ಮಂಗಳೂರು:- ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮ್ಯಾನುವೆಲ್ ಸ್ಕ್ಯಾವೆಂಜರ್ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ 2013ರಂತೆ ಜಿಲ್ಲಾ ಮಟ್ಟದ ಸಮಿತಿಯನ್ನು ರಚಿಸಲು ಪೌರ ಕಾರ್ಮಿಕರ ಸಂಘದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾರ್ಚ್ 5 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್ ಕಟ್ಟಡ, ಉರ್ವಸ್ಟೋರ್ಸ್, ಅಶೋಕನಗರ ಅಂಚೆ, ಮಂಗಳೂರು-575006, ದೂರವಾಣಿ ಸಂಖ್ಯೆ:0824-2451237 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೌಲ್ಯವರ್ಧಿತ ಉತ್ಪನ್ನ ತಯಾರಿಸಲು ಆಸಕ್ತರಿಂದ ಅರ್ಜಿ ಆಹ್ವಾನ
ಮಂಗಳೂರು, ಮಾರ್ಚ್ 02 (ಕರ್ನಾಟಕ ವಾರ್ತೆ):- ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರದ ಕೊೈಲಾದಲ್ಲಿ 300 ಮಲೆನಾಡು ಗಿಡ್ಡ ಹಸುಗಳಿಂದ ಉತ್ಪತ್ತಿಯಾಗುವ ಗೋಮೂತ್ರ ಹಾಗೂ ಹಸಿ ಸೆಗಣಿಯಿಂದ ರಾಷ್ಟ್ರೀಯ ಗೋಕುಲ್ ಮಿಶನ್ ಮುಂದುವರಿದ ಭಾಗವಾಗಿ ಮೌಲ್ಯವರ್ಧಿತ ಉತ್ಪನ್ನ ತಯಾರಿಸಲು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕರ ಕಛೇರಿ, ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರ, ಕೊೈಲ ಕಛೇರಿಯ ಮೊ. ಸಂಖ್ಯೆ: 9141010017 ಹಾಗೂ www.lbtckoila@gmail.com ನ್ನು ಸಂಪರ್ಕಿಸಬಹುದು ಎಂದು ಜಾನುವಾರು ಸಂವರ್ಧನಾ ಮತ್ತು ತರಬೇತಿ ಕೇಂದ್ರದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
(ಉಪಯುಕ್ತ ನ್ಯೂಸ್)
‘ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
ಉಪಯುಕ್ತ ನ್ಯೂಸ್ ಸಿಗ್ನಲ್ ಗ್ರೂಪಿಗೆ ಜಾಯಿನ್ ಆಗಲು ಈ ಲಿಂಕ್ ಬಳಸಿ