ನಗರ ಸ್ಥಳೀಯ

ಗೃಹರಕ್ಷಕ ದಳದ ಬೆಳ್ತಂಗಡಿ ಘಟಕದಲ್ಲಿ ಆಯುಧ ಪೂಜೆ, ಆಹಾರದ ಕಿಟ್ ವಿತರಣೆ

ಬೆಳ್ತಂಗಡಿ: ಗೃಹರಕ್ಷಕ ದಳದ ಬೆಳ್ತಂಗಡಿ ಘಟಕದಲ್ಲಿ ಭಾನುವಾರದಂದು (ಅ.18) ಆಯುಧ ಪೂಜೆಯನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಗೃಹರಕ್ಷಕರಿಗೆ ಆಹಾರದ ಕಿಟ್ ವಿತರಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜ ಅವರು ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಗೃಹರಕ್ಷಕ ಸಿಬ್ಬಂದಿ ಸೈನಿಕರಂತೆ ಸೇವೆ ಸಲ್ಲಿಸುತ್ತಿದ್ದಾರೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಬರೆದಿರುವ ‘ಕೋವಿಡ್-19 ಆರೋಗ್ಯ ಮಾರ್ಗದರ್ಶಿ ಸಂಕಲ್ಪ-2020’ ಮತ್ತು ‘ರಕ್ತದಾನ ಜೀವದಾನ’ ಪುಸ್ತಕಗಳನ್ನು ಹಾಗೂ ಸ್ಯಾನಿಟೈಸರ್‍ಗಳನ್ನು ಗಹರಕ್ಷಕ ಸಿಬ್ಬಂದಿಗಳಿಗೆ ಮತ್ತು ಅತಿಥಿಗಳಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮಾಜಿ ಶಾಸಕ ಕೆ. ವಸಂತ ಬಂಗೇರ, ಗೃಹರಕ್ಷಕ ದಳದ ಕಮಾಂಡೆಂಟ್ ಡಾ|| ಮುರಲೀಮೋಹನ ಚೂಂತಾರು, ಉಪ ಸಮಾದೇಷ್ಟರಾದ ರಮೇಶ್, ಅಗ್ನಿಶಾಮಕ ಠಾಣಾಧಿಕಾರಿ ಕ್ಲೇವಿಯಸ್ ಡಿ’ಸೋಜಾ, ಗೃಹರಕ್ಷಕ ದಳದ ಪ್ರಭಾರ ಘಟಕಾಧಿಕಾರಿ ಜಯಾನಂದ ಭಾಗಿಯಾಗಿದ್ದರು.

ಗೃಹರಕ್ಷಕ ದಳದ ಎಲ್ಲ ಸಿಬ್ಬಂದಿ, ಬೆಳ್ತಂಗಡಿ ಪೊಲೀಸ್ ಠಾಣೆ ಮತ್ತು ಅಗ್ನಿಶಾಮಕ ಠಾಣೆ, ಸಂಚಾರ ಪೊಲೀಸ್ ಠಾಣೆಯ ಸಿಬ್ಬಂದಿ ಉಪಸ್ಥಿತರಿದ್ದರು. ರಾಜೇಶ್ ಶಾಂತಿ ಇಂದಬೆಟ್ಟು ವೈದಿಕ ವಿಧಿವಿಧಾನ ನೆರವೇರಿಸಿದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ

Related posts

ಪುಂಜಾಲಕಟ್ಟೆ: ಅಗ್ನಿ ಅವಘಡ ಅರಿವು ಮತ್ತು ತಡೆಗಟ್ಟುವ ಕುರಿತು ಮಾಹಿತಿ ಪ್ರಾತ್ಯಕ್ಷಿಕೆ

Upayuktha

ಉಜಿರೆ ಅಂತರಾಷ್ಟ್ರೀಯ ಸಮ್ಮೇಳನಕ್ಕೆ ವೇದಿಕೆ ಸಜ್ಜು

Upayuktha

ವಿವೇಕಾನಂದ ಕಾಲೇಜಿನಲ್ಲಿ 71ನೇ ಪ್ರಜಾಪ್ರಭುತ್ವ ದಿನಾಚರಣೆ

Upayuktha