ನಗರ ಸ್ಥಳೀಯ

ಬೃಹತ್ ಲೋಕ್ ಅದಾಲತ್ ಮಂಗಳೂರು


ಮಂಗಳೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ದ.ಕ. ಜಿಲ್ಲೆಯಲ್ಲಿನ ಎಲ್ಲಾ ನ್ಯಾಯಾಲಯಗಳಲ್ಲಿ ಮಾರ್ಚ್ 27ರಂದು ಬೃಹತ್ ಲೋಕ್ ಅದಾಲತ್ ಅನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ತಮಗೆ ಸಂಬಂಧಿಸಿದ ನ್ಯಾಯಲಯಗಳಲ್ಲಿ ತೀರ್ಮಾನಕ್ಕೆ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಸದರಿ ದಿನದಂದು ಲೋಕ್ ಅದಾಲತ್ ಮೂಲಕ ಶೀಘ್ರವಾಗಿ ಪರಿಹರಿಸಿಕೊಳ್ಳಬಹುದಾಗಿದೆ.

ಸಾರ್ವಜನಿಕರು ನ್ಯಾಯಲಯಗಳಲ್ಲಿ ತೀರ್ಮಾನಕ್ಕೆ ಬಾಕಿ ಇರುವ ಮತ್ತು ವ್ಯಾಜ್ಯ ಪೂರ್ವ ಎಲ್ಲಾ ಸಿವಿಲ್ ಸ್ವರೂಪದ ಪ್ರಕರಣಗಳು, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣ, ಮೋಟಾರು ವಾಹನ ಕಾಯ್ದೆಯಡಿ ಪರಿಹಾರಕ್ಕಾಗಿ ಸಲ್ಲಿಸಲಾದ ಅರ್ಜಿಗಳು, ಭೂಸ್ವಾದೀನ ಪರಿಹಾರಕ್ಕಾಗಿ ಸಂಬಂಧಿಸಿದ ಪ್ರಕರಣಗಳು ಇತ್ಯಾದಿಗಳನ್ನು ಬೃಹತ್ ಲೋಕ್ ಅದಾಲತ್ ಮುಖಾಂತರ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

ಸಾರ್ವಜನಿಕರು ನೇರವಾಗಿ ಅಥವಾ ತಮ್ಮ ವಕೀಲರ ಮೂಲಕ ಲೋಕ್ ಅದಾಲತ್ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ. ಪಕ್ಷಕಾರರು ಲೋಕ್ ಅದಾಲತ್‍ನಲ್ಲಿ ಪ್ರಕರಣವನ್ನು ಇತ್ಯರ್ಥಪಡಿಸಿಕೊಂಡಲ್ಲಿ ಅವರು ನ್ಯಾಯಾಲಯಕ್ಕೆ ಪಾವತಿಸಿರುವ ನ್ಯಾಯಾಲಯದ ಶುಲ್ಕವನ್ನು ಸಂಪೂರ್ಣವಾಗಿ ವಾಪಾಸ್ಸು ಪಡೆಯಲು ಅರ್ಹರಾಗಿರುತ್ತಾರೆ. ಹಾಗೆಯೇ ವ್ಯಾಜ್ಯ ಪೂರ್ವ ಪ್ರಕರಣಗಳಿಗೆ ಸಂಬಂಧಿಸಿದಂತೆ ಯಾವುದೇ ನ್ಯಾಯಾಲಯ ಶುಲ್ಕವನ್ನು ಪಾವತಿಸಬೇಕಾಗಿಲ್ಲ.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ಉಪಯುಕ್ತ ನ್ಯೂಸ್ ಸಿಗ್ನಲ್‌ ಗ್ರೂಪಿಗೆ ಜಾಯಿನ್ ಆಗಲು ಈ ಲಿಂಕ್‌ ಬಳಸಿ

Related posts

ಶಾಸಕ ಡಾ.ಭರತ್ ಶೆಟ್ಟಿಯವರಿಂದ ಗುರುಪುರ ವ್ಯಾಪ್ತಿಯಲ್ಲಿ 2 ಕಾಂಕ್ರೀಟ್ ರಸ್ತೆಗಳ ಲೋಕಾರ್ಪಣೆ

Upayuktha

ವಿಟ್ಲ ಬಾರ್‌ನಲ್ಲಿ ದಾಂಧಲೆ ಪ್ರಕರಣ: 9 ಆರೋಪಿಗಳಿಗೆ ನ್ಯಾಯಾಂಗ ಬಂಧನ

Upayuktha

ವೈಶಿಷ್ಟ್ಯತೆಯನ್ನು ಒಳಗೊಂಡ ಭಾಷೆ ಹವಿಗನ್ನಡ: ಡಾ. ಪಾದೇಕಲ್ಲು ವಿಷ್ಣು ಭಟ್

Upayuktha