ಕ್ಯಾಂಪಸ್ ಸುದ್ದಿ ನಗರ ಸ್ಥಳೀಯ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಎನ್ನೆಸ್ಸೆಸ್ ಚಟುವಟಿಕೆಗಳಿಗೆ ಚಾಲನೆ

ಪುತ್ತೂರು: ತ್ಯಾಗ ಮಾಡದೆ ಉನ್ನತ ಮಟ್ಟದ ಸಾಧನೆ ಅಸಾಧ್ಯ. ವಿದ್ಯಾರ್ಥಿಗಳು ತ್ಯಾಗಭರಿತ ಮನೋಭಾವನೆಯಿಂದ ರಾಷ್ಟ್ರೀಯ ಸೇವಾ ಯೋಜನೆಯಂತಹ ಸಂಘಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಇದು ಭವಿಷ್ಯದ ದಿಕ್ಕನ್ನು ನಿರ್ಧರಿಸಬಲ್ಲುದು ಎಂದು ಸಂತ ಫಿಲೋಮಿನಾ ಕಾಲೇಜಿನ ಪ್ರಾಚಾರ್ಯ ಪ್ರೊ. ಲಿಯೋ ನೊರೊನ್ಹಾ ಹೇಳಿದರು.

ಅವರು ಕಾಲೇಜಿನ ಸಭಾಭವನದಲ್ಲಿ ಶುಕ್ರವಾರ (ಜ.22) ರಾಷ್ಟ್ರೀಯ ಸೇವಾ ಯೋಜನೆಯ ಪ್ರಸಕ್ತ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ ನೀಡಿ, ಮಾತನಾಡಿದರು.

ಎನ್ನೆಸ್ಸೆಸ್ ಅನ್ನುವ ಸಂಘಟನೆಯು ವಿಶ್ವವಿದ್ಯಾನಿಲಯದ ಮಾನ್ಯತೆಯನ್ನು ಹೊಂದಿದೆ. ಇದರಲ್ಲಿ ಹಮ್ಮಿಕೊಳ್ಳುವ ಎಲ್ಲಾ ರೀತಿಯ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಅತ್ಯುತ್ಸಾಹದಿಂದ ಭಾಗವಹಿಸಬೇಕು. ಆ ಮೂಲಕ ಆತ್ಮವಿಶ್ವಾಸ, ನಾಯಕತ್ವ ಗುಣ, ಧನಾತ್ಮಕ ಚಿಂತನೆ ಮತ್ತು ಮನೋಧೈರ್ಯವನ್ನು ಹೆಚ್ಚಿಸಿಕೊಳ್ಳಬೇಕು. ಎನ್ನೆಸ್ಸೆಸ್ ಸ್ವಯಂಸೇವಕರು ಹುಮ್ಮಸ್ಸಿನಿಂದ ಕೈಗೊಳ್ಳುವ ಸ್ವಚ್ಛತೆಯಂತಹ ಚಟುವಟಿಕೆಗಳು ಇತರರಿಗೆ ಮಾದರಿಯಾಗಿರುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ವಿಜಯ ಕುಮಾರ್ ಮೊಳೆಯಾರ ಮಾತನಾಡಿ, ಮಾನವನ ಬದುಕಿನಲ್ಲಿ ಸೇವಾ ಮನೋಭಾವನೆ ಬಹಳ ಮುಖ್ಯ. ಸಾಮಾಜಿಕ ಋಣ ತೀರಿಸಲು ಎನ್ನೆಸ್ಸೆಸ್ ಒಂದು ಉತ್ತಮ ವೇದಿಕೆ. ಎನ್ನೆಸ್ಸೆಸ್‍ನಿಂದ ಶಿಸ್ತು, ಸಂಘಟನಾ ಚತುರತೆ, ವ್ಯಕ್ತಿತ್ವ ವಿಕಸನ, ಸಹಬಾಳ್ವೆ, ಸಮಾಜಮುಖಿ ಚಿಂತನೆ, ಆತ್ಮತೃಪ್ತಿ ಮೊದಲಾದ ಉತ್ತಮ ಅಂಶಗಳನ್ನು ಮೈಗೂಡಿಸಿಕೊಳ್ಳಬಹುದು. ಎನ್ನೆಸ್ಸೆಸ್ ಸ್ವಯಂಸೇವಕರು ಗ್ರಾಮೀಣ ಪ್ರದೇಶದ ಜನರೊಂದಿಗೆ ಬೆರೆತು ಬಾಳುವ ಗುಣ ಬೆಳೆಸಿಕೊಳ್ಳಬೇಕು. ಆ ಮೂಲಕ ಸಿಗುವ ಸಂತೋಷ, ಅನುಭವ ಮಹತ್ತರವಾದುದು. ಅವಕಾಶ ಎಲ್ಲರಿಗೂ ಸಿಗಲಾರದು. ಅವಕಾಶಗಳು ಬಂದೊದಗಿದಾಗ ಸಮರ್ಪಕವಾಗಿ ಬಳಸಿಕೊಳ್ಳುವುದು ಜಾಣತನ ಎಂದರು.

ಅಖಿಲಾ ಮತ್ತು ತಂಡದವರು ಪ್ರಾರ್ಥಿಸಿದರು. ಕಾಲೇಜಿನ ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ದಿನಕರ ಅಂಚನ್ ಸ್ವಾಗತಿಸಿದರು. ವೇದಿಕೆಯಲ್ಲಿ ಕಾರ್ಯಕ್ರಮಾಧಿಕಾರಿ ಶಶಿಪ್ರಭಾ ಬಿ ಉಪಸ್ಥಿತರಿದ್ದರು. ಸ್ವಯಂಸೇವಕರಾದ ಧೀರಜ್ ವಂದಿಸಿ, ಸಹನಾ ಪಿ ಜಿ ಕಾರ್ಯಕ್ರಮ ನಿರೂಪಿಸಿದರು.

(ಉಪಯುಕ್ತ ನ್ಯೂಸ್)

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ಉಪಯುಕ್ತ ನ್ಯೂಸ್ ಸಿಗ್ನಲ್‌ ಗ್ರೂಪಿಗೆ ಜಾಯಿನ್ ಆಗಲು ಈ ಲಿಂಕ್‌ ಬಳಸಿ

Related posts

ಆದ್ಯಪಾಡಿ ದೇವಸ್ಥಾನ ಆವರಣದಲ್ಲಿ ಇಂದು ಸಂಜೆ ಸಿಐಎಸ್‌ಎಫ್‌ ಸ್ವಚ್ಛತಾ ಅಭಿಯಾನ

Upayuktha

ಅಬ್ಬಕ್ಕನ ಅಸ್ಮಿತೆಯನ್ನು ಹುಡುಕುವ ಕೆಲಸವಾಗಲಿ: ಡಾ.ಎಂ. ಕೊಟ್ರೇಶ್

Upayuktha

ಕಡಬ ಸಮೀಪ ನಾಯಿಯನ್ನು ಬೆನ್ನಟ್ಟಿ ಬಂದು ಟಾಯ್ಲೆಟ್‌ ಒಳಗೆ ಬಂದಿಯಾದ ಚಿರತೆ, ಅರಣ್ಯ ಸಿಬ್ಬಂದಿಗಳಿಂದ ರಕ್ಷಣೆ

Upayuktha