ಲಯನ್ಸ್ ಕ್ಲಬ್ ಮಂಗಳೂರು, ಪ್ರಸನ್ನಕುಮಾರ್ ಅಧ್ಯಕ್ಷರು ಮಾನವ ಹಕ್ಕುಗಳ ಮಾಹಾ ಮೈತ್ರಿ, ಬಾಲಕೃಷ್ಣ ರೈ ಅಧ್ಯಕ್ಷರು ಕೇಂದ್ರೀಯ ಮಾನವ ಹಕ್ಕುಗಳ ಮಹಾ ಮೈತ್ರಿ, ಇವರುಗಳು ಉಪಸ್ಥಿತರಿದ್ದರು. ಪ್ರಸಾದ್ ನೇತ್ರಾಲಯದ ಡಾ||ವಿಶಾಲ್ ಮತ್ತು ತಂಡ ಈ ಕಾರ್ಯಕ್ರಮವನ್ನು ನೆರವೇರಿಸಿದರು. ಸುಮಾರು 100 ಜನ ಸಾರ್ವಜನಿಕರು ಹಾಗೂ ಗೃಹರಕ್ಷಕರು ಇದರ ಸದುಪಯೋಗ ಪಡೆದರು.

ಕಾರ್ಯಕ್ರಮದಲ್ಲಿ ಶ್ರಿಮತಿ ಶುಭ ಕುಲಾಲ್ ಪ್ರಾರ್ಥನೆ ಮಾಡಿದರು, ರಮೇಶ್ ಡೆಪ್ಯುಟಿ ಕಮಾಡೆಂಟ್ ಇವರು ಸ್ವಾಗತಿಸಿದರು. ಕಡಬ ಘಟಕದ ಪ್ರಭಾರ ಘಟಕಾಧಿಕಾರಿ ತಿರ್ಥೇಶ್.ಎ.ಎಸ್.ವಂದಿಸಿದರು. ಉಪ್ಪಿನಂಗಡಿ ಘಟಕದ ಪ್ರಭಾರ ಘಟಕಾಧಿಕಾರಿ ದಿನೇಶ್. ಬಿ, ಸುರತ್ಕಲ್ ಘಟಕದ ಘಟಕಾಧಿಕಾರಿ ರಮೇಶ್, ಮಂಗಳೂರು ಘಟಕದ ಹಿರಿಯ ಗೃಹರಕ್ಷಕರಾದ ಸುನಿಲ್, ಸುನಿಲ್ ಪೂಜಾರಿ, ದಿವಾಕರ್, ರಾಜಶ್ರೀ, ಮಹೇಶ್ ಉಪಸ್ಥಿತರಿದ್ದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಉದ್ಯೋಗ ನೈಪುಣ್ಯ ತರಬೇತಿ: ಜುಲೈ 1ರಿಂದ 6ರ ವರೆಗೆ

Upayuktha

ರಸ್ತೆ ನಿಯಮಗಳನ್ನು ಪಾಲಿಸಿ: ಡಾ|| ಚೂಂತಾರು

Upayuktha

ಪ್ಲಾಸ್ಟಿಕ್ ಮುಕ್ತ ಪರಿಸರ ನಮ್ಮ ಆದ್ಯತೆಯಾಗಲಿ: ಡಾ. ಎಸ್. ಸತೀಶ್ಚಂದ್ರ

Upayuktha