
ಹೈದರಾಬಾದ್: ಹೈದರಾಬಾದ್ನ ಪಶುವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಎಲ್ಲ ನಾಲ್ವರೂ ಆರೋಪಿಗಳು ಗುಂಡೇಟಿನಿಂದ ಹತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಹೈದರಾಬಾದ್ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಶುಕ್ರವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ವಿಚಾರಣೆಯ ಭಾಗವಾಗಿ ಅಪರಾಧ ದೃಶ್ಯದ ಮರು ನಿರ್ಮಾಣಕ್ಕೆಂದು ಆರೋಪಿಗಳನ್ನು ಪೊಲೀಸರು ಘಟನೆ ನಡೆದ ಸ್ಥಳಕ್ಕೆ ಕರೆದೊಯ್ದಿದ್ದರು. ಆ ವೇಳೆಗೆ ಆರೋಪಿಗಳು ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದರು. ಆಗ ಪೊಲೀಸರು ಗುಂಡು ಹಾರಿಸಿದ್ದು, ಎಲ್ಲ ನಾಲ್ಕೂ ಆರೋಪಿಗಳು ಹತರಾದರು ಎಂದು ಮೂಲಗಳು ತಿಳಿಸಿವೆ.
‘ಹೈದರಾಬಾದ್ ರೇಪ್- ಮರ್ಡರ್ ಪ್ರಕರಣದ 4 ಆರೋಪಿಗಳು ಇಂದು ಗುಂಡು ಹಾರಾಟದ ವೇಳೆ ಹತರಾಗಿದ್ದಾರೆ’ ಎಂದು ಸೈಬರಾಬಾದ್ ಪೊಲೀಸ್ ಕಮಿಷನರ್ ವಿ.ಸಿ ಸಜ್ಜನರ್ ತಿಳಿಸಿರುವುದಾಗಿ ಸುದ್ದಿಸಂಸ್ಥೆ ವರದಿ ಮಾಡಿದೆ.
Hyderabad: Senior Police officials arrive at the site of the encounter. All four accused in the rape and murder of woman veterinarian in Telangana were killed in an encounter with the police when the accused tried to escape while being taken to the crime spot. https://t.co/TB4R8EuPyr pic.twitter.com/7fuG87MP0m
— ANI (@ANI) December 6, 2019
ಸಾಮೂಹಿಕ ಅತ್ಯಾಚಾರ ಮತ್ತು ಕೊಲೆಯ ಬಳಿಕ 26 ವರ್ಷದ ವೈದ್ಯೆಯ ಮೃತದೇಹ ಹೈದರಾಬಾದ್- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಅಂಡರ್ಪಾಸ್ ಬಳಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ನ.28ರಂದು ಪತ್ತೆಯಾಗಿತ್ತು. 20-24 ವರ್ಷ ವಯಸ್ಸಿನ ನಾಲ್ವರು ಆರೋಪಿಗಳು ಈ ಕೃತ್ಯ ಎಸಗಿದ್ದರು.

ನಾಲ್ವರು ಆರೋಪಿಗಳು ವೈದ್ಯೆಯ ಸ್ಕೂಟರ್ನ ಹಿಂಬದಿ ಟಯರ್ ಪಂಕ್ಚರ್ಗೊಳಿಸಿ, ಬಳಿಕ ಸಹಾಯ ಮಾಡುವ ನೆಪದಲ್ಲಿ ಟೋಲ್ ಪ್ಲಾಜಾ ಸಮೀಪ ಪೂರ್ವ ನಿಗದಿತ ಸ್ಥಳದತ್ತ ಆಕೆಯನ್ನು ಕರೆದೊಯ್ದುಸಾಮೂಹಿಕ ಅತ್ಯಾಚಾರವೆಸಗಿದ್ದರು. ಆಕೆ ಉಸಿರುಗಟ್ಟಿ ಮೃತಪಟ್ಟಿರುವುದಾಗಿ ಮರಣೋತ್ತರ ಪರೀಕ್ಷೆಯಿಂದ ತಿಳಿದು ಬಂದಿತ್ತು. ಆಕೆಯ ಮೃತದೇಹವನ್ನು ಆರೋಪಿಗಳು ಸುಟ್ಟುಹಾಕಿದ್ದರು.
ಸೈಬರಾಬಾದ್ ಪೊಲೀಸರು ನ.29ರಂದು ನಾಲ್ವರೂ ಆರೋಪಿಗಳನ್ನು ಬಂಧಿಸಿದ್ದರು.
ಆರೋಪಿಗಳನ್ನು ಮೊಹಮ್ಮದ್ ಆರೀಫ್, ಜೊಲ್ಲು ಶಿವ, ಜೊಲ್ಲು ನವೀನ್ ಮತ್ತು ಚಿಂತಕುಂತ ಚೆನ್ನಕೇಶವುಲು ಎಂದು ಗುರುತಿಸಲಾಗಿತ್ತು. ಚಾಲಕನಾಗಿ ಕೆಲಸ ಮಾಡುತ್ತಿದ್ದ ಮೊಹಮ್ಮದ್ ಆರೀಫ್ (25) ಪ್ರಧಾನ ಆರೋಪಿಯಾಗಿದ್ದ.
ಬಂಧನದ ಬಳಿಕ ನಾಲ್ವರೂ ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಲಾಗಿತ್ತು.
(ಉಪಯುಕ್ತ ನ್ಯೂಸ್)
ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಟ್ವಿಟರ್ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ
ಯೂಟ್ಯೂಬ್ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ