ಇಡಿಯ ದಕ್ಷಿಣ ಭಾರತದ ಚಿತ್ತ ಉಕ್ಕಿನ ನಗರಿಯತ್ತ
ಭದ್ರಾವತಿ: ದಕ್ಷಿಣ ಭಾರತದ ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ಅನ್ವಯವಾಗುವಂತೆ ನಗರದಲ್ಲಿ ಸ್ಥಾಪನೆಯಾಗಲಿರುವ ಕ್ಷಿಪ್ರ ಕಾರ್ಯ ಪಡೆ (ರ್ಯಾಪಿಡ್ ಆಕ್ಷನ್ ಫೋರ್ಸ್) ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಭೂಮಿ ಪೂಜೆ ನೆರವೇರಿಸಿದರು.
ನಗರದ ಮಿಲ್ಟ್ರಿ ಕ್ಯಾಂಪ್’ನಲ್ಲಿ ಇಂದು ಮಧ್ಯಾಹ್ನ ನಡೆದ ಸಮಾರಂಭದಲ್ಲಿ ಅವರು ಆರ್’ಎಎಫ್ ನಿರ್ಮಾಣಕ್ಕೆ ಭೂಮಿ ಪೂಜೆ ಹಾಗೂ ಶಂಕು ಸ್ಥಾಪನೆ ನೆರವೇರಿಸಿದರು.
ವೇದಿಕೆ ಕಾರ್ಯಕ್ರಮದ ಬಳಿಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅಮಿತ್ ಶಾ ಅವರು ಘಟಕ ನಿರ್ಮಾಣಕ್ಕೆ ಶಾಸ್ತ್ರೋಕ್ತವಾಗಿ ಭೂಮಿ ಪೂಜೆ ಸಲ್ಲಿಸಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಶೃಂಗೇರಿ ಶ್ರೀ ಶಂಕರ ಮಠದ ಋತ್ವಿಜರ ಮೂಲಕ ಪೂಜಾ ಕೈಂಕರ್ಯಗಳು ನೆರವೇರಿದವು. ಮಧ್ಯಾಹ್ನ 3.45ಕ್ಕೆ ಬೆಂಗಳೂರಿನಿಂದ ಸೇನಾ ಹೆಲಿಕಾಪ್ಟರ್ ಮೂಲಕ ನಗರದ ಬೊಮ್ಮನಕಟ್ಟೆ ಬಳಿಯಿರುವ ಹೆಲಿಪ್ಯಾಡ್’ಗೆ ಬಂದಿಳಿದ ಗೃಹ ಸಚಿವರೊಂದಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಆಗಮಿಸಿದರು.
ಭೂಮಿ ಪೂಜೆ ವೇಳೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸಂಸದ ಬಿ.ವೈ. ರಾಘವೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ, ಶಾಸಕ ಬಿ.ಕೆ. ಸಂಗಮೇಶ್ವರ್ ಅವರುಗಳು ಪಾಲ್ಗೊಂಡಿದ್ದರು.
(ಕೃತಜ್ಞತೆಗಳು: ಕಲ್ಪ ನ್ಯೂಸ್ ಶಿವಮೊಗ್ಗ)
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ರಾಷ್ಟ್ರೀಯ ಸುದ್ದಿಗಳು, ವಿಚಾರಧಾರೆಗಳಿಗೆ ಮೀಸಲಾದ ಜಾಲತಾಣ- ಉಪಯುಕ್ತ.ಭಾರತಕ್ಕೆ ಭೇಟಿ ನೀಡಿ