ದೇಶ-ವಿದೇಶ ಪ್ರಮುಖ

ಕೊರೊನಾ: ಭಾರತದಲ್ಲಿ ಸಾವಿನ ಸಂಖ್ಯೆ ದಿಢೀರ್ ಏರಿಕೆ

ಹೊಸದಿಲ್ಲಿ: ಕೊರೊನಾ ವೈರಸ್ ಸಾಂಕ್ರಾಮಿಕದಿಂದಾಗಿ ಸಾವಿಗೀಡಾಗುತ್ತಿರುವವರ ಸಂಖ್ಯೆ ದೇಶದಲ್ಲಿ ದಿಢೀರ್ ಏರಿಕೆಯಾಗುತ್ತಿದೆ. ಆರಂಭದಲ್ಲಿ ಸಾವಿನ ಸಂಖ್ಯೆ ಸಾವಿರದ ಗಡಿ ತಲುಪಲು ಸುಮಾರು 48 ದಿನ ತೆಗೆದುಕೊಂಡಿತ್ತು. ಆದರೆ ಈಗ ಕೇವಲ ನಾಲ್ಕೇ ದಿನಗಳಲ್ಲಿ ಸುಮಾರು 900 ಮಂದಿ ಮೃತಪಟ್ಟಿರುವುದು ಆರೋಗ್ಯ ಸಚಿವಾಲಯದ ಅಂಕಿ ಅಂಶಗಳಿಂದ ತಿಳಿದು ಬಂದಿದೆ.

ಒಟ್ಟು ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ. ಆರೋಗ್ಯ ಸಚಿವಾಲಯ ಕೊರೊನಾ ಅಂಕಿ-ಅಂಶಗಳನ್ನು ಪ್ರಕಟಿಸಲು ಆರಂಭಿಸಿದ ಬಳಿಕ 87 ದಿನಗಳಲ್ಲಿ, ಅಂದರೆ ಏಪ್ರಿಲ್ 26ರಂದು ಸೋಂಕಿತರ ಸಂಖ್ಯೆ 25000 ಗಡಿ ದಾಟಿತ್ತು. ನಂತರದ ಆರು ವಾರಗಳಲ್ಲಿ 2,26,770ಕ್ಕೆ ಏರಿಕೆಯಾಗಿದೆ.

ಕೊರೊನಾದಿಂದಾಗಿ ದೇಶದಲ್ಲಿ ಮಾರ್ಚ್ 12ರಂದು ಮೊದಲ ಸಾವು ವರದಿಯಾಗಿತ್ತು. ಏಪ್ರಿಲ್ 29ರ ವೇಳೆಗೆ ಸಾವಿನ ಸಂಖ್ಯೆ ಸಾವಿರ ದಾಟಿತ್ತು. ಅದಾಗಿ ಕೆಲವೇ ವಾರಗಳಲ್ಲಿ 6,075 ತಲುಪಿದೆ. ಜೂನ್ ತಿಂಗಳ ಮೊದಲ ನಾಲ್ಕು ದಿನಗಳಲ್ಲಿ ಸುಮಾರು 900 ಮಂದಿ ಮೃತಪಟ್ಟಿದ್ದಾರೆ.

ಸರ್ಕಾರವು ಆರ್ಥಿಕ ಚಟುವಟಿಕೆಗಳಿಗೆ ವಿನಾಯಿತಿ ಹಾಗೂ ಲಾಕ್‌ಡೌನ್ ತೆರವು ಮಾಡುತ್ತಿದ್ದಂತೆ ಸೋಂಕಿತರ ಮತ್ತು ಸಾವಿಗೀಡಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕ ಮೂಡಿಸಿದೆ.

ಲಾಕ್‌ಡೌನ್ ತೆರವಿನ ಮೊದಲ ಹಂತದಲ್ಲಿ ಶಾಪಿಂಗ್ ಮಾಲ್‌ಗಳು, ಧಾರ್ಮಿಕ ಕ್ಷೇತ್ರಗಳು, ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳ ತೆರೆಯುವಿಕೆಗೆ ಅವಕಾಶ ನೀಡಿ ಸರ್ಕಾರವು ಇತ್ತೀಚೆಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಇದೇ ಎಂಟರಿಂದ ಹೊಸ ಮಾರ್ಗಸೂಚಿ ಅನುಷ್ಠಾನಕ್ಕೆ ಬರಲಿದೆ. ಮಾಸ್ಕ್ ಧರಿಸಿದವರಿಗೆ ಮಾತ್ರ ಪ್ರವೇಶ, ಕಡ್ಡಾಯ ತಾಪಮಾನ ತಪಾಸಣೆ ಇತ್ಯಾದಿ ನಿಯಮಗಳನ್ನು ರೂಪಿಸಲಾಗಿದ್ದರೂ ಸೋಂಕು ಹರಡುವಿಕೆ ಹೆಚ್ಚಾಗುವ ಭೀತಿ ಎದುರಾಗಿದೆ.

ನಿರ್ಬಂಧಗಳನ್ನು ತೆರವುಗೊಳಿಸುವುದರಿಂದ ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಹಠಾತ್ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಆರೋಗ್ಯ ಕ್ಷೇತ್ರದ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.

(ಉಪಯುಕ್ತ ನ್ಯೂಸ್)

ಉಪಯುಕ್ತ ನ್ಯೂಸ್‌ App ಈಗ ಲಭ್ಯ. ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ ಮಾಡಿ

ನಿಮ್ಮೂರಿನ ತಾಜಾ ಸುದ್ದಿಗಳಿಗಾಗಿ ಭೇಟಿ ನೀಡಿ: upayuktha.com

‘ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಟ್ವಿಟರ್‌ನಲ್ಲಿ ಉಪಯುಕ್ತ ನ್ಯೂಸ್ ಫಾಲೋ ಮಾಡಿ

ಯೂಟ್ಯೂಬ್‌ನಲ್ಲಿ ಉಪಯುಕ್ತ ನ್ಯೂಸ್ ವೀಕ್ಷಿಸಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

ಟೆಲಿಗ್ರಾಂ ಬ್ರಾಡ್‌ಕಾಸ್ಟ್‌ ಮೂಲಕ ಉಪಯುಕ್ತ ನ್ಯೂಸ್‌ ಪಡೆಯಲು ಈ ಲಿಂಕ್ ಕ್ಲಿಕ್ ಮಾಡಿ.

Related posts

ಗ್ರಂಥಾಲಯಗಳು ಶೀಘ್ರ ಆಧುನೀಕರಣಗೊಳ್ಳಲಿ: ಗ್ರಂಥಾಲಯ ಸಪ್ತಾಹ ಉದ್ಘಾಟಿಸಿ ಡಾ. ಪೆರ್ಲ ಆಶಯ

Upayuktha

ಸಿಎಎ ಪ್ರತಿಭಟನೆ ಹಿನ್ನೆಲೆ: ನಾಳೆ ಮಂಗಳೂರು-ಬೆಂಗಳೂರು ಹೆದ್ದಾರಿ ಸಂಚಾರ ಬದಲಾವಣೆ

Upayuktha

ಅಯೋಧ್ಯೆ ವಿಚಾರಣೆ ಪೂರ್ಣ: ತೀರ್ಪು ಕಾದಿರಿಸಿದ ಸುಪ್ರೀಂ ಕೋರ್ಟ್

Upayuktha