ಜಿಲ್ಲಾ ಸುದ್ದಿಗಳು

ಜಿಲ್ಲಾ ಗೃಹರಕ್ಷಕ ದಳ ಕಛೇರಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ ಕಛೇರಿ ಮೇರಿಹಿಲ್, ಮಂಗಳೂರು ಇಲ್ಲಿ ಇಂದು ಬೆಳಗ್ಗೆ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರು ಮತ್ತು ಪೌರರಕ್ಷಣಾ ತಂಡದ ಮುಖ್ಯಪಾಲಕರಾದ ಡಾ|| ಮುರಲೀಮೋಹನ ಚೂಂತಾರು ಇವರು ಧ್ವಜಾರೋಹಣ ನೆರವೇರಿಸಿ ಗೃಹರಕ್ಷಕರನ್ನು ಉದ್ದೇಶಿಸಿ ಮಾತನಾಡಿದರು.

ಮಹಾತ್ಮಾಗಾಂಧಿ, ಸರ್ದಾರ್ ಪಟೇಲ್, ಸುಭಾಸ್‍ಚಂದ್ರ ಬೋಸ್ ಮುಂತಾದ ಮಹನೀಯರ ತ್ಯಾಗ ಬಲಿದಾನದಿಂದ ನಮಗೆ 73 ವರ್ಷಗಳ ಹಿಂದೆ ಬ್ರಿಟಿಷರಿಂದ ಸ್ವಾತಂತ್ರ್ಯ ದೊರಕಿದೆ. ನಮಗೆ ದೊರೆತ ಸ್ವಾತಂತ್ರ್ಯವನ್ನು ಸ್ವೇಚ್ಛಾಚಾರ ಎಂದು ಯುವಜನರು ತಿಳಿದುಕೊಂಡು ತಪ್ಪು ದಾರಿ ಹಿಡಿಯಬಾರದು. ದೇಶದ ಆಸ್ತಿ-ಪಾಸ್ತಿ ಮತ್ತು ಸಂಪನ್ಮೂಲಗಳನ್ನು ರಕ್ಷಿಸುವ ಕೆಲಸವನ್ನು ಪ್ರತಿಯೊಬ್ಬ ಪ್ರಜೆಯೂ ಮಾಡಬೇಕು ಎಂದು ಸಮಾದೇಷ್ಟರು ನುಡಿದರು.

74ನೇಯ ಈ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆಯ ಜೊತೆಗೆ ನಾವೆಲ್ಲರೂ ನಮ್ಮ ಜವಾಬ್ದಾರಿಗಳನ್ನು ಅರಿತು ನಿಭಾಯಿಸಿದಲ್ಲಿ ಬಲಿಷ್ಠ ಭಾರತದ ನಿರ್ಮಾಣ ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಅತಿಥಿಗಳಾಗಿ ಆಗಮಿಸಿದ ಗುರುರಾಜ್ ರವರು ಮಾತನಾಡಿ ನಾವು ಇಂದು ಆಚರಿಸುತ್ತಿರುವ ಸಂಭ್ರಮದ ಈ ಸ್ವಾತಂತ್ರ್ಯೋತ್ಸವಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಹಿರಿಯರ ಬಲಿದಾನ, ತ್ಯಾಗವೇ ಕಾರಣವಾಗಿದೆ ಮತ್ತು ದೇಶ ಸೇವೆ ಮಾಡುವುದನ್ನು ನಮ್ಮ ಜೀವನದಲ್ಲಿ ಎಲ್ಲರೂ ಅಳವಡಿಸಿಕೊಳ್ಳೋಣ ಎಂದು ನುಡಿದರು.

ಈ ಸಂದರ್ಭದಲ್ಲಿ ಉಪಸಮಾದೇಷ್ಟರಾದ ರಮೇಶ್ ರವರು 74ನೇ ಸ್ವಾತಂತ್ಯೋತ್ಸವದಂದು ಗೃಹರಕ್ಷಕರಿಗೆಲ್ಲ ಶುಭಾಶಯವನ್ನು ಕೋರಿದರು ಮತ್ತು ಕೋವಿಡ್-19 ಕೋರಿಯರ್ಸ್ ಆಗಿ ದುಡಿದ ಗೃಹರಕ್ಷಕರಿಗೆಲ್ಲರಿಗೂ ಅಭಿನಂದನೆಯನ್ನು ಸಲ್ಲಿಸಿದರು. ಸ್ವಾತಂತ್ರ್ಯ ದಿನಾಚರಣೆ ಮಹತ್ವದ ಬಗ್ಗೆ ಕು. ನಿಧಿಯವರು ಸ್ವಾತಂತ್ರ್ಯೋತ್ಸವದ ಬಗ್ಗೆ ಮಾತನಾಡಿದರು.

ಈ ಸಂದರ್ಭದಲ್ಲಿ ಪ್ರಥಮ ದರ್ಜೆ ಸಹಾಯಕಿ ಅನಿತಾ ಟಿ.ಎಸ್., ಗೃಹರಕ್ಷಕ ದಳ ಮಂಗಳೂರು ಘಟಕದ ಘಟಕಾಧಿಕಾರಿ ಮಾರ್ಕ್‍ಶೆರ್, ಪುತ್ತೂರು ಘಟಕದ ಘಟಕಾಧಿಕಾರಿ ಅಭಿಮನ್ಯು ರೈ, ಹಿರಿಯ ಗೃಹರಕ್ಷಕರಾದ ರಮೇಶ್ ಭಂಡಾರಿ, ರಾಜಶ್ರೀ ಮತ್ತು ಗೃಹರಕ್ಷಕ/ಗೃಹರಕ್ಷಕಿಯರು ಉಪಸ್ಥಿತರಿದ್ದರು.

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

 

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್  App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Related posts

ಬದಿಯಡ್ಕ ಶ್ರೀ ಭಾರತೀ ವಿದ್ಯಾಪೀಠದ ಮಕ್ಕಳಿಂದ ಮನೆಗಳಲ್ಲೇ ಪರಿಸರ ದಿನಾಚರಣೆ

Upayuktha

ನಾಗರ ಪಂಚಮಿ‌ ದಿನ ಸುಬ್ರಹ್ಮಣ್ಯದಲ್ಲಿ ನಾಗರ ಹಾವು ಪ್ರತ್ಯಕ್ಷ

Harshitha Harish

ತಾಳಗುಪ್ಪ- ಬೆಂಗಳೂರು ರಾತ್ರಿ ರೈಲು ಸಂಚಾರ ವಿಸ್ತರಣೆ, ಜ.20ರಿಂದ ಮೈಸೂರು ಇಂಟರ್‌ಸಿಟಿ ಸಂಚಾರ ಆರಂಭ

Upayuktha