ದೇಶ-ವಿದೇಶ ಪ್ರಮುಖ

ಕೋವಿಡ್ -19: ಭಾರತದಲ್ಲಿ 15 ಲಕ್ಷ ಸಮೀಪಿಸಿದ ಸೋಂಕಿತರ ಸಂಖ್ಯೆ

ಹೊಸದಿಲ್ಲಿ: ಭಾರತದಲ್ಲಿ ಕೋವಿಡ್ -19 ಸೋಂಕಿತರ ಪಟ್ಟಿ ಕ್ಷಣಕ್ಷಣಕ್ಕೂ ಬೆಳೆಯುತ್ತಿದ್ದು, ಮಂಗಳವಾರ ಅದು 15 ಲಕ್ಷ ಸಮೀಪಿಸಿದೆ. ಜಗತ್ತಿನ ಸೋಂಕಿತರ ಪಟ್ಟಿಯಲ್ಲಿ ಭಾರತ 3ನೇ ಸ್ಥಾನದಲ್ಲಿ ಮುಂದುವರಿದಿದೆ.

ಮಂಗಳವಾರ ಸಂಜೆಯ ವೇಳೆ ವರೆಗೆ ದೇಶದಲ್ಲಿ 14,84,136 ಮಂದಿಗೆ ಕೋವಿಡ್ -19 ಸೋಂಕು ತಗಲಿದೆ. ಇದು ವರೆಗೆ 33,461 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. 9,54,004 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, 4,96,671 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ 8,944 ಸೋಂಕಿತರ ಸ್ಥಿತಿ ಗಂಭೀರವಾಗಿದೆ.

ಜಗತ್ತಿನಲ್ಲಿ ಮಂಗಳವಾರ ಸಂಜೆ ವೇಳೆಗೆ ವಿಶ್ವದಲ್ಲಿ 1,66,67,871 ಮಂದಿಗೆ ವೈರಸ್ ತಗಲಿರುವುದು ಖಚಿತಗೊಂಡಿದೆ.

ಇದೇ ವೇಳೆ 6,56,987 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಆದರೆ ಸ್ವಲ್ಪ ನಿಟ್ಟುಸಿರು ಬಿಡುವ ಸಂಗತಿಯೆಂದರೆ ಈ ವರೆಗೆ 1,02,59,669 ಕೋವಿಡ್- 19 ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂಬುದಾಗಿದೆ. 57,51,215 ಮಂದಿ ಜಗತ್ತಿನ ವಿವಿಧ ರಾಷ್ಟ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ 56,84,635 ಮಂದಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, 66,580 ಸೋಂಕಿತರ ಸ್ಥಿತಿ ತೀರಾ ಚಿಂತಾಜನಕವಾಗಿದೆ.

ಸೋಂಕಿತರ ಪಟ್ಟಿಯಲ್ಲಿ ಅಮೇರಿಕ ಮೊದಲ ಸ್ಥಾನದಲ್ಲಿ ಮುಂದುವರಿದಿದ್ದು, ಅಲ್ಲಿ ಈ ವರೆಗೆ 44,33,410 ಕೊರೊನಾ ವೈರಸ್ ಪ್ರಕರಣ ಕಂಡುಬಂದಿದೆ. 1,50,448 ಮಂದಿ ಮರಣ ಹೊಂದಿದ್ದು, 21,36,603 ಮಂದಿ ಚೇತರಿಸಿಕೊಂಡಿದ್ದಾರೆ. 21,46,359 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, 19,100 ಮಂದಿ ಸೋಂಕಿತರು ಅಪಾಯಕಾರಿ ಸ್ಥಿತಿಯಲ್ಲಿದ್ದಾರೆ.

ಸೋಂಕಿತರ ಪಟ್ಟಿಯಲ್ಲಿ ಬ್ರೆಜಿಲ್ 2ನೇ ಸ್ಥಾನದಲ್ಲಿದ್ದು, ಅಲ್ಲಿ ಈ ವರೆಗೆ 24,46,397 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. 87,737 ಮಂದಿ ಸಾವನ್ನಪ್ಪಿದ್ದು, 16,67,667 ಮಂದಿ ಗುಣಮುಖರಾಗಿದ್ದಾರೆ. 6,90,993 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 8,318 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಲ್ಲಿನ ಆರೋಗ್ಯ ಸಚಿವಾಲಯ ತಿಳಿಸಿದೆ.

 

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

 

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

 

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

 

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

 

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

 

ನಿಮ್ಮ ಮೆಚ್ಚಿನ ಉಪಯುಕ್ತ ನ್ಯೂಸ್ ಈಗ ಗೂಗಲ್ ನ್ಯೂಸ್  App ನಲ್ಲೂ ಲಭ್ಯ. ಈ ಲಿಂಕ್ ಕ್ಲಿಕ್ ಮಾಡಿ ಫಾಲೋ ಮಾಡಿ.

Related posts

‘ಡಿಜಿಟಲ್ ಅಮಲು’ ಇಳಿಸೋದು ಹೇಗೆ…?

Upayuktha

ಗಾಂಧಿ ಚಿಂತನೆಗಳ ಪ್ರಸ್ತುತತೆ: 23ರಂದು ಸೇಂಟ್ ಆಗ್ನೆಸ್ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರಸಂಕಿರಣ 

Upayuktha

ಗಾಳಿಯಿಂದ ಹರಡುವ ಸಾಂಕ್ರಾಮಿಕ ರೋಗ ತಡೆಗೆ ಕರವಸ್ತ್ರ ಬಳಸಿ: ಡಾ. ನಾರಾಯಣ ಪ್ರದೀಪ

Upayuktha
error: Copying Content is Prohibited !!